ಎಲ್ಲರೂ ಶಿಷ್ಟಮಾರ್ಗದಲ್ಲಿ ಸಾಗೋಣ
Team Udayavani, Jan 13, 2021, 7:57 PM IST
ಸಂಡೂರು: ಪ್ರತಿಯೊಬ್ಬ ವ್ಯಕ್ತಿಯಧಾರ್ಮಿಕ ಭಾವ ಹೊಂದುವ ಮೂಲಕ ಮುಕ್ತಿ ಪಡೆಯಬೇಕು. ಅದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದು ಶಾಸಕ ಈ. ತುಕಾರಾಂ ಅಭಿಪ್ರಾಯಿಸಿದರು.
ಅವರು ತಾಲೂಕಿನ ಮುರಾರಿಪುರ ಗ್ರಾಮದಲ್ಲಿ ನೂತನ ಕೊಲ್ಲಾರಮ್ಮ ದೇವಸ್ಥಾನ ಉದ್ಘಾಟಿಸಿ ಮಾತನಾಡಿ, ದುಷ್ಟ ಸಂಹಾರ ಶಿಷ್ಟ ರಕ್ಷಣೆ ದೇವಿಯ ಪ್ರಮುಖ ಕಾರ್ಯವಾಗಿದ್ದು ನಾವು ಇಂದು ನೂತನ ದೇವಸ್ಥಾನದ ಸ್ಥಾಪಿಸುವುದರ ಜೊತೆಗೆ ದುಷ್ಟ ಗುಣಗಳನ್ನು ಸಂಹಾರ ಮಾಡಿಕೊಂಡು ಶಿಷ್ಟ ಮಾರ್ಗದಲ್ಲಿ ಸಾಗೋಣ. ಸಮಾಜದಲ್ಲಿ ಪ್ರತಿಯೊಂದು ಮಗುವು ಸಹ ಶಿಕ್ಷಣ ಪಡೆಯುವ ಮೂಲಕ ಮನದಲ್ಲಿಯ ದುಷ್ಟಗುಣ ದೂರವಾಗುತ್ತವೆ. ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿ ಸುವುದರ ಜೊತೆಗೆ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಯನ್ನು ಸಾಧಿಸಿ ನಮ್ಮ ಮನದಲ್ಲಿಯ ಮೌಡ್ಯಗಳನ್ನು ದೂರಮಾಡಿಕೊಳ್ಳೋಣ. ಈ ದೇವಸ್ಥಾನ ಬರೀ ಒಬ್ಬರ ಆಸ್ತಿಯಲ್ಲ. ಸಮಾಜದ ಆಸ್ತಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಹ ಇದನ್ನು ಸ್ವತ್ಛವಾಗಿಡುವ ಕಾರ್ಯವನ್ನು, ರಕ್ಷಿಸುವ ಕೆಲಸವನ್ನು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖಂಡ ಬಿ.ಜಿ. ಸಿದ್ದೇಶ್ ಅವರು ಮಾತನಾಡಿ ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಶ್ರದ್ಧಾಕೇಂದ್ರಗಳು, ಇದರಿಂದ ನಮ್ಮ ಮನದಲ್ಲಿಯ ಮಲೀನ, ಮೌಡ್ಯತೆ ತೊಡೆದು ಹಾಕಿ ನೆಮ್ಮದಿಯ ಬದುಕನ್ನು ಸಾಗಿಸೋಣ ಎಂದರು. ಕಾರ್ಯಕ್ರಮದಲ್ಲಿ ಮಹಿಳೆಯರು ಗಂಗೆ ತರುವ ಮೂಲಕ ದೇವಿಯ ಎಲ್ಲ ಪ್ರತಿಷ್ಠಾಪನಾ ವಿಧಿವಿಧಾನಗಳನ್ನು ನೆರವೇರಿಸಿದರು. ಇಡೀ ಗ್ರಾಮವೇ ದೇವಿಯ ದರ್ಶನಕ್ಕೆ ಆಗಮಿಸಿ, ಪೂಜಿಸಿ ದೇವಿ ಕೃಪೆಗೆ ಪಾತ್ರರಾದರು. ಸಾಮೂಹಿಕ ದಾಸೋಹ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಗ್ರಾಮದ ಮುಖಂಡರಾದ ಅನಂದಪ್ಪ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.