ಸ್ವಾವಲಂಬಿ ಉದ್ಯೋಗಿಗಳಾಗಿ: ಪಾರ್ಥಸಾರಥಿ
ಶ್ರೀ ಕೃಷ್ಣದೇವರಾಯ ವಿವಿ ಪ್ರಕಟಿಸಿರುವ ಎಲ್ಲ ಮೂರು ರ್‍ಯಾಂಕ್ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
Team Udayavani, Jul 19, 2022, 6:32 PM IST
ಬಳ್ಳಾರಿ: ಇಂದಿನ ಜಾಗತಿಕ ವಿದ್ಯಮಾನದಲ್ಲಿ ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದು ಮುಖ್ಯವಲ್ಲ. ಇದರ ಜೊತೆಗೆ ನಿರ್ವಹಣಾ ಶಾಸ್ತ್ರದಲ್ಲಿ ವಿನೂತನ ತಂತ್ರಾಂಶಗಳುಳ್ಳ ಇತರೆ ವೃತ್ತಿಪರ ಪದವಿಗಳನ್ನು ಹೊಂದಬೇಕು ಎಂದು ಇನ್ಸ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಟ್ಯಾಕ್ಸ್ ಪ್ರಾಕ್ಟೀಷನರ್ ಆಫ್ ಇಂಡಿಯಾದ ಅಧ್ಯಕ್ಷ ಶ್ರೀಧರ ಪಾರ್ಥಸಾರಥಿ ಹೇಳಿದರು.
ನಗರದ ಅಲ್ಲಂ ಕರಿಬಸಪ್ಪ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಎಂಬಿಎ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭ, ರ್‍ಯಾಂಕ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಂಬಿಎ ವಿದ್ಯಾರ್ಥಿಗಳು ಪದವಿಯೊಂದಿಗೆ ನಿರ್ವಹಣಾ ಶಾಸ್ತ್ರದಲ್ಲೂ ಪದವಿ ಹೊಂದುವ ಮೂಲಕ ದೇಶ ವಿದೇಶಗಳಲ್ಲಿ ಉದ್ಯಮಿಗಳಾಗಿ ಸ್ವಾವಲಂಬಿಗಳಾಗಿ ಉದ್ಯೋಗಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ವಿವಿಧ ವಲಯಗಳಲ್ಲಿ ಉನ್ನತ ವೃತ್ತಿಪರ ಸ್ಥಾನಗಳನ್ನು ಹೊಂದಿ ಸಂಸ್ಥೆಗಳ ಉತ್ತಮ ನಿರ್ವಹಣೆಯೊಂದಿಗೆ ಸಂಘದ ಮತ್ತು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಜಿಂದಾಲ್ ಸಂಸ್ಥೆಯ ಎಕ್ಷಿಕ್ಯೂಟಿವ್ ಉಪಾಧ್ಯಕ್ಷ ವಿಶ್ವನಾಥ ಸರ್ಯನಾರಾಯಣನ್ ಮಾತನಾಡಿ, ವಿದ್ಯಾರ್ಥಿಗಳು ಸರಿಯಾದ ಹಾದಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು. ವೃತ್ತಿಯಲ್ಲಿ ಶ್ರದ್ಧೆ, ಆಸಕ್ತಿ, ಕ್ರಿಯಾಶೀಲತೆಯನ್ನು ಅಳವಡಿಸಿಕೊಳ್ಳಬೇಕು. ನಿರ್ವಹಣೆ ಮತ್ತು ಆಡಳಿತ ವಿಭಾಗದಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಇವೆ.
ಕಲಿಕೆಯ ಜೊತೆಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಭಾವ ಬೆಳಸಿಕೊಳ್ಳಬೇಕು. ಈ ಕಾರ್ಯವನ್ನು ನಾನು ಮಾಡಬಲ್ಲೆ ಎಂಬ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು
ಎಂದು ತಿಳಿಸಿದರು. ವೀ.ವಿ. ಸಂಘದ ಅಧ್ಯಕ್ಷ ಗುರುಸಿದ್ದಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಳಿಕ 2019-21ನೇ ಸಾಲಿಗೆ ವಿಜಯನಗರ
ಶ್ರೀ ಕೃಷ್ಣದೇವರಾಯ ವಿವಿ ಪ್ರಕಟಿಸಿರುವ ಎಲ್ಲ ಮೂರು ರ್‍ಯಾಂಕ್ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಬಿ.ವಿ.ಬಸವರಾಜ ಇವರು ಪದವಿ ಪ್ರಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಡಳಿತ ಮಂಡಳಿ ಅಧ್ಯಕ್ಷ ಜಾನೇಕುಂಟೆ ಸಣ್ಣಬಸವರಾಜ, ಆಡಳಿತ ಮಂಡಳಿ ಸದಸ್ಯ ನಾಗರಾಜ ಶರ್ಮ ವಿ, ವೈ. ರವಿ, ಬಿ.ರವೀಂದ್ರನಾಥ ಇದ್ದರು.
ನಿರ್ದೇಶಕ ಡಾ| ಕೆ.ಟಿ. ಗೋಪಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹ ಪ್ರಾಧ್ಯಾಪಕಿ ಡಾ| ಶೈಲಜಾ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ರಂಜಿತ ವಂದಿಸಿದರು. ಸಹಾಯಕ ಪ್ರಾಧ್ಯಾಪಕರಾದ ಕೆ. ಜ್ಯೋತಿ, ಬಿ.ದಿವಾಕರ, ಎನ್.ವಿದ್ಯಾಶ್ರೀ, ಬೋಧಕೇತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.