ಕೊರೊನಾ ತಡೆಗೆ ಬಿಗಿ ಕ್ರಮ ಕೈಗೊಳ್ಳಿ
Team Udayavani, Apr 20, 2021, 5:41 PM IST
ಬಳ್ಳಾರಿ: ಕೋವಿಡ್ 2ನೇ ಅಲೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದು, ಸೋಂಕಿಗೆ ಒಳಗಾಗಿ ಹೋಂ ಐಸೋಲೇಶನ್‌ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ತೀವ್ರ ನಿಗಾವಹಿಸಿ ಅವರನ್ನು ಹೊರಗೆ ತಿರುಗಾಡದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ ವಹಿಸದೇ ಬಿಗಿಯಾದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೂಚನೆ ನೀಡಿದರು.
ಬಳ್ಳಾರಿಯ ವಿಮ್ಸ್ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್ ತುರ್ತು ಪರಿಸ್ಥಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇವರನ್ನು ಹೊರಗಡೆ ಬಿಡುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಅಧಿ ಕಾರಿಗಳು, ರ್ಯಾಪಿಡ್ ರಿಸ್ಪಾನ್ಸ್ ಟೀಂ, ಸಂಬಂಧಿಸಿದ ಆಯಾ ವ್ಯಾಪ್ತಿಯ ವೈದ್ಯಾಧಿ ಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಿ ಕ್ರಮವಹಿಸಬೇಕು ಎಂದು ಸೂಚಿಸಿದ ಅವರು ಹೋಂ ಐಸೋಲೇಶನ್ ಇರುವವರ ವಿಷಯದಲ್ಲಿ ಉದಾಸೀನತೆ ತೋರಿದಲ್ಲಿ ಸೋಂಕು ವ್ಯಾಪಕವಾಗಿ ಹರಡಲಿದ್ದು, ಅದರ ಪರಿಣಾಮವನ್ನೆಲ್ಲ ನಾವೆಲ್ಲರೂ ಅನುಭವಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅವರು ಅ ಧಿಕಾರಿಗಳಿಗೆ ಹೇಳಿದರು.
ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ಜಾರಿ ಮಾಡಲಾಗಿರುವ ಕೊರೊನಾ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದ ಸಚಿವ ಸಿಂಗ್ ಅವರು ಮಾಸ್ಕ್ ಧರಿಸದವರಿಗೆ ದಂಡ ವಿಧಿ ಸುವ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಮುಂದುವರಿಸುವಂತೆ ಸೂಚಿಸಿದರು.
ಯುವಕರು ಮತ್ತು ಮಧ್ಯ ವಯಸ್ಕರು: ಕೋವಿಡ್ ಮೊದಲನೇ ಅಲೆ ಸಂದರ್ಭದಲ್ಲಿ ವಯಸ್ಕರು ಅತಿಹೆಚ್ಚಾಗಿ ಕೋವಿಡ್ ಸೊಂಕಿಗೆ ಒಳಗಾಗಿದ್ದರು. ಆದರೇ 2ನೇ ಅಲೆಯಲ್ಲಿ ಯುವಜನರು ಮತ್ತು ಮಧ್ಯವಯಸ್ಕರು ಅತಿಹೆಚ್ಚು ಸೋಂಕಿಗೆ ಒಳಗಾಗುತ್ತಿದ್ದಾರೆ. ಅವರ ಟ್ರಾವೆಲ್ ಹಿಸ್ಟರಿ ಅಧ್ಯಯನ ಮಾಡಿದಾಗ ಹೊರಗಡೆ ಪ್ರಯಾಣ ಮಾಡಿರುವುದು ಮತ್ತು ಎಸ್‌ಎಂಎಸ್ ನಿಯಮಾವಳಿಗಳನ್ನು ಪಾಲಿಸದಿರುವುದು ತಿಳಿದುಬಂದಿದೆ ಎಂದು ತಜ್ಞ ವೈದ್ಯರನೇಕರು ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಭಯ ಎನ್ನುವುದು ಕಡಿಮೆಯಾಗಿದೆ. ಸೋಂಕು ಬಂದರೂ ಸಹ ಆಸ್ಪತ್ರೆಯ ಕಿರಿಕಿರಿ ಯಾಕೆ ಅಂತ ಹೋಂ ಐಸೋಲೇಶನ್‌ನಲ್ಲಿರುತ್ತಿದ್ದಾರೆ. ಅದನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂಬ ಅಸಮಾಧಾನಗಳನ್ನು ಅವರು ತೋಡಿಕೊಂಡರು.
