ಮಕ್ಕಳು ಶಿಕ್ಷಣವಂತರಾಗಿ: ಮಲ್ಲಿಕಾರ್ಜುನ
ದರೋಜಿ ವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಟ್ಯೂಷನ್ ತರಗತಿ ಉದ್ಘಾಟಿಸಲಾಯಿತು.
Team Udayavani, Feb 15, 2021, 5:12 PM IST
ಸಂಡೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಶಿಕ್ಷಣ ಪಡೆಯಬೇಕು ಹಾಗೂ ಸಮಾಜ ಶಕ್ತಿಯಾಗಬೇಕು ಎನ್ನುವ ಮಹತ್ತರ ಉದ್ದೇಶವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದು ಹೆಮ್ಮೆ ಪಡುವಂತಹದ್ದು ಎಂದು ಅಂಗಡಿ ಮಲ್ಲಿಕಾರ್ಜುನ ತಿಳಿಸಿದರು.
ಅವರು ತಾಲೂಕಿನ ದರೋಜಿ ವಲಯದಲ್ಲಿ ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಟ್ಯೂಷನ್ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ಈಗಾಗಲೇ ಸಂಸ್ಥೆಯವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಟ್ಯಾಬ್ ವಿತರಣೆ, ಲ್ಯಾಪ್ ಟಾಪ್ ವಿತರಣೆ ಮತ್ತು ವಿಶೇಷ ವಿದ್ಯಾರ್ಥಿವೇತನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಪ್ರತಿಯೊಬ್ಬರೂ ಸಹ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಏಕಾಂಬರಪ್ಪ ಅವರು ಮಾತನಾಡಿ ಸಮಾಜಮುಖೀಯಾದ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಸಹಕರಿಸಬೇಕು. ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದೆ. ಆದ್ದರಿಂದ ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದರು. ದರೋಜಿ ವಲಯದ ಮೇಲ್ವಿಚಾರಕರಾದ ಅಜಿತ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ 600 ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗಿದೆ. ಇದೇ ರೀತಿ 10 ಕಡೆ ವಿತರಿಸಲಾಗಿದೆ ಎಂದರು.
ಒಕ್ಕೂಟದ ಅಧ್ಯಕ್ಷ ಪದ್ಮನಾಭ ಶೇರುಗರ್, ಲಕ್ಷ್ಮಿ ದೇವಿ, ಸ್ಥಳೀಯ ಶಿಕ್ಷಕರು, ಶ್ರೀದೇವಿ, ವಿಶಾಲಾಕ್ಷಿ, ಉಪಸ್ಥಿತರಿದ್ದರು. ಸೇವಾ ಪ್ರತಿನಿ ಧಿಗಳಾದ ಎ.ಜಿ. ಶಿಲ್ಪಾ ನಿರೂಪಿಸಿದರು, ಪದ್ಮಾವತಿ ಸ್ವಾಗತಿಸಿದರು. ಪಾರ್ವತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.