ಐಎಎಸ್-ಐಪಿಎಸ್ ಪರೀಕ್ಷಾರ್ಥಿಗಳಿಗೆ ನೆರವು
Team Udayavani, Sep 26, 2020, 7:00 PM IST
ಬಳ್ಳಾರಿ: ವಾಲ್ಮೀಕಿ ಸಮುದಾಯದ ಯಾರಾದರೂ ಐಎಎಸ್ ಮತ್ತು ಐಪಿಎಸ್ ಇತರೆ ಉನ್ನತ ಹುದ್ದೆಗಳ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಆಸಕ್ತ ಅಭ್ಯರ್ಥಿಗಳಿಗೆ ಸಹಾಯ ಧನದ ನೆರವನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಶಿವಣ್ಣ ತಿಳಿಸಿದರು.
ತಾಲೂಕಿನ ಮೋಕ ಗ್ರಾಮದ ಮಲ್ಲೇಶ್ವರ ದೇವಸ್ಥಾನದ ಹತ್ತಿರ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ನೌಕರರ ಸಂಘದಿಂದ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ವಾಲ್ಮೀಕಿ ಸಮುದಾಯದ ಬಡವಿದ್ಯಾರ್ಥಿಗಳಿಗೆ ಸಹಾಯ ಸಹಕಾರವನ್ನು ನೀಡಲಾಗುವುದು. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ವಿದ್ಯಾರ್ಥಿಗಳಿಗೆ ಈ ರೀತಿಯ ಸನ್ಮಾನ ಮಾಡುವ ಮೂಲಕ ಪ್ರೇರೇಪಣೆ ನೀಡಿದಂತಾಗುತ್ತದೆ ಎಂದವರು ತಿಳಿಸಿದರು.
ಸಂಘದ ಜಿಲ್ಲಾ ಉಪಾಧ್ಯಕ್ಷ, ರುಕ್ಮಿಣಮ್ಮ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಸುಧಾಕರ್, ಜಂಟಿ ಕಾರ್ಯದರ್ಶಿ ಶ್ರೀಧರ್ ಸೇರಿದಂತೆ ಸಂಘದ ಎಲ್ಲ ಪದಾಧಿಕಾರಿಗಳು ಸದಸ್ಯರು ಹಾಗೂ ಊರಿನ ಮುಖಂಡರು ಮಾತನಾಡಿದರು. ಇದೇ ವೇಳೆ ಸಮುದಾಯದ ನಿವೃತ್ತ ನೌಕರರಾದ ಲೋಕೊಪಯೋಗಿ ಇಲಾಖೆಯ ಕೆ. ವಿಠೋಬ, ಶಿಕ್ಷಕ ಕೆ.ನಾರಾಯಣಪ್ಪ, ಪೊಲೀಸ್ ಇಲಾಖೆ ಮಜ್ಜಿಗೆ ಹೊನ್ನೂರಪ್ಪ ಇವರನ್ನು ಸನ್ಮಾನಿಸಲಾಯಿತು.
ಆರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಶಶಿಧರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆಂಚಪ್ಪ ನಿರೂಪಿಸಿದರು. ಉಪನ್ಯಾಸಕ ಡಿ.ಆಂಜನೇಯ ವಂದಿಸಿದರು. ಇದೇ ವೇಳೆ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಮಾಡಲು ತೀರ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.