ಬಳ್ಳಾರಿ ಜಿಲ್ಲಾಧಿ ಕಾರಿ ಪವನಕುಮಾರ್ ಮಾಲಪಾಟಿ ಅವರು ಮಾತನಾಡಿ, ಜಿಲ್ಲೆಗೆ ರಾಜ್ಯ ಸರ್ಕಾರದಿಂದ ಪ್ರತಿನಿತ್ಯ 2350 ಕೋವಿಡ್ ಟೆಸ್ಟ್ ಮಾಡಬೇಕೆನ್ನುವ ಗುರಿ ನಿಗದಿಪಡಿಸಲಾಗಿದ್ದು ನಾವು ಪ್ರತಿನಿತ್ಯ 3500ರಿಂದ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು ಹಾಗೂ ಕೆಮ್ಮು ಮತ್ತು ಜ್ವರದ ಲಕ್ಷಣವಿದ್ದುಕೊಂಡು ಆಸ್ಪತ್ರೆಗೆ ಬರುವವರನ್ನು ಹಾಗೂ ಅತಿಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳಿ ಅಲ್ಲಿಯೂ ಜನರನ್ನು ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಸದ್ಯದ ಪಾಸಿಟಿವಿಟಿ ದರ 100ಕ್ಕೆ ಶೇ. 5ರಷ್ಟಿದ್ದು, ಇನ್ನೂ 10 ದಿನಗಳಲ್ಲಿ ಶೇ.10ಕ್ಕಿಂತ ಜಾಸ್ತಿಯಾಗಲಿರುವ ಆತಂಕದ ವಿಷಯವನ್ನು ಡಿಸಿ ಮಾಲಪಾಟಿ ಅವರು ಸಚಿವ ಆನಂದಸಿಂಗ್ ಅವರ ಗಮನಕ್ಕೆ ತಂದರು ಮತ್ತು ಇದಕ್ಕಾಗಿ ಜಿಲ್ಲಾಡಳಿತ ಕೈಗೊಂಡ ಸಿದ್ಧತಾ ಕ್ರಮಗಳನ್ನು ಅವರು ವಿವರಿಸಿದರು. ಕೋವಿಡ್ ಆಸ್ಪತ್ರೆಯನ್ನಾಗಿ ಟ್ರಾಮಾಕೇರ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದು, ಸೊಂಕಿತರು ಹೆಚ್ಚಾದಲ್ಲಿ ನ್ಯೂ ಡೆಂಟಲ್ ಕಾಲೇಜು, ಓಲ್ಡ್ ಡೆಂಟಲ್ ಕಾಲೇಜು, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಎಲ್ಲ ತಾಲೂಕು ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ಹಾಗೂ ಜಂಬುನಾಥ ಗುಡ್ಡದ ಬಳಿಯ ಹಾಸ್ಟೆಲ್, ಕನ್ನಡ ವಿವಿಯಲ್ಲಿರುವ ಎಸ್ಸಿ/ಎಸ್ಟಿ ಹಾಸ್ಟೆಲ್, ಕೂಡ್ಲಿಗಿಯ ಬಿಸಿಎಂ ಹಾಸ್ಟೆಲ್ ಹಾಗೂ ಸಿರಗುಪ್ಪದ ಪದವಿಪೂರ್ವ ಹಾಸ್ಟೆಲ್ ಸೇರಿದಂತೆ ಇನ್ನಿತರೆಡೆ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಿ ವೈದ್ಯರು ಮತ್ತು ನರ್ಸ್ ಹಾಗೂ ಸಿಬ್ಬಂದಿ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗಿದೆ ಎಂದರು.
ವಿವಿಧ ವಿಷಯಗಳ ಕುರಿತು ಸು ದೀರ್ಘವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ದೇವೆಂದ್ರಪ್ಪ, ಶಾಸಕರಾದ ಅಲ್ಲಂ ವೀರಭದ್ರಪ್ಪ, ಸೋಮಲಿಂಗಪ್ಪ, ಜಿಪಂ ಸಿಇಒ ಕೆ.ಆರ್. ನಂದಿನಿ, ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್, ಅಪರ ಜಿಲ್ಲಾಧಿ ಕಾರಿ ಮಂಜುನಾಥ, ಡಿಎಚ್‌ಒ ಡಾ| ಜನಾರ್ಧನ, ವಿಮ್ಸ್ ನಿರ್ದೇಶಕ ಡಾ| ಗಂಗಾಧರಗೌಡ ಮತ್ತಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.