ಜಾತಿ ಪ್ರಮಾಣ ಪತ್ರ ಗೊಂದಲ ನಿವಾರಣೆಗೆ ಕ್ರಮ
Team Udayavani, Sep 24, 2018, 5:00 PM IST
ಬಳ್ಳಾರಿ: ಹೂಗಾರ ಸಮುದಾಯಕ್ಕೆ 2ಎ ಪ್ರಮಾಣ ಪತ್ರ ನೀಡುವಲ್ಲಿ ಇರುವ ಗೊಂದಲಗಳ ಬಗ್ಗೆ ಕೂಡಲೇ ಸಂಬಂಧಪಟ್ಟ ಮೇಲ ಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಶಾಸಕಜಿ.ಸೋಮಶೇಖರರೆಡ್ಡಿ ಭರವಸೆ ನೀಡಿದರು.
ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅಖೀಲ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಜಿಲ್ಲಾ ಘಟಕದಿಂದ ಭಾನುವಾರ ಏರ್ಪಡಿಸಲಾಗಿದ್ದ ಸರ್ವ ಸದಸ್ಯರ 7ನೇ ವಾರ್ಷಿಕ ಮಹಾಸಭೆ ಹಾಗೂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೂಗಾರ ಸಮುದಾಯ 2ಎ ಮೀಸಲಾತಿಯಡಿ ಬರುತ್ತದೆ. ಜಾತಿ ಪ್ರಮಾಣ ಪತ್ರ ವಿತರಿಸುವಲ್ಲಿ ತಹಶೀಲ್ದಾರ್‌ರು ಸೃಷ್ಟಿಸುತ್ತಿರುವ ಗೊಂದಲಗಳ ಬಗ್ಗೆ ನನ್ನ ಗಮನಕ್ಕಿಲ್ಲ. ಸರ್ಕಾರದ ಮೀಸಲಾತಿ ಆದೇಶದಂತೆ ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ವಿತರಿಸಬೇಕು. ಈ ಕುರಿತು ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ, ಇರುವ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಇನ್ನು ಸಮುದಾಯದಲ್ಲಿ ವಸತಿ ರಹಿತ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿದಲ್ಲಿ ನಗರ ಹೊರವಲಯದ ಮುಂಡ್ರಿಗಿ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳನ್ನು ವಿತರಿಸಲಾಗುವುದು. ಅನರ್ಹರಿಗೆ ಅವಕಾಶವಿಲ್ಲ.
ಈಗಾಗಲೇ ಮುಂಡ್ರಿಗಿಯಲ್ಲಿ 5616 ಮನೆಗಳ ನಿರ್ಮಾಣಕೆಕ ಟೆಂಡರ್ ಕರೆಯಲಾಗಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 19 ಕೋಟಿ ರೂ. ವೆಚ್ಚದಲ್ಲಿ ಜಮೀನು ಖರೀದಿಸಲಾಗಿದ್ದು, ಇದೀಗ 300 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದ ಶಾಸಕ ಸೋಮಶೇಖರರೆಡ್ಡಿ, ಹೂ ಮಾರಾಟಕ್ಕೆ ನಿಗದಿತ ಸ್ಥಳ, ಮಾರುಕಟ್ಟೆ ನಿರ್ಮಾಣಕ್ಕೆ ಬೇಡಿಕೆಯಿದೆ. ಶೀಘ್ರದಲ್ಲೇ ಅದಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಹೂಗಾರ ಮಹಾಸಭಾದ ಜಿಲ್ಲಾಧ್ಯಕ್ಷ ಜಿ.ಗುರುಲಿಂಗಪ್ಪ ಮಾತನಾಡಿ, ಸಮುದಾಯದವರು ಆರ್ಥಿಕ, ಸಾಮಾಜಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸಬೇಕು. ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.
ಕಸಾಪ ಜಿಲ್ಲಾಧ್ಯಕ್ಷ ಸಿದ್ಧರಾಮ ಕಲ್ಮಠ ಮಾತನಾಡಿ, ಹೂಗಾರ ಸಮುದಾಯದವರ ಮನಸ್ಸು ಹೂವಿನಂತೆ. ಎಲ್ಲ ಸಮುದಾಯದವರನ್ನು ಸಮಾನವಾಗಿ ಸ್ವೀಕರಿಸುತ್ತಾರೆ. ಯಾವತ್ತೂ ಜಾತಿ ಭೇದ ಮಾಡೋಲ್ಲ. ಸಣ್ಣ ಸಮುದಾಯವೆಂದು ಬೇಡಿಕೆ ಸಲ್ಲಿಸದಿದ್ದರೇ ಯಾರೂ ನಮ್ಮನ್ನು ಗುರುತಿಸುವುದಿಲ್ಲ. ಇಲ್ಲಿವರೆಗೆ ಎಲ್ಲ ಸರ್ಕಾರಗಳು ಪ್ರತಿಯೊಂದು ಸಮುದಾಯದ ಅಭಿವೃದ್ಧಿಗಾಗಿ ಮಂಡಳಿ ರಚಿಸಿದೆ. ಆದರೆ ಹೂಗಾರ ಸಮುದಾಯಕ್ಕೆ ರಚನೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿ ಹೋರಾಟದ
ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದರು.
ಎಮ್ಮಿಗನೂರು ಹಂಪಿ ಸಾವಿರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಕ್ಯಾದಿಗೆಹಾಳ್ ಶಿವಲಿಂಗಪ್ಪ ತಾತ, ಕುರೇಕೋಪ್ಪದ ಎಚ್.ಎಂ.ಶರಣ ಬಸಯ್ಯ ಸ್ವಾಮೀಜಿ, ಉರವಕೊಂಡದ ಡಾ| ಕರಿಬಸವರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಮಹಾಸಭಾದ ಜಿಲ್ಲಾ ಗೌರವಾಧ್ಯಕ್ಷ ರಾಮಲಿಂಗಪ್ಪ ಹೂಗಾರ, ಮುಖಂಡರಾದ ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಜಿ.ಪಂಪಾಪತಿ, ಗುರುಮೂರ್ತಿ, ಶ್ರೀಧರ್, ಜೆ.ರುದ್ರಪ್ಪ, ವಿಶ್ವನಾಥ್ ಇದ್ದರು. ಮಹಾ ಸಭಾದ ಪ್ರಧಾನ ಕಾರ್ಯದರ್ಶಿ ಬಿ.ಈಶ್ವರಪ್ಪ ಹೂಗಾರ ಅವರು ಮಹಾಸಭೆಯ ವಾರ್ಷಿಕ ವರದಿ ಮಂಡಿಸಿದರು. ಜಿ.ಮಲ್ಲಿಕಾರ್ಜುನ, ಟಿ.ಎಂ.ಬಸವರಾಜ್ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.