ಗ್ರಾಮದೇವತೆ ಜಾತ್ರೋತ್ಸವ; ಪ್ರಾಣಿ ಬಲಿ ನಿಷೇಧ
ಪ್ರಾಣಿ ಬಲಿ ಕೊಡುವುದು ಕಂಡು ಬಂದಲ್ಲಿ ಕಾನೂನು ಕ್ರಮ
Team Udayavani, Mar 12, 2022, 2:52 PM IST
ಕಾನಾಹೊಸಹಳ್ಳಿ: ಮಾರ್ಚ್ 15ರಂದು ನಡೆಯುವ ಕಾನಾಹೊಸಹಳ್ಳಿ ಪಟ್ಟಣದ ಗ್ರಾಮ ದೇವತೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿಯನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಪ್ರಾಣಿ ಬಲಿ ಕೊಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಟ್ಟೂರು ಸಿಪಿಐ ಸೋಮಶೇಖರ ಕೆಂಚರೆಡ್ಡಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶ್ರೀ ಮಾರಿಕಾಂಬ ದೇವಿಯ ರಥೋತ್ಸವ ಹಾಗೂ ಜಾತ್ರೆಯ ಪ್ರಯುಕ್ತ ಶುಕ್ರವಾರ ಸಂಜೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾತ್ರೆ ನಡೆಯುವ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯ್ತಿ ಪಿಡಿಒ ನಿಂಗಪ್ಪ ಅವರಿಗೆ ಸೂಚಿಸಿದರು.
ಬೆಲೆ ಬಾಳುವ ವಸ್ತುಗಳು ಹಾಗೂ ಆಭರಣಗಳನ್ನು ಜನರು ಜನ ಸಂದಣಿ ಪ್ರದೇಶದಲ್ಲಿ ಧರಿಸಿಕೊಂಡು ಬರಬೇಡಿ. ಕೋವಿಡ್ ನಿಯಮ ಕಡ್ಡಾಯವಾಗಿ ಅನುಸರಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು. ನಂತರ ರಥೋತ್ಸವ ಹಾಗೂ ಚೌಕಿ ಸ್ಥಳವನ್ನು ಪರಿಶೀಲಿಸಿ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಪಿಎಸ್‌ಐ ತಿಮ್ಮಣ್ಣ ಚಾಮನೂರು, ನಾಗ ರತ್ನಮ್ಮ, ಪಿಡಿಒ ನಿಂಗಪ್ಪ ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.