ಕಬ್ಬು ಬೆಳೆಗಾರರಲ್ಲಿ ಆತಂಕದ ಕಾರ್ಮೋಡ


Team Udayavani, Nov 19, 2018, 3:09 PM IST

bell-2.jpg

ಸಿರುಗುಪ್ಪ: ಈ ವರ್ಷ ಕಾರ್ಖಾನೆ ಆರಂಭಿಸುವುದಿಲ್ಲ ಎಂದು ದೇಶನೂರು ಗ್ರಾಮದಲ್ಲಿರುವ ಎನ್‌.ಎಸ್‌. ಎಲ್‌. ಶುಗರ್ ಕಾರ್ಖಾನೆ ಆಡಳಿತ ಮಂಡಳಿ ಖಡಾಖಂಡಿತವಾಗಿ ಹೇಳಿದ್ದು, ಇದನ್ನೇ ನಂಬಿಕೊಂಡು ಸಿರುಗುಪ್ಪ ಮತ್ತು ಸಿಂಧನೂರು ತಾಲೂಕಿನ 8 ಸಾವಿರ ಎಕರೆ ಪ್ರದೇಶದಲ್ಲಿ ರೈತರು ಕಬ್ಬು ಬೆಳೆದಿರುವ ರೈತರು ಆತಂಕಕ್ಕೀಡಾಗಿದ್ದಾರೆ.

ಸಿರುಗುಪ್ಪ ಮತ್ತು ಸಿಂಧನೂರು ತಾಲೂಕಿನ ವಿವಿಧ ಗ್ರಾಮಗಳ ಸಾವಿರಾರು ರೈತರಿಗೆ ಕಬ್ಬು ಬೆಳೆಯಿರಿ, ನಾವೇ ಖರೀದಿಸುತ್ತೇವೆಂದು ಕಾರ್ಖಾನೆಯವರು ಮನೆ-ಮನೆಗೆ ತೆರಳಿ ಮನವಿ ಮಾಡಿದ್ದರು. ನಂತರ ಬೇರೆ ಬೆಳೆ ಬೆಳೆಯದಂತೆ ಒಪ್ಪಂದ ಮಾಡಿಕೊಂಡು ಕಬ್ಬನ್ನೇ ಬೆಳೆಯುವಂತೆ ನೋಡಿಕೊಂಡಿದ್ದರು. ಕಬ್ಬು ಬೆಳೆಯಲು ರೈತರು ಒಂದು ಎಕರೆಗೆ ಸುಮಾರು 60-70 ಸಾವಿರ ರೂ. ಖರ್ಚು ಮಾಡಿದ್ದು, ಈಗ ಕಬ್ಬು ಕಟಾವಿನ ಹಂತಕ್ಕೆ ಬಂದು ನಿಂತಿದೆ. 

ಆದರೆ ಈ ವರ್ಷ ಕಾರ್ಖಾನೆ ಆರಂಭಿಸುವುದಿಲ್ಲ, ಕಬ್ಬು ಖರೀದಿಸಲು ಸಾಧ್ಯವಿಲ್ಲವೆಂದು ಕಾರ್ಖಾನೆ ಆಡಳಿತ ಮಂಡಳಿ ಹೇಳುತ್ತಿರುವುದರಿಂದ ಸಾಲ ಮಾಡಿ ಬೆಳೆದ ಕಬ್ಬನ್ನು ಏನು ಮಾಡಬೇಕು? ಹೇಗೆ ಮಾರಾಟ ಮಾಡಬೇಕು? ಎಂಬುದು ತಿಳಿಯದೇ ರೈತರು ಕಂಗಾಲಾಗಿದ್ದಾರೆ.

