ಮತಗಟ್ಟೆ ಅಧಿಕಾರಿಗಳ ನೇಮಕ
Team Udayavani, Dec 11, 2020, 7:09 PM IST
ಬಳ್ಳಾರಿ: ಜಿಲ್ಲೆಯಲ್ಲಿ ಅತ್ಯಂತ ಸುಸೂತ್ರವಾಗಿ ಗ್ರಾಮ ಪಂಚಾಯತಿಸಾರ್ವತ್ರಿಕ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಈಗಾಗಲೇ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 5 ತಾಲೂಕುಗಳ 87 ಗ್ರಾಪಂಗಳ 818 ಮತಗಟ್ಟೆಗಳಿಗೆ 3600 ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.
ಮೊದಲನೇ ಹಂತದಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಹೊಸಪೇಟೆ ಮತ್ತು ಕಂಪ್ಲಿ ತಾಲೂಕುಗಳ ಗ್ರಾಪಂಗಳಿಗೆಚುನಾವಣೆ ನಡೆಯಲಿದೆ. ಈ ಮತಗಟ್ಟೆ ಅಧಿಕಾರಿಗಳಿಗೆ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಡಿ. 17ರಂದು ಆಯಾ ತಾಲೂಕಿನಲ್ಲಿಯೇ ತರಬೇತಿ ನೀಡಲಾಗುತ್ತದೆ. ಸಿರಗುಪ್ಪದಲ್ಲಿ ಮಾತ್ರ ಡಿ. 18ರಂದು ತರಬೇತಿ ನೀಡಲಾಗುತ್ತದೆ. ಆಯಾ ತಾಲೂಕಿನಲ್ಲಿಯೇ ಕಾರ್ಯ ನಿರ್ವ ಹಿಸುತ್ತಿರುವವರನ್ನೇ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಎರಡನೇ ಹಂತದಲ್ಲಿ ಸಂಡೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತುಹರಪನಹಳ್ಳಿ ತಾಲ್ಲೂಕುಗಳಿಗೆಚುನಾವಣೆ ಜರುಗಲಿದ್ದು, ಈ ತಾಲೂಕುಗಳ 145 ಗ್ರಾಪಂಗಳಲ್ಲಿ 1255 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 5528 ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಈ ಅಧಿಕಾರಿಗಳಿಗೆ ಡಿ.23ರಂದುಆಯಾ ತಾಲೂಕುಗಳಲ್ಲಿಯೇ ತರಬೇತಿ ನೀಡಲಾಗುತ್ತದೆ.
ಸಂಡೂರು, ಸಿರಗುಪ್ಪ, ಕೂಡ್ಲಿಗಿ ಮತ್ತು ಕಂಪ್ಲಿ ತಾಲೂಕುಗಳಿಗೆ ಕೆಲ ಪ್ರಮಾಣದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಕೊರತೆ ಇರುವಹಿನ್ನೆಲೆಯಲ್ಲಿ ಸಂಡೂರು ತಾಲೂಕಿಗೆ-410ಮತ್ತು ಸಿರಗುಪ್ಪ ತಾಲೂಕಿಗೆ 174 ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳನ್ನು ಬಳ್ಳಾರಿ ತಾಲೂಕಿನಿಂದ ನಿಯೋಜಿಸಲಾಗಿದೆ. ಅದೇ ರೀತಿ ಕಂಪ್ಲಿ-105 ಮತ್ತು ಕೂಡ್ಲಿಗಿ-48 ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳನ್ನು ಹೊಸಪೇಟೆತಾಲೂಕಿನಿಂದ ನಿಯೋಜಿಸಲಾಗಿದೆ. ಈಸದರಿ ತಾಲೂಕುಗಳಿಗೆ ನಿಯೋಜಿಸಲಾದ ಪಿಆರ್‌ಒ ಮತ್ತು ಎಪಿಆರ್‌ಒಗಳು ತಮಗೆನಿಯೋಜಿಸಲಾಗಿರುವ ತಾಲೂಕುಗಳಿಗೆತೆರಳಿ ತರಬೇತಿ ಪಡೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.