ಕೃಷಿ ರಂಗದ ಕಾರ್ಮಿಕರ ಕೂಲಿ ಹೆಚ್ಚಿಸಲು ಒತ್ತಾಯ
Team Udayavani, Apr 16, 2021, 6:15 PM IST
ಸಿರುಗುಪ್ಪ: ತಾಲೂಕಿನ 27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವವರಿಗೆ ಕೃಷಿ ರಂಗದ ಕಾರ್ಮಿಕರಿಗೆ ನೀಡುವ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾ ಧಿಕಾರಿಗಳು ತಹಶೀಲ್ದಾರ್ ಕಚೇರಿ ಶಿರಸ್ತೆದಾರ್ ಬಾಬು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಸಂಘದ ತಾಲೂಕು ಅದ್ಯಕ್ಷ ಇ.ಆರ್ .ಯಲ್ಲಪ್ಪ ಮಾತನಾಡಿ, ಕೃಷಿ ಸಂಬಂಧಿ ತ ಕೆಲಸಗಳಲ್ಲಿ ತೊಡಗುವವರ ಕನಿಷ್ಠ ವೇತನವನ್ನು ಪರಿಷ್ಕರಿಸಿ 1-4-2020 ರಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶದ ಪ್ರಕಾರ ಕೃಷಿ ರಂಗದಲ್ಲಿ ಕೆಲಸ ಮಾಡುತ್ತಿರುವ ಕೃಷಿ ಕಾರ್ಮಿಕರಿಗೆ 424.80 ರೂ. ಕನಿಷ್ಠ ವೇತನ ಜಾರಿಯಾಗಿರುತ್ತದೆ. ಈಗ ಕೇಂದ್ರ ಸರ್ಕಾರ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವವರ ಕನಿಷ್ಠ ದಿನಗೂಲಿಯನ್ನು ಪರಿಷ್ಕರಿಸುವ ಆದೇಶ ಹೊರಡಿಸಿದೆ. 15-03-2021ರಂದು ಹೊರಡಿಸಲಾದ ಈ ಆದೇಶದ ಪ್ರಕಾರ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸಗಾರರ ಕನಿಷ್ಠ ದಿನಗೂಲಿ ಕರ್ನಾಟಕದಲ್ಲಿ ಕೇವಲ 289 ರೂ. ಇರುತ್ತದೆ. ಆದರೆ ಈ ಎರಡು ಕೂಲಿ ದರಗಳ ನಡುವೆ ಗಣನೀಯವಾದ ವ್ಯತ್ಯಾಸವಿದ್ದು, ಇದು ಕಾನೂನಿಗೆ ವಿರುದ್ಧವಾಗಿದೆ. ಉದ್ಯೋಗ ಖಾತ್ರಿ ಕೆಲಸಗಾರರ ವೇತನವನ್ನು ಕೃಷಿ ಕಾರ್ಮಿಕರಿಗೆ ಅಕುಶಲ ಕೆಲಸಕ್ಕೆ ನೀಡುವ ಕನಿಷ್ಠ ದಿನಗೂಲಿಗಿಂತ ಕಡಿಮೆಯಾಗಿರಬಾರದು.
ಈ ನ್ಯೂನ್ಯತೆಯನ್ನು ಸರಿಪಡಿಸಿ ಕೃಷಿ ಕಾರ್ಮಿಕರಿಗೆ ನೀಡುವಷ್ಟು ಕೂಲಿಯನ್ನು ಉದ್ಯೋಗಖಾತ್ರಿ ಕೆಲಸಗಾರರಿಗೂ ನೀಡಬೇಕು ಎಂದು ಆಗ್ರಹಿಸಿದರು. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ, ಗ್ರಾಮೀಣ ಕೂಲಿಕಾರರಿಗೆ ಜೀವನ ದುಸ್ತರವಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಮೇಲೆ ಅವರ ಅವಲಂಬನೆ ಹೆಚ್ಚಾಗಿದೆ. ಆದ್ದರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿ ದುಡಿಯುವವರ ಕನಿಷ್ಠ ದಿನಗೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ವಿ.ಗುರುಸ್ವಾಮಿ ಪದಾಧಿ ಕಾರಿಗಳಾದ ಎಚ್.ವಿ.ಲಕ್ಷ ¾ಣ, ಮಲ್ಲ, ಗಿರೀಶ, ತಿಮ್ಮಪ್ಪ, ಗಂಗಪ್ಪ, ಮಾರೆಮ್ಮ, ಈರಮ್ಮ, ದುರಗಮ್ಮ, ಅಂಬಮ್ಮ, ಮಾರುತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.