ಕಸಾಪ ರಾಜ್ಯಾಧ್ಯಕ್ಷರ ಹೇಳಿಕೆ ಸರಿಯಲ್ಲ
Team Udayavani, Feb 15, 2022, 2:34 PM IST
ಬಳ್ಳಾರಿ: ಹೆಬ್ಬೆಟ್ಟಿನವರು ಕಸಾಪ ಸದಸ್ಯರಾಗಿದ್ದಾರೆಎಂಬ ರಾಜ್ಯಾಧ್ಯಕ್ಷ ಮಹೇಶ್ ಜೋಷಿಯವರ ಹೇಳಿಕೆಸರಿಯಲ್ಲ. ಆಸಕ್ತಿಯಿದ್ದ ಯಾರಾದರೂ ಪರಿಷತ್‌ಗೆ ಸದಸ್ಯರಾಗಬಹುದು ಎಂದು ಕಸಾಪ ಜಿಲ್ಲಾಧ್ಯಕ್ಷನಿಷ್ಠಿರುದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಸಾಂಸ್ಕೃತಿಕ ಸಮುಚ್ಚಯದಲ್ಲಿಮಹಾದೇವ ಎಜುಕೇಶನ್, ಆರ್ಟ್ ಆ್ಯಂಡ್‌ಕಲ್ಚರಲ್ ಟ್ರಸ್ಟ್, ವಂದೇ ಮಾತರಂ ಯುವಕಸಂಘ, ಮೇಡಂಕ್ಯೂರಿ ವಿಜ್ಞಾನ ಅಕಾಡೆಮಿ, ಕಸಾಪವತಿಯಿಂದ ಆಯೋಜಿಸಿದ್ದ ಎರಡು ದಿನಗಳಸಂಕ್ರಾಂತಿ ವೈಭವ-2022 ಕಾರ್ಯಕ್ರಮದಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಸಾಪ ರಾಜ್ಯಾಧ್ಯಕ್ಷ ಮಹೇಶ್‌ಜೋಷಿಹೇಳಿಕೆ ಸರಿಯಾದದ್ದಲ್ಲ. ಪರಿಷತ್‌ಗೆ ಆಸಕ್ತಿಇದ್ದರೆ ಯಾರುಬೇಕಾದರೂ ಸದಸ್ಯತ್ವ ಸ್ಥಾನಪಡೆಯಬಹುದು. ಹೆಬ್ಬೆಟ್ಟಿನವರು ಸದಸ್ಯರಾಗಿದ್ದಾರೆಎಂಬ ಹೇಳಿಕೆಯಿಂದ ಕನ್ನಡಿಗರಲ್ಲಿ ಬೇಸರವಾಗಿದೆ.
ರಾಜ್ಯದ 30 ಜಿಲ್ಲೆಗಳ ಮತ್ತು ಗಡಿ ಜಿಲ್ಲೆಗಳ ಎಲ್ಲಕಸಾಪ ಅಧ್ಯಕ್ಷರು ಈ ಕುರಿತು ಜೋಷಿ ಅವರಲ್ಲಿಮನವರಿಕೆ ಮಾಡಿಕೊಡುತ್ತೇವೆ ಎಂದರು.ವರನಟ ಡಾ.ರಾಜಕುಮಾರ್, ಗುಬ್ಬಿ ವೀರಣ್ಣ,ಬೆಳಗಲ್ಲು ವೀರಣ್ಣ, ದರೋಜಿ ಈರಮ್ಮನಂಥವರುಇಡೀ ರಾಷ್ಟ್ರವೇ ಮೆಚ್ಚುವಂಥ ಕಲಾ ನೈಪುಣ್ಯತೆಯನ್ನುಹೊಂದಿದ್ದಾರೆ. ಲತಾ ಮಂಗೇಶ್ಕರ್ ಅಂಥವರೇಕೇವಲ ಒಂದೇ ದಿನ ಶಾಲೆಗೆ ಹೋದವರು. ಮತ್ತೆತಿರುಗಿ ಕೂಡ ಶಾಲೆಗೆ ಹೋದವರಲ್ಲ. ಅವರು ತಮ್ಮತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಲಿಲ್ಲವೇ? ಮಹೇಶ್‌ಜೋಷಿ ಅವರಿಗೆ ಈ ರೀತಿ ಹೇಳಿಕೆ ಮತ್ತೆ ನೀಡದಂತೆನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.