ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ಖಚಿತ
Team Udayavani, Apr 9, 2021, 6:47 PM IST
ಬಳ್ಳಾರಿ: ಇಲ್ಲಿನ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಲಭಿಸಲಿದ್ದು, ಪಾಲಿಕೆ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಪಾಲಿಕೆ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ಯು.ಟಿ.ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಕಳೆದ ಐದು ವರ್ಷಗಳ ಅವ ಧಿಯಲ್ಲಿ ಕಾಂಗ್ರೆಸ್ ನೀಡಿದ ಆಡಳಿತವನ್ನು ಜನರು ಮೆಚ್ಚಿದ್ದಾರೆ. ಹಿಂದುಳಿದ ಪ್ರದೇಶದಲ್ಲಿರುವ ಬಳ್ಳಾರಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಬಳ್ಳಾರಿಯ ಭವಿಷ್ಯದ ಅಭಿವೃದ್ಧಿ ದೃಷ್ಟಿಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಜನರ ಬಳಿಗೆ ಹೋಗುತ್ತೇವೆ. ಮತದಾರರು ಸಹ ಭವಿಷ್ಯದ ಬಳ್ಳಾರಿಯನ್ನು ದೃಷ್ಟಿಯಲ್ಲಿಟ್ಟುಕೊಂಡೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಕೋರಿದರು.
ಅನುದಾನ ನೀಡಿಲ್ಲ; ಈ ಹಿಂದೆ ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಅಂದಿನ ಸಿಎಂ ಕುಮಾರಸ್ವಾಮಿಯವರು ಬಜೆಟ್‌ನಲ್ಲಿ ಬಳ್ಳಾರಿ ನಗರಕ್ಕೆ 125 ಕೋಟಿ ರೂ.ಗಳನ್ನು ಘೋಷಣೆ ಮಾಡಿದ್ದರು. ಆದರೆ, ನಂತರ ಅಧಿ ಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈ ವರೆಗೆ ಒಂದು ರೂಪಾಯಿ ವಿಶೇಷ ಅನುದಾನ ನೀಡಿಲ್ಲ ಎಂದು ಆರೋಪಿಸಿದ ಯು.ಟಿ.ಖಾದರ್, ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಜನರು ಬಿಜೆಪಿ ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಮರೆಯಲ್ಲ. ನಗರಗಳ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಬಿಜೆಪಿಯನ್ನು ಪಾಲಿಕೆ ಚುನಾವಣೆಯಲ್ಲಿ ಸೋಲಿಸಲು ಮತದಾರರು ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಲಿದ್ದಾರೆ ಎಂದವರು ತಿಳಿಸಿದರು.
8 ತಂಡಗಳ ರಚನೆ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮತ್ತು ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಹಿರಿಯ ಮುಖಂಡರು ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ರಾಜ್ಯಸಭೆ ಸದಸ್ಯ ಡಾ| ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ಮಾಜಿ ಶಾಸಕರಾದ ಕೆ.ಎಸ್.ಎಲ್.ಸ್ವಾಮಿ, ಸೂರ್ಯ ನಾರಾಯಣರೆಡ್ಡಿ, ಅನಿಲ್‌ಲಾಡ್, ನಿರಂಜನ್‌ನಾಯ್ಡು ಸೇರಿ 8 ಸಮಿತಿ ರಚಿಸಲಾಗಿದೆ. ಈ ಎಂಟೂ ತಂಡದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳನ್ನು ಶಿಪಾರಸ್ಸು ಮಾಡಿ ಕೆಪಿಸಿಸಿಗೆ ಕಳುಹಿಸಲಿದ್ದಾರೆ. ಕೆಪಿಸಿಸಿ ಅಂತಿಮವಾಗಿ ಯಾರು ಸ್ಪರ್ಧೆ ಮಾಡಬೇಕು ಎಂಬುದನ್ನು ನಿರ್ಧರಿಸಲಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದರು.
159 ಅರ್ಜಿಗಳು: ಪಾಲಿಕೆಯ 39 ವಾಡ್ ಗಳಿಂದ ಈಗಾಗಲೇ 159 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ವಾರ್ಡ್‌ಗಳಲ್ಲಿ ಸ್ಪರ್ಧೆಗೆ ಕಾರ್ಯಕರ್ತರು ಉತ್ಸಾಹ ತೋರುತ್ತಿದ್ದಾರೆ. ಪಕ್ಷ ನಿಷ್ಠೆ, ಗೆಲ್ಲುವ ಅವಕಾಶ, ಚಾರಿತ್ರ ಆಧರಿಸಿ ಟಿಕೆಟ್ ನೀಡಲಾಗುವುದು. ಈ ವಿಷಯದಲ್ಲಿ ಎಲ್ಲೂ ರಾಜಿಯಾಗುವುದಿಲ್ಲ. ಬಳ್ಳಾರಿ ನಗರದಲ್ಲಿ ಸದ್ಯದ ವಾತಾವರಣ ನೋಡಿದರೆ ನಾವು ಪಾಲಿಕೆಯಲ್ಲಿ ಕನಿಷ್ಠ 30 ಸೀಟು ಪಡೆದು ಅಧಿ ಕಾರದ ಗದ್ದುಗೆ ಏರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಮಾತನಾಡಿ, ನಾವು ಎಲ್ಲರೂ ಒಟ್ಟಾಗಿದ್ದೇವೆ. ನಾವು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ನಮ್ಮಲ್ಲಿ ಭಿನ್ನಮತ ಇಲ್ಲ ಎಂದರು. ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಮಾತನಾಡಿ, ನಾವು ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ತುಂಬಾ ಜಾಗರೂಕರಾಗಿದ್ದೇವೆ. ಇಂದು ನಮಗೆ ಗೆಲುವು ಮುಖ್ಯ ನಿಜ. ಆದರೆ, ಅಭ್ಯರ್ಥಿ ಆಯ್ಕೆಗೆ ಗೆಲುವು ಮಾತ್ರ ಮಾನದಂಡ ಆಗದು. ಬದಲಿಗೆ ಆತನ ಚಾರಿತ್ರÂ ಸಹ ಮಾನದಂಡ ಆಗಲಿದೆ. ಪಕ್ಷನಿಷ್ಠೆ ಗಮನಿಸಿ ಟಿಕೆಟ್ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಮಾಜಿ ಶಾಸಕ ಅನಿಲ್ ಲಾಡ್ ಮಾತನಾಡಿ, ನಾವು ಬಳ್ಳಾರಿಯನ್ನು ಸಿಂಗಾಪುರ ಮಾಡುತ್ತೇವೆ ಎಂದು ಹೇಳಿರಲಿಲ್ಲ. ನಮ್ಮ ಅಧಿ ಕಾರವಧಿ ಯಲ್ಲಿ ಜಿಲ್ಲೆಯಾದ್ಯಂತ 3 ಸಾವಿರಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಇದೇ ಕಾರಣಕ್ಕೆ ಇಂದು ನಮ್ಮಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ನಗರದಲ್ಲಿ 29 ಕಡೆ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿತ್ತು. ಆದರೆ, ಇಂದು ಬಿಜೆಪಿಗರು ಈ ಘಟಕಗಳಲ್ಲಿದ್ದ ನನ್ನ ಫೋಟೊ ತೆಗೆದು ತಮ್ಮ ಫೋಟೊ ಹಾಕಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್, ಎಲ್.ಹನುಮಂತಯ್ಯ, ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಶಾಸಕ ನಿರಂಜನ ನಾಯ್ಡು, ಮುಖಂಡರಾದ ಜೆ.ಎಸ್. ಆಂಜನೇಯಲು ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.