ಅಷ್ಟೇ ಅಲ್ಲ ಕಬ್ಬು ಬೆಳೆಗಾರರಿಗೆ ಒಂದು ಕೋಟಿ ರೂ. ಬಾಕಿ ಹಾಗೂ ಸಹಾಯಧನ 2 ಕೋಟಿ ರೂ. ಸೇರಿದಂತೆ ಒಟ್ಟು ಮೂರೂವರೆ ಕೋಟಿ ರೂ.ಗಳು ಕಾರ್ಖಾನೆಯಿಂದ ರೈತರಿಗೆ ಬಾಕಿ ಬರಬೇಕಿದೆ. ಈ ಕುರಿತು ಅ.23ರಂದು ಕಾರ್ಖಾನೆ ಆಡಳಿತ ಮಂಡಳಿ ಮತ್ತು ರೈತರ ಮಧ್ಯೆ ನಡೆದ ಸಭೆಯಲ್ಲಿ ಚರ್ಚಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಕಾರ್ಖಾನೆ ಆರಂಭಿಸಲು ಮತ್ತು ಕಬ್ಬು ಖರೀದಿಸಲು ಮುಂದಾಗಿಲ್ಲ.

ಸಿರುಗುಪ್ಪ ಮತ್ತು ಸಿಂಧನೂರು ತಾಲೂಕಿನ ರೈತರು 9 ಸಾವಿರ ಲಕ್ಷ ಟನ್‌ ಕಬ್ಬು ಬೆಳೆದಿದ್ದು, ರೈತರೊಂದಿಗೆ ಮಾಡಿಕೊಂಡ ಒಪ್ಪಂದದಂತೆ ತಕ್ಷಣವೇ 100 ಕೋಟಿ ಮೌಲ್ಯದ ಕಬ್ಬು ಖರೀದಿಸಿ ಕಾರ್ಖಾನೆ ಪ್ರಾರಂಭಿಸಬೇಕು. ಇಲ್ಲದಿದ್ದರೆ ಸಾಲಮಾಡಿ ಕಬ್ಬು ಬೆಳೆದ ರೈತರು ಆತ್ಮಹತ್ಯೆಯ ಹಾದಿ ಹಿಡಿಯಬೇಕಾಗುತ್ತದೆ. 
 ಗೌಸ್‌ಸಾಬ್‌, ರೈತ ಮುಖಂಡ

ಕಾರ್ಖಾನೆಯವರು ಕಬ್ಬು ಖರೀದಿಸದಿದ್ದರೆ ಉಂಟಾಗುವ ನಷ್ಟದಿಂದ ವಿಷ ಕುಡಿದು ಸಾಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಸರ್ಕಾರ ಮಧ್ಯೆ ಪ್ರವೇಶಿಸಿ ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.
 ರಂಗಪ್ಪ, ರೈತ, ಉತ್ತನೂರು 

ಎನ್‌.ಎಸ್‌.ಎಲ್‌. ಸಕ್ಕರೆ ಕಾರ್ಖಾನೆ ಸಕ್ಕರೆ ಮಾರಾಟದೊಂದಿಗೆ ವಿದ್ಯುತ್‌ ಉತ್ಪಾದಿಸುವ ಮೂಲಕ ಆರ್ಥಿಕವಾಗಿ ಲಾಭ ಗಳಿಕೆಯತ್ತ ಸಾಗಿತ್ತು. ಆದರೆ ವಿದ್ಯುತ್‌ಗೆ ಉತ್ತಮ ಬೆಲೆ ದೊರೆಯದಿದ್ದರಿಂದ ಸಕ್ಕರೆ ಕಾರ್ಖಾನೆ ಮುಚ್ಚಲು ನಿರ್ಧರಿಸಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸಕ್ಕರೆ ಸಚಿವ ಕೆ.ಜೆ. ಜಾರ್ಜ್‌ ಮತ್ತು ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನಿಸುತ್ತೇನೆ.
 ಎಂ.ಎಸ್‌.ಸೋಮಲಿಂಗಪ್ಪ, ಶಾಸಕ 

ಟಾಪ್ ನ್ಯೂಸ್

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.