ಬಳ್ಳಾರಿ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ ಇನ್ನೋರ್ವ ಬಿಡುಗಡೆ
Team Udayavani, May 3, 2020, 2:18 PM IST
ಬಳ್ಳಾರಿ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಸೊಂಕಿನಿಂದ ಗುಣಮುಖರಾದ ಹೊಸಪೇಟೆಯ ಮತ್ತೊಬ್ಬ ಪಿ.336 ಭಾನುವಾರ ಬಿಡುಗಡೆ ಮಾಡಲಾಯಿತು. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದವರ ಸಂಖ್ಯೆ 8 ಕ್ಕೆ ಏರಿದಂತಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89, ಪಿ-91 ಮತ್ತು ಪಿ-141 ನಂತರ ಪಿ-90 ಮತ್ತು ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮೇ 1 ರಂದು ಹೊಸಪೇಟೆಯ 21 ವರ್ಷದ ಪಿ-333 ಮತ್ತು 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದೇ ಕುಟುಂಬಕ್ಕೆ ಸೇರಿದ ಹೊಸಪೇಟೆಯ ಪಿ-336 ಅವರನ್ನು ಭಾನುವಾರ ಬಿಡುಗಡೆ ಮಾಡಲಾಗಿದ್ದು, ಹೊಸಪೇಟೆಯ ಒಂದೇ ಕುಟುಂಬದ 11 ಜನ ಸೋಂಕಿತರ ಪೈಕಿ 7 ಜನರು ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಹೊಸಪೇಟೆ ನಗರದ ಇವರು, ಈ ಮುಂಚೆ ಬಿಡುಗಡೆಯಾದ ಜಿಲ್ಲೆಯ ಮೊದಲ ಸೋಂಕಿತರ ಪ್ರಥಮ ಸಂಪರ್ಕಿತರಾಗಿದ್ದಾರೆ.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-336 ಅವರಿಗೆ ಹೂಗುಚ್ಛ ನೀಡಿ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಕಳುಹಿಸಿದರು. ನಂತರ ಅವರಿಗೆ ಪಡಿತರ ಕಿಟ್ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿ, ಚಿಕಿತ್ಸೆ ನೀಡಿದೆವು, ಅವರು ಇಂದು ಗುಣಮುಖರಾಗಿ ಹೊರಬಂದಿದ್ದಾರೆ ಎಂದರು.
ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮತ್ತು 14 ದಿನಗಳ ಕಾಲ ಸೆಲ್ಪ್ ರಿಪೋರ್ಟಿಂಗ್ ಮಾಡಲಾಗುವುದು ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಮತ್ತು ನಮ್ಮ ರ್ಯಾಪಿಡ್ ರಿಸ್ಪಾನ್ಸ್ ತಂಡದಿಂದ 28 ದಿನಗಳ ಕಾಲ ನಿಗಾವಹಿಸಲಾಗುವುದು ಎಂದು ತಿಳಿಸಿದ ಅವರು, ಈ ಆರ್ ಆರ್‍ಟಿ ತಂಡಗಳು ಗುಣಮುಖರಾಗಿರುವ ಈ ಜನರ ಮನೆಗಳ ಸುತ್ತಮುತ್ತಲಿನ ಮನೆಯವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಗುಣಮುಖರಾಗಿ ಹೊರಬಂದ ಪಿ- 336 ಅವರು ತೀವ್ರ ಭಾವುಕರಾದರು. ನಂತರ ಮಾತನಾಡಿದ ಅವರು ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು , ಸ್ಥೈರ್ಯ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿದರು ಮತ್ತು ಗುಣಮಟ್ಟ ಆಹಾರ ಒದಗಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಋಣವನ್ನು ನಾವೆಂದು ಮರೆಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನ, ಡಾ.ಅನಿಲ್, ಡಾ.ಲಿಂಗರಾಜು, ಡಾ.ವಿಜಯ ಶಂಕರ್, ಡಾ.ಸುನೀಲ್, ಡಾ.ವಿನಯ್, ಡಾ.ಸುಜಾತಾ , ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ್, ಡಾ.ಉಮಾಮಹೇಶ್ವರಿ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.