Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Team Udayavani, Apr 14, 2024, 2:35 PM IST
ಬಳ್ಳಾರಿ: ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ. ನಾನು ಅದೇ ಕ್ಷೇತ್ರದ ಬಂದಿರುವೆ. ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ಬಿಜೆಪಿ, ಪ್ರಹ್ಲಾದ್ ಜೋಶಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಳ್ಳಾರಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲಗಿದವರನ್ನು ಎಬ್ಬಿಸಬಹುದು ಆದರೆ ಮಲಗಿದ ಹಾಗೆ ನಟನೆ ಮಾಡಿದರೆ ಎಬ್ಬಿಸುವುದು ಕಷ್ಟ. ನಿಜವಾದ ಸಮಸ್ಯೆಯಿದ್ದರೆ ಮಾತನಾಡಿ ಬಗೆಹರಿಸಿ ಮನವೊಲಿಸುವ ಕೆಲಸ ಮಾಡಬಹುದು. ಶ್ರೀಗಳ ಸ್ಪರ್ಧೆ ಹಿಂದೆ ಬೇರೆ ಶಕ್ತಿಗಳು ಕೆಲಸ ಮಾಡುತ್ತಿದೆ. ಹೀಗಾಗಿ ಮನವೊಲಿಸುವ ಪ್ರಯತ್ನ ಮಾಡಲ್ಲ, ಅವಶ್ಯಕತೆಯೂ ಇಲ್ಲ. ಅವರ ಸ್ಪರ್ಧೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಅನಿಸುತ್ತದೆ ಎಂದರು.
ಈಶ್ವರಪ್ಪ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೆಲ್ಲದ್, ಅವರು ಬಿಜೆಪಿ ಮತ್ತು ಸಂಘದ ನಿಷ್ಠಾವಂತ ಕಾರ್ಯಕರ್ತರು. ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ಸುಳ್ಳು ಗ್ಯಾರಂಟಿ ವರ್ಕೌಟ್ ಆಗುವುದಿಲ್ಲ. 10 ಕೆಜಿ ಅಕ್ಕಿ ಕೊಡುತ್ತೇವೆಂದು ಕೊಟ್ಟಿಲ್ಲ. ಮೋದಿಯವರೇ ಐದು ಕೆಜಿ ಅಕ್ಕಿ ಕೊಟ್ಟಿದ್ದಾರೆ. ಮೋದಿಯವರೇ ಮೂರನೇ ಬಾರಿ ಪ್ರಧಾನಿ ಎಂದು ಜನರು ನಿರ್ಧಾರ ಮಾಡಿದ್ದಾರೆ. ದೇಶದಲ್ಲಿ ಮೋದಿ ಗ್ಯಾರಂಟಿ ಮಾತ್ರ ಎಂದರು.
ಬೆಳಗಾವಿಯಲ್ಲಿ ಪಂಚಮಸಾಲಿ ಬಗ್ಗೆ ನಿರಾಣಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮುರುಗೇಶ್ ನಿರಾಣಿ ನಮ್ಮ ಪಕ್ಷದರು. ಸಂಜಯ ಪಾಟೀಲ್ ಹೇಳಿಕೆ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಬಳ್ಳಾರಿಯಲ್ಲಿ ರಾಮುಲು ಜನಪ್ರಿಯತೆ, ಜನಾರ್ದನ ರೆಡ್ಡಿ ಶಕ್ತಿಯಿದೆ. ಸೂರ್ಯ ಉದಯಿಸುವುದು ಎಷ್ಟು ಸತ್ಯವೋ, ಬಳ್ಳಾರಿಯಲ್ಲಿ ರಾಮುಲು ಗೆಲವು ಅಷ್ಟೇ ಸತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.