ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ

Team Udayavani, Mar 27, 2021, 7:41 PM IST

;ಲಕಜಹಗ್

ಕಂಪ್ಲಿ: ಮನುಷ್ಯನಲ್ಲಿರುವ ರಾಕ್ಷಸ ಗುಣಗಳನ್ನು ದಹಿಸಿ ಆತನನ್ನು ಮಹಾದೇವನನ್ನಾಗಿಸುವ ಅಪೂರ್ವ ಸಿದ್ಧಾಂತವನ್ನು ನೀಡಿದ ಜಗದ್ಗುರುಗಳು ಶ್ರೀ ರೇಣುಕಾಚಾರ್ಯರಾಗಿದ್ದಾರೆಂದು ಪಟ್ಟಣದ ಕಲ್ಯಾಣಚೌಕಿ ಮಠದ ಕೆ.ಎಂ. ಬಸವರಾಜ ಶಾಸ್ತ್ರಿಗಳು ತಿಳಿಸಿದರು.

ಅವರು ಪಟ್ಟಣದ ಕಲ್ಯಾಣ ಚೌಕಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಯುಗಮಾನೋತ್ಸವ ಸಮಾರಭಂದಲ್ಲಿ ಲಂಗೋದ್ಬವ ರೇಣುಕಾಚಾರ್ಯರ ಪಂಚಲೋಹದ ಪ್ರತಿಮೆಗೆ ವಿವಿಧ ಅಭಿಷೇಕ, ವೈವಿಧ್ಯಮಯ ಹೂವಿನ ಅಲಂಕಾರ, ಮಹಾಮಂಗಳಾರತಿಯ ನಂತರ ಪುಷ್ಪಾರ್ಚನೆ ಮಾಡಿ ಆಶೀರ್ವಚನ ನೀಡಿ ಮಾತನಾಡಿದರು.

ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ಗೌರವ ಪ್ರಾಚಾರ್ಯ ಎಂ.ಎಸ್‌. ಶಶೀಧರ ಶಾಸ್ತ್ರಿಗಳು ಮಾತನಾಡಿ, ನೆರೆಯ ತೆಲಂಗಾಣ ರಾಜ್ಯದ ಕೊಲ್ಲಿಪಾಕಿ ಸ್ವಯಂಭು ಸೋಮೇಶ್ವರ ಲಿಂಗದಿಂದ ಅವತರಿಸಿದ ಜಗದ್ಗುರು ರೇಣುಕಾಚಾರ್ಯರು ಮಲಯಾಚಲಕ್ಕೆ ಬಂದು ಮಹಾಮುನಿ ಅಗಸ್ತ್ಯ ಶಿವಾದ್ವೈತ ಸಿದ್ಧಾಂತವನ್ನು ಬೋಧಿ  ಸಿದ್ದಾರೆ. ಆ ಸಾರ ಸಂಗ್ರಹವೇ ರೇಣುಕಾಗಸ್ತ್ಯ ಸಂವಾದ ರೂಪದಲ್ಲಿ ರಚಿಸಲ್ಪಟ್ಟ ಶ್ರೀ ಸಿದ್ಧಾಂತ ಶಿಖಾಮಣಿ ಧರ್ಮಗ್ರಂಥವಾಗಿದ್ದು, ಪ್ರತಿಯೊಬ್ಬರೂ ಈ ಧರ್ಮಗ್ರಂಥವನ್ನು ಪಠಣ ಮಾಡಬೇಕೆಂದರು.

ಜೆ.ಎಂ. ಸಿದ್ದರಾಮಶಾಸ್ತ್ರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ನೆರೆದಿದ್ದ ಕೆಲವೇ ಭಕ್ತರು ಜಗದ್ಗುರುಗಳ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿದರು. ಕೊನೆಯಲ್ಲಿ ಪ್ರಸಾದ ವಿತರಣೆ ಜರುಗಿತು. ಕಾರ್ಯಕ್ರಮದಲ್ಲಿ ಕಲ್ಯಾಣಿಚೌಕಿ ಮಠದ ಚನ್ನಮಲ್ಲಶಾಸ್ತ್ರಿ, ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ಘನಮಠದಯ್ಯ ಶಾಸ್ತ್ರಿ, ಪಂಚಯ್ಯಸ್ವಾಮಿ ಬೆನಕ್ನಾಳಮಠ, ಯು.ಎಂ. ವಿದ್ಯಾಶಂಕರ್‌, ಅರವಿ ಅಮರೇಶಗೌಡ, ಮಂಜುನಾಥಗೌಡ, ಪ್ರದೀಪಶಾಸ್ತ್ರಿ, ಜೆ.ಎಂ. ಚನ್ನಬಸವರಾಜ, ಚಂದ್ರಶೇಖರಶಾಸ್ತ್ರಿ, ಹೂಗಾರ ರಮೇಶ್‌, ಕಂಪ್ಲಿ ತಾಲೂಕು ಅರ್ಚಕರ ಮತ್ತು ಪುರೋಹಿತರ ಸಂಘದ ಪದಾ ಧಿಕಾರಿಗಳು,ವೀರಶೈವ ಸಮಾಜದ ಮುಖಂಡರು ಸದ್ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.