ಜನಪರ ಮರಳು ನೀತಿ ಜಾರಿಯಾಗಲಿ
Team Udayavani, Mar 8, 2019, 6:51 AM IST
ಕಂಪ್ಲಿ: ತಾಲೂಕಿನಲ್ಲಿ ಸಮರ್ಪಕವಾಗಿ ಮರಳು ಸಿಗದೆ ಸ್ವತ್ಛ ಭಾರತ್ ಯೋಜನೆಯಡಿ ಕೈಗೊಂಡಿರುವ ವೈಯಕ್ತಿಕ ಶೌಚಾಲಯ ನಿರ್ಮಾಣ ಹಾಗೂ ಬಡ ಮದ್ಯಮ ವರ್ಗದವರಿಗೆ ಮನೆ ನಿರ್ಮಿಸಿಕೊಳ್ಳಲು ತೊಂದರೆಯಾಗಿದ್ದು, ಕೂಡಲೇ ಜನಪರ ಮರಳು ನೀತಿ ಜಾರಿಗೊಳಿಸಬೇಕೆಂದು
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಕಾಂ| ತಿಪ್ಪಯ್ಯ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪದಾಧಿಕಾರಿಗಳು ನಡೆಸಿದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಜನರು ಕೂಲಿ ಕಾರ್ಮಿಕರಾಗಿದ್ದಾರೆ. ನೂತನ ತಾಲೂಕಾಗಿರುವ
ಕಂಪ್ಲಿ ಪಟ್ಟಣವು ವೇಗವಾಗಿ ಬೆಳೆಯುತ್ತಿದೆ. ಆಶ್ರಯಮನೆ, ಶೌಚಾಲಯ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಕಟ್ಟಡ ಕಾರ್ಮಿಕರ ಅಗತ್ಯವಿದೆ. ಕಾರ್ಮಿಕರು ತಮ್ಮ ಉಪ ಜೀವನಕ್ಕೆ ಬಂಡಿಯಲ್ಲಿ ಮರಳು ಸಾಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮರಳು ಬಂಡಿಗಳನ್ನು
ತಡೆ ಹಿಡಿಯುವ ಮೂಲಕ ಕಾರ್ಮಿಕರ ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದಾರೆ. ಲಾರಿ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಬಡವರ ಮೇಲೆ ಕ್ರಮ ಕೈಗೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಬಳಿಕ ತಹಶೀಲ್ದಾರ್ ಶ್ರೀಶೈಲ ವೈ.ತಳವಾರ ಅವರಿಗೆ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್ ಶ್ರೀಶೈಲ ವೈ.ತಳವಾರ ಮಾತನಾಡಿ ಮರಳು ನೀತಿ ರಾಜ್ಯಾದ್ಯಂತ ಏಕರೂಪದಲ್ಲಿದೆ. ಇದನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿದ್ದು, ಕಾರ್ಮಿಕರ ಬೇಡಿಕೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಕಂಪ್ಲಿ ತಾಲ್ಲೂಕು ಪ್ರಧಾನಕಾರ್ಯದರ್ಶಿ ಕಾಂ.ಬಂಡಿ ಬಸವರಾಝ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ
ಕಾರ್ಮಿಕರ ಫೆಡರೇಷನ್ ಕಂಪ್ಲಿ ವಲಯ ಸಮಿತಿ ಅಧ್ಯಕ್ಷ ಐ ಹೊನ್ನೂರಸಾಬ್, ಆರ್.ನಾಗರಾಜ,ಖಜಾಂಚಿ ಎನ್. ರಾಜಾಭಕ್ಷಿ, ಕಾರ್ಮಿಕರಾದ ನೂರ್‌ಸಾಬ್, ಜಮಾಲ್, ಮಂಜು, ಸಿದ್ದಪ್ಪ, ಕೋಟೆ ಹುಸೇನ್‌ಸಾ,ಕೋಟೆ ಗೌಸ್ ,ಸುಂಕಪ್ಪ,ಯಲ್ಲಪ್ಪ, ಭರತ್, ಉಮೇಶ್, ರಾಮ, ರೇಣುಕಪ್ಪ
ಸೇರಿದಂತೆ ಅನೇಕ ಕಾರ್ಮಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.