ಪಕ್ಷಕ್ಕಾಗಿ ದುಡಿದವರಿಗೆಸೂಕ್ತ ಮನ್ನಣೆ: ರಾಮಣ್ಣ


Team Udayavani, Oct 23, 2017, 3:03 PM IST

23-47.jpg

ಹಗರಿಬೊಮ್ಮನಹಳ್ಳಿ: ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯಕ್ಕೆ ಪ್ರಥಮ ಆದ್ಯತೆ ನೀಡಿದ್ದು, ದುಡಿದವರಿಗೆ ಸೂಕ್ತ ಮನ್ನಣೆ ನೀಡುತ್ತದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹೆಗಾಳ್‌ ರಾಮಣ್ಣ ಹೇಳಿದರು.

ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ನಡೆದ ಮನೆ ಮನೆಗೆ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಸರಕಾರ ನಾಲ್ಕು ವರ್ಷಗಳಲ್ಲಿ ಎಸ್‌ಸಿಪಿ ಟಿಎಸ್‌ಪಿ ಅನುದಾನದಡಿ 27 ಸಾವಿರ ಕೋಟಿ ರೂ. ನೀಡಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದ ಸರ್ಕಾರವಾಗಿದೆ ಎಂದರು. ಅನ್ನಭಾಗ್ಯ ಯೋಜನೆಯ ಮೂಲಕ ಹಸಿವು ಮುಕ್ತ ಕರ್ನಾಟಕವಾಗಿಸಿದೆ. ಇಂದಿರಾ ಕ್ಯಾಂಟಿನ್‌ಗಳು ಪಟ್ಟಣ, ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರ ಹಸಿವನ್ನು ನೀಗಿಸುವ ಕೇಂದ್ರಗಳಾಗಿವೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ, ವಸತಿ ಸಹಾಯಕ್ಕಾಗಿ ವಿದ್ಯಾಸಿರಿ ಯೋಜನೆಯನ್ನ ಜಾರಿಗೊಳಿಸಿದೆ.  ಶಾದಿ ಭಾಗ್ಯ ಯೋಜನೆಗೆ 245ಕೋಟಿ ನೆರವು ನೀಡಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಸಮಿತಿಯ ರಾಜ್ಯ ಸಂಚಾಲಕ ಸಿ. ಬಸವರಾಜ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತ್ತು. ಅದರಂತೆ ಇದರಲ್ಲಿ 158 ಭರವಸೆಗಳನ್ನು ಈಡೇರಿಸಿದೆ. ರಾಜ್ಯ ಸರ್ಕಾರ ಅಂಬೇಡ್ಕರ್‌ ಜನ್ಮ ದಿನಾಚರಣೆ ಅಂಗವಾಗಿ 125 ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡಿದೆ ಎಂದರು.

ಪರಿಶಿಷ್ಟ ಜಾತಿ-ಪಂಗಡಗಳಿಗೆ 19.540 ಕೋಟಿ ರೂ. ಅನುದಾನ ನೀಡಿದೆ. ಹೈದ್ರಾಬಾದ್‌ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ನೀಡಿ ಅಭಿವೃದ್ಧಿಯನ್ನು ಮಾಡಿದೆ. ವಿಶೇಷ ಅಭಿವೃದ್ಧಿಯಲ್ಲಿ 3ಸಾವಿರ ಕೋಟಿ ರೂ. ಅನುದಾನ ಒದಗಿಸಿದೆ. ನರೇಂದ್ರ ಮೋದಿಯವರ ಕೇಂದ್ರ ಸರಕಾರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸದೆ ಜಿಎಸ್‌ಟಿ ಜಾರಿಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ನೋಟ್‌ಬ್ಯಾನ್‌ ಮಾಡುವ ಮೂಲಕ ದೇಶದ ಸಾಕಷ್ಟು ಜನರ ಜೀವ ಕಳೆದುಕೊಳ್ಳುವಂತೆ ಮಾಡಿದೆ ಕೇಂದ್ರ ಸರ್ಕಾರ. ಈ ಹಿಂದೆ ಯುಪಿಎ ಸರ್ಕಾರ ಮಾಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು. 

ಕೆಪಿಸಿಸಿ ಸದಸ್ಯ ಎಲ್‌. ಮಾರೆಣ್ಣ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿ 5 ಕೋಟಿ ಜನರಿಗೆ ನೆರವಾಗಿದೆ. ಮತದಾರರು ಮತ್ತೂಮ್ಮೆ ಕಾಂಗ್ರೆಸ್‌ಗೆ ಬೆಂಬಲಿಸಿ ಸಾಮರಸ್ಯದ ಕರ್ನಾಟಕ ಕಟ್ಟಲು ಕೈಜೋಡಿಸಬೇಕು ಎಂದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎ. ಕೊಟ್ರೇಶ, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಸತ್ಯನಾರಾಯಣ ಮಾತನಾಡಿದರು. ಕಾಂಗ್ರೆಸ್‌ ಮುಖಂಡರಾದ ಜಮಲ್‌ಸಾಬ್‌, ರಾಟಿ ಚಮನ್‌ಸಾಬ್‌, ಹರಿಜನ ಸುಭಾಸ್‌, ಅಬ್ದುಲ್‌ ಸಾಬ್‌, ಶಿಗೇನಹಳ್ಳಿ ವೀರನಗೌಡ, ಚಲವಾದಿ ಕೊಟ್ರೇಶ, ಗಪೂರ್‌ಸಾಬ್‌, ಜಾಕಿ ಶಾಹೀರ್‌, ಮೈಲಪ್ಪ, ದೊಡ್ಡಬಸಪ್ಪ, ರಮೇಶ ಪೂಜಾರಿ, ಎಚ್‌. ಮರಿಯಪ್ಪ, ತೋಟಪ್ಪ ಇತರರು ಇದ್ದರು. 

ಟಾಪ್ ನ್ಯೂಸ್

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.