ಮಸೀದಿಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ
Team Udayavani, Feb 13, 2021, 3:57 PM IST
ಹೂವಿನಹಡಗಲಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಸೀದಿಯೊಂದರಲ್ಲಿ ಪೂಜೆ ಸಲ್ಲಿಸಿ ಭಾವೈಕ್ಯತೆ ಸಾರಿದ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ನಾಗತಿಬಸಾಪುರ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಮುಸ್ಲಿಂ ಯುವಕರು ಮಸೀದಿಯಲ್ಲಿ ಪೂಜೆ ನೆರವೇರಿಸಲು ವ್ಯವಸ್ಥೆ ಮಾಡಿದ್ದರು. 20ಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಸುಮಾರು 2 ಗಂಟೆಗಳ ಕಾಲ ನಿರಂತರ ಅಯ್ಯಪ್ಪಸ್ವಾಮಿ ಭಜನೆ ಮಾಡಿ, ಪೂಜೆ ನೆರವೇರಿಸಿದರು. ಈ ಭಾವೈಕ್ಯತಾ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸ್ವಾಮಿ ವೃತಾಧಾರಿಗಳಾದ ಬ್ರಹ್ಮಾನಂದ, ಸಂತೋಷ, ಸಿದ್ದೇಶ, ನೀಲಪ್ಪ, ನಾಗರಾಜ, ಮನೋಹರ, ಫಕ್ಕಿರಜ್ಜ ,ಅಜ್ಜಪ್ಪ ಹಾಗೂ ದೊಡ್ಡಮನಿ ಅಕºರ್, ಪತ್ರಕರ್ತರಾದ ಬಿಚ್ಚುಗತ್ತಿ ಖಾಜಾಹುಸೇನ, ದಯಾನಂದ ಎಂ., ಆನಂದ ಬಿ., ಶಿಕ್ಷಕ ರಮೇಶ, ರಹಮತ್, ಫಕ್ಕಿರ್‌ಸಾಬ್ ಅಲ್ಲಾಭಕ್ಷಿ ದೊಡ್ಡಮನಿ ಲತೀಫ್ ಶೌಕತ್‌ಅಲಿ, ಭಾಷಾಸಾಬ್ ಇತರರು ಭಾಗವಹಿಸಿದ್ದರು.
ನಂತರ ಮಸೀದಿಯಲ್ಲಿ ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ಮಸೀದಿಯಲ್ಲಿ ಹಮ್ಮಿಕೊಂಡ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ ಭಾವೈಕ್ಯತೆಯ ಸಂದೇಶ ಸಾರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.