ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: 15ಕ್ಕೇರಿದ ಜಿಲ್ಲೆಯ ಸೋಂಕಿತರ ಸಂಖ್ಯೆ
Team Udayavani, May 8, 2020, 1:23 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ -19 ಪತ್ತೆಯಾಗಿದೆ. ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದ 37 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಬ್ಬರಲ್ಲಿ ಸೋಂಕು ಆವರಿಸಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 14 ಜನರು ಕೋವಿಡ್-19 ವೈರಸ್ ಸೋಂಕಿತರು ಇದ್ದು, ಈ ಪೈಕಿ 9 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೇ 8 ರಂದು ಶುಕ್ರವಾರ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಹೀಗೆ ಜಿಲ್ಲೆಯಲ್ಲಿ ಸೋಂಕಿತರು ಗುಣಮುಖರಾಗಿ ಮನೆ ಸೇರುತ್ತಿರುವ ಬೆನ್ನಲ್ಲೇ ಇದೀಗ ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದಲ್ಲಿ 37 ವರ್ಷದ ಮಹಿಳೆಗೆ ಕೋವಿಡ್-19 ದೃಢಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ಸ್ಪಷ್ಟಪಡಿಸಿದೆ.
ಸೋಂಕಿತ ಮಹಿಳೆಯನ್ನು ಈಗಾಗಲೇ ನಗರದ ಕೋವಿಡ್ (ಜಿಲ್ಲಾ) ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಜತೆಗೆ ಸೋಂಕಿತ ಮಹಿಳೆಯ ಸಂಬಂಧಿಕರು ಸೇರಿದಂತೆ ಅವರೊಂದಿಗೆ ಸಂಪರ್ಕದಲ್ಲಿರುದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಸಹ ಪ್ರಥಮ ಸಂಪರ್ಕಿತರ ಮಾಹಿತಿ ಸಂಗ್ರಹಿಸುತ್ತಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದರ. ಈ ಪೈಕಿ 9 ಜನರು ಬಿಡುಗಡೆಯಾಗಿದ್ದು, ಮೇ 8 ರಂದು ಶುಕ್ರವಾರ ಗುಣಮುಖರಾದ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಸಕ್ರಿಯವಾಗಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.