ಆಶಾಗಳ ಗೌರವಧನ ಹೆಚ್ಚಿಸಿ: ನಾಗಲಕ್ಷ್ಮೀ
Team Udayavani, Jun 29, 2020, 9:50 AM IST
ಬಳ್ಳಾರಿ: ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಫ್ರಂಟ್ ಲೈನ್ ವಾರಿಯರ್ಗಳಂತೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ಗೌರವಧನ ಖಾತರಿ ಪಡಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜೂ. 30ರಂದು ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರಿಗೂ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ತಡೆಯುವಲ್ಲಿ, ಮನೆಮನೆಗೆ ಸಮೀಕ್ಷೆ ನಡೆಸಿ ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯ. ಈ ಹಿನ್ನೆಲೆಯಲ್ಲಿ ಅವರನ್ನು ಫ್ರಂಟ್‌ಲೆçನ್ ವಾರಿಯರ್ಸ್ ಗಳನ್ನಾಗಿ ಕರೆಯಲಾಗುತ್ತಿದೆ. ಎಲ್ಲೆಡೆ ಚಪ್ಪಾಳೆ, ಹೂವಿನ ಮಳೆಗೈದು ಗೌರವ ನೀಡಲಾಗುತ್ತಿದೆ. ಆದರೆ ಇಂಥ ಗೌರವಗಳಿಂದ ಆಶಾ ಕಾರ್ಯಕರ್ತೆಯರ ಹೊಟ್ಟೆ ತುಂಬಲ್ಲ. ಅವರಿಗೆ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ 12 ಸಾವಿರ ರೂ.ಗೌರವಧನ ಖಾತರಿಪಡಿಸಬೇಕು. ಇಲ್ಲದಿದ್ದಲ್ಲಿ ಜುಲೈ 10ರಿಂದ ರಾಜ್ಯಾದ್ಯಂತ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಸಲಾಗುವುದು ಎಂದವರು ಎಚ್ಚರಿಸಿದರು.
ರಾಜ್ಯ ಸರ್ಕಾರ ಸಹಕಾರಿ ಇಲಾಖೆ ವತಿಯಿಂದ ಕೊಡಿಸುತ್ತಿರುವ 3 ಸಾವಿರ ಪ್ರೋತ್ಸಾಹಧನವೂ ಎಲ್ಲರಿಗೂ ತಲುಪಿಲ್ಲ. ನಗರಗಳಲ್ಲಿ ಮಾತ್ರ ಕೊಟ್ಟು ಎಲ್ಲ ಕಡೆಯೂ ಕೊಟ್ಟಂತೆ ಸರ್ಕಾರ ತೋರಿಸಿಕೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ 2500 ಆಶಾ ಕಾರ್ಯಕರ್ತೆಯರು ಇದ್ದು, ಇವರಲ್ಲಿ ಅಂದಾಜು 800 ಜನರಿಗೆ ಮಾತ್ರ ಲಭಿಸಿದೆ. ರಾಜ್ಯದಲ್ಲಿ 42 ಸಾವಿರ ಇರುವ ಆಶಾಗಳ ಪೈಕಿ ಕೇವಲ ಅಂದಾಜು 10 ಸಾವಿರ ಜನರಿಗೆ ಮಾತ್ರ ಲಭಿಸಿರಬಹುದು ಎಂದವರು ದೂರಿದರು.
ಮೂರು ತಿಂಗಳಿಂದ ಆಶಾಕಾರ್ಯಕರ್ತೆಯರು ವಿಶ್ರಾಂತಿ ಇಲ್ಲದೇ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂದೆ ನಿಂತು, ಸಮೀಕ್ಷೆ ಮಾಡಿ ಸರ್ಕಾರಕ್ಕೆ ಸ್ಪಷ್ಟ ಮಾಹಿತಿ ನೀಡುವುದಲ್ಲದೇ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅಂಥವರ ಮೇಲೆ ಹಲ್ಲೆಗಳು ನಡೆಯುತ್ತಲೇ ಇವೆ. ಆದರೂ ಸರ್ಕಾರ ಗಮನಿಸುತ್ತಿಲ್ಲ. ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದರೂ ಈವರೆಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸಲಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಅಶಾ ಕಾರ್ಯಕರ್ತೆಯರಿಗೂ ಸೋಂಕು ತಗುಲುತ್ತಿದೆ. ಸೂಕ್ತ ಸುರಕ್ಷತಾ
ಸಾಮಗ್ರಿಗಳನ್ನು ಕೊಟ್ಟಿಲ್ಲ. ಪದೇ, ಪದೇ ಆರೋಗ್ಯ ತಪಾಸಣೆ ನಡೆಸಬೇಕು. ಸೋಂಕು ತಗುಲಿರುವ ಆಶಾ ಕಾರ್ಯಕರ್ತೆಯರ ಚಿಕಿತ್ಸೆ ಅವಧಿಯಲ್ಲಿ ಗೌರವಧನ ಕೊಡಬೇಕು. ಎನ್95 ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಸರ್ ಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.
ಬಳಿಕ ಜೂ. 30ರ ಹೋರಾಟದ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ದೇವದಾಸ್, ಶಾಂತಾ, ಗೀತಾ, ರೇಷ್ಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.