ಮಕ್ಕಳ ಕೈಗೆ ಪುಸ್ತಕ ಕೊಡಿ: ಮಂಜಮ್ಮ ಜೋಗಿತಿ

ನಮ್ಮೂರ ಹೆಮ್ಮೆ ಸಾಧಕರಿಗೆ ಸನ್ಮಾನ ವಿದ್ಯಾರ್ಥಿಗಳ ಭವಿಷ್ಯ ಬೆಳಗಿದ ಕೀರ್ತಿ ಚಾಣಕ್ಯ ಕರಿಯರ್‌ ಅಕಾಡೆಮಿದೆ

Team Udayavani, Feb 15, 2021, 4:54 PM IST

15-22

ಹಗರಿಬೊಮ್ಮನಹಳ್ಳಿ: ಮಕ್ಕಳನ್ನು ಆಂಗ್ಲ ಮಾಧ್ಯಮದ ಶಾಲೆಗೆ ಸೇರಿಸುವ ಬದಲು ಕನ್ನಡ ಶಾಲೆಗಳಿಗೆ ದಾಖಲಾತಿ ಮಾಡಿ ಕನ್ನಡ ಬೆಳೆಸುವ ಕೆಲಸ ಮಾಡಿ ಎಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕಲಾವಿದೆ ಮಂಜಮ್ಮ ಜೋಗ್ತಿ ಹೇಳಿದರು.

ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ಧಾರವಾಡದ ಚಾಣಕ್ಯ ಕರಿಯರ್‌ ಅಕಾಡೆಮಿ ಹಮ್ಮಿಕೊಂಡಿದ್ದ ನಮ್ಮೂರ ಹೆಮ್ಮೆ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ ಅವರು ಮಾತನಾಡಿದರು. ಆಂಗ್ಲ ಭಾಷೆಯನ್ನು ಊಟದಲ್ಲಿ ಉಪ್ಪಿನಕಾಯಿ ತರಹ
ಬಳಸಿ. ಜಾನಪದ ಉಳಿಯಬೇಕು ಅಂದರೆ ಕನ್ನಡ ಶಾಲೆಯಲ್ಲಿ ಮಕ್ಕಳನ್ನು ಓದಿಸಬೇಕು. ಸರ್ಕಾರಿ ನೌಕರಿ ನೆಪದಲ್ಲಿ ಆಂಗ್ಲ ಮಾಧ್ಯಮದ ಶಾಲೆಗಳ ಬೆನ್ನತ್ತಬೇಡಿ. ಪಾಲಕರು ತಮ್ಮ ಮಕ್ಕಳಿಗೆ ಮೊಬೈಲ್‌ ಕೊಡಿಸುವ ಬದಲು ಪುಸ್ತಕಗಳನ್ನು ಕೊಡಿ. ಎಲ್ಲರಲ್ಲಿಯೂ ಕಲೆ ಇರುತ್ತದೆ ಆ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದರು.

ಬಳ್ಳಾರಿ ಅಪರ ಜಿಲ್ಲಾ ಧಿಕಾರಿ ಪಿ.ಎಸ್‌. ಮಂಜುನಾಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಧನೆ ಮಾಡುವ ವ್ಯಕ್ತಿ ಕನಸನ್ನು ಕಾಣಬೇಕು, ಕಾಣುವ ಕನಸು ಸಣ್ಣದಾಗಿರಬಾರದು ದೊಡ್ಡದಾಗಿರಬೇಕು. ಕನಸು ನಿದ್ರೆಯಿಂದ ಬಡಿದೆಬ್ಬಿಸುವಂತಿರಬೇಕು ಎಂದು ತಿಳಿಸಿದರು.

ಚಾಣಕ್ಯ ಕರಿಯರ್‌ ಅಕಾಡೆಮಿ ನಿರ್ದೇಶಕ ಪ್ರದೀಪ್‌ ಗುಡ್ಡದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರಿಯರ್‌ ಅಕಾಡೆಮಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ನೌಕರಿ ಪಡೆದು ಜೀವನವನ್ನು ಉಜ್ವಲಗೊಳಿಸಿಕೊಂಡಿದ್ದಾರೆ.

