ಕೆರೆಗಳಿಗೆ ನೀರುಣಿಸುವ ಯೋಜನೆ ಪ್ರಕಟ: ವಿಜಯೋತ್ಸವ
Team Udayavani, Feb 11, 2019, 8:32 AM IST
ಕೊಟ್ಟೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕೊಟ್ಟೂರು ಕೆರೆ ಸೇರಿದಂತೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ 12 ಕೆರೆಗಳಿಗೆ ನೀರುಣಿಸುವ 85 ಕೋಟಿ ರೂ. ವೆಚ್ಚದ ಯೋಜನೆ ಪ್ರಕಟಿಸಿದ್ದನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಬೈಕ್ ರ್ಯಾಲಿ ಮೂಲಕ ವಿಜಯೋತ್ಸವ ಆಚರಿಸಿದರು.
ಬೀದಿ ಬದಿಯ ವ್ಯಾಪಾರ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಎಸ್. ಭಿಮಾನಾಯ್ಕ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೀದಿ ಬದಿಯ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ಮಂಜೂರು ಮಾಡಲು ಸಹಕಾರಿ ಬ್ಯಾಂಕ್‌ಗಳಿಗೆ ಸೂಚಿಸಿದ್ದರು. ಅದರಂತೆ ಪಟ್ಟಣದ ಬಿಡಿಸಿಸಿ ಬ್ಯಾಂಕ್ ಬೀದಿ ಬದಿಯ ಅರ್ಹ ವ್ಯಾಪಾರಿಗಳಿಗೆ ಕಳೆದ 2 ತಿಂಗಳಲ್ಲಿ 125 ಫಲಾನುಭವಿಗಳಿಗೆ ಬಡ್ಡಿ ರಹಿತ 2,000ರಿಂದ 10,000 ರೂ. ಸಾಲ ಮಂಜೂರು ಮಾಡಿದೆ ಎಂದರು.
ಬೀದಿ ಬದಿಯ ವ್ಯಾಪಾರಸ್ಥರಿಗೆ ಮೀಟರ್ ಬಡ್ಡಿಗೆ ಸಾಲ ಪಡೆದು ಅದನ್ನು ತೀರಿಸಲಾಗದೆ ಹಿಂದುಳಿದಿದ್ದರು. ಅಂತಹ ವ್ಯಾಪಾರಿಗಳನ್ನು ಗುರುತಿಸಿ ಬಡ್ಡಿ ಇಲ್ಲದೆ ಸಾಲ ಮಂಜೂರು ಮಾಡಲಾಗಿದೆ. ಇದರು ಮೀಟರ್ ಬಡ್ಡಿಗೆ ಕಡಿವಾಣ ಹಾಕಿದಂತಾಗಿದೆ ಎಂದು ಹೇಳಿದರು.
ಹೊಸಪೇಟೆ ಕೇಂದ್ರ ಬಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಗುಂಡುಮಣುಗು ತಿಪ್ಪೇಸ್ವಾಮಿ, ಎಂ. ಗುರುಸಿದ್ಧನಗೌಡ, ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ್, ತಹಶೀಲ್ದಾರ್ ಮಂಜುನಾಥ, ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಪಿ.ಎಚ್. ದೊಡ್ಡರಾಮಣ್ಣ, ಬ್ಯಾಂಕಿನ ವ್ಯವಸ್ಥಾಪಕ ಶ್ರೀಧರ, ಮಂಜುನಾಥ ಗೌಡ್ರು, ಬ್ಯಾಂಕಿನ ಸಿಬ್ಬಂದಿ, ಮುಖಂಡರಾದ ಎಪಿಎಂಸಿ. ಅಧ್ಯಕ್ಷ ಬೂದಿ ಶಿವಕುಮಾರ, ಐ.ಎಂ. ದ್ವಾರಕೇಶ್, ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.