ಆಶಾಗಳು ಎಚ್ಚರಿಕೆಯೊಂದಿಗೆ ಕರ್ತವ್ಯ ನಿರ್ವಹಿಸಿ: ಚಂದ್ರಪ್ಪ
Team Udayavani, Jul 7, 2020, 5:03 PM IST
ಸಂಡೂರು: ಕೋವಿಡ್ ಪ್ರಮಾಣ ಹೆಚ್ಚಾಗುತ್ತಿದ್ದು ಆಶಾಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಬಹು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ನಿತ್ಯ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ನೀಡುವ ಸಲಹೆ ಮತ್ತು ಎಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವೈದ್ಯಾಧಿಕಾರಿ ಡಾ| ಚಂದ್ರಪ್ಪ ತಿಳಿಸಿದರು.
ಅವರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಜೀವಿನಿ, ಕೆಎಸ್‌ಆರ್ ಎಲ್‌ಪಿಎಸ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವ-ಸಂಘಗಳ ಎಂಬಿಕೆ ಎಲ್‌ಸಿಆರ್‌ಪಿ ಹಾಗೂ ಎಂಸಿಆರ್ ಪಿಗಳಿಗೆ ಕೋವಿಡ್-19 ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿ,ನಾವು ಮಾಡುತ್ತಿರುವ ಕೆಲಸ ವೇತನಕ್ಕಿಂತ ಹೆಚ್ಚಾಗಿ ಮಾನವೀಯತೆ ಹೊಂದಿದೆ. ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹಲವಾರು ಕೋವಿಡ್ ಪೀಡಿತರನ್ನೂ ಸಂಪರ್ಕಿಸಿರುತ್ತೇವೆ. ಆದ್ದರಿಂದ ಕಡ್ಡಾಯವಾಗಿ ನಮ್ಮ ರಕ್ಷಣಾ ಅಂಶಗಳನ್ನು ಪಾಲಿಸಬೇಕು ಇಲ್ಲವಾದಲ್ಲಿ ನಮಗೂ ಸಹ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.
ಆರೋಗ್ಯ ಇಲಾಖೆಯಿಂದ 7 ದಿನಗಳ ಕಾಲ ರಕ್ಷಣೆಗಾಗಿ, ನಿರೋಧಕ ಶಕ್ತಿಯ ಮಾತ್ರೆಗಳ ಬಗ್ಗೆ ತಾಲೂಕು ಆರೋಗ್ಯಾಕಾರಿಗಳ ಗೈಡ್‌ಲೈನ್ಸ್‌ಗಳ ಬಗ್ಗೆ ಪೂರ್ಣ ಮಾಹಿತಿ ನೀಡಿ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ತರಬೇತಿಯಲ್ಲಿ ಆಶಾಕಾರ್ಯಕರ್ತೆಯರು, ವಿವಿಧ ಸಂಘಟನೆಗಳ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
UV Fusion: ಚಿಮ್ಮಿದ ಸೇವಾಹನಿಗಳು ಮತ್ತೆ ಸಾಗರವ ಸೇರಿತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.