ಸಾಧಕರಿಗೆ ಸನ್ಮಾನ ಮಾಡುವ ಉದ್ದೇಶ, ಯುವ ಪೀಳಿಗೆಗೆ ಈ ಕಾರ್ಯಕ್ರಮ ಸ್ಪೂರ್ತಿದಾಯಕವಾಗಿ ಅವರು ಕೂಡ ಸಾಧನೆ ಹಾದಿ ತುಳಿಯಲಿ ಎಂಬುವ ಉದ್ದೇಶದಿಂದ. ನನ್ನ ಸಾಧನೆಗೆ ಸಹೋದರರು ಹಾಗೂ ಗ್ರಾಮದವರ ಸಹಕಾರ ಸಾಕಷ್ಟು ಇದೆ. ಮುಂದಿನ ದಿನಗಳಲ್ಲಿ ತಾಲೂಕಿನ ಪ್ರತಿಯೊಬ್ಬ ಪ್ರತಿಭಾವಂತರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಹೂವಿನಹಡಗಲಿ ಶಾಖಾ ಗವಿಮಠದ ಶ್ರೀ ಹಿರಿಶಾಂತವೀರ ಮಹಾಸ್ವಾಮೀಜಿ, ನಂದಿಪುರದ ಡಾ| ಶ್ರೀ ಮಹೇಶ್ವರ ಸ್ವಾಮೀಜಿ, ಹಂಪಸಾಗರದ ನವಲಿಹಿರೇಮಠದ ಶ್ರೀ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತರಿಗೆ ಸನ್ಮಾನ ಮಾಡಲಾಯಿತು. ಕೊಪ್ಪಳ ಉಪ ವಿಭಾಗಾಧಿಕಾರಿ ರಮೇಶ್‌ ಕನರೆಡ್ಡಿ, ಹಗರಿಬೊಮ್ಮನಹಳ್ಳಿ
ತಹಶೀಲ್ದಾರ ಶರಣಮ್ಮ, ಮುಂಡರಗಿ ತಹಶೀಲ್ದಾರ ಆಶಪ್ಪ ಪೂಜಾರ್‌, ಕೊಟ್ಟೂರು ತಹಶೀಲ್ದಾರ ಅನಿಲ್‌ ಕುಮಾರ್‌, ಹೊಸಪೇಟೆ ಅಬಕಾರಿ ಉಪಾಧೀಕ್ಷಕ ಬಸವರಾಜ್‌ ಹಡಪದ, ಕೆಎಎಸ್‌ ಅಧಿ ಕಾರಿ ಭೀಮನಗೌಡ ಮಾತನಾಡಿದರು.

ಡಿ. ಬೋರಯ್ಯ, ಶ್ರೀನಿವಾಸ ಗಡಾದ್‌, ಬೇಳಗಾವಿ ಗೋಪಾಲ್‌ ಲಮಾಣಿ, ಹಾವೇರಿಯ ಗುಡ್ಡಪ್ಪ ಜಿಗಳಕೊಪ್ಪ, ಹುಣಸಗಿಯ ಸಿದ್ದೇಶ್‌ ಯಳವಾರ, ಧಾರವಾಡದ ಮಂಜುನಾಥ್‌, ಶಿರಹಟ್ಟಿಯ ಯಲ್ಲಪ್ಪ ಡಂಬಳ, ಕಮಲಾಪುರದ ಅರುಣ ರಾಥೋಡ್‌, ಮಂಗಳೂರು ಅಬಕಾರಿ ಅ ಧಿಕಾರಿ ವಿಶ್ವನಾಥ, ಗುಡ್ಡದ ಗಿರಿಧರ, ಮೈನಳ್ಳಿ ಕೊಟ್ರೇಶ್‌, ಮೂಲಿಮನಿ ರವಿಪ್ರಸಾದ್‌ ಇತರರಿದ್ದರು.

ಇದೇವೇಳೆ ಗ್ರಾಮದ ಗ್ರಂಥಾಲಯಕ್ಕೆ ಒಂದು ಲಕ್ಷ ರೂ. ಮೊತ್ತದ ಪುಸ್ತಕ ದೇಣಿಗೆ ನೀಡಿದರು. ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ಉಚಿತ ನೋಟ್‌ಬುಕ್‌ಗಳನ್ನು ನೀಡಿ ಗಮನಸೆಳೆದರು. ಕಾರ್ಯಕ್ರಮದಲ್ಲಿ ಹಾಸ್ಯರಸ, ಸುಗಮ ಸಂಗೀತ ಮಾನವ ಕಂಪ್ಯೂಟರ್‌, ಏಕಲವ್ಯ ನಾಟಕ ಪ್ರದರ್ಶನಗೊಂಡವು. ಉಪನ್ಯಾಸಕರಾದ ಜನಾರ್ಧನ ಮಡಿವಾಳರ, ಈಶ್ವರ ಕರಾತ್‌, ರಮೇಶ ನವಲಿ, ಸಿಆರ್‌ಪಿ ಯಂಕಾರೆಡ್ಡಿ ನಿರೂಪಿಸಿದರು.

ಓದಿ : ಶಿರ್ವ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ:ಗ್ರಾ.ಪಂ.ಅಧ್ಯಕ್ಷ ಗಾದಿ ಬಿಜೆಪಿ ತೆಕ್ಕೆಗೆ   

 

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.