ಹಂಪಿ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ
|ಮೇ 15ರವರೆಗೆ ಪ್ರವಾಸಿಗರಿಗೆ ಅವಕಾಶವಿಲ್ಲ |ಬ್ಯಾಟರಿ ಚಾಲಿತ ವಾಹನಗಳ ಓಡಾಟ ಬಂದ್ ವಿವಿಧ ಸಂಘಟನೆಗಳಿಂದ ಮನವಿ
Team Udayavani, Apr 20, 2021, 5:52 PM IST
ಹಗರಿಬೊಮ್ಮನಹಳ್ಳಿ: ಕಸಾಪ ರಾಜ್ಯ ಘಟಕ ಅಭ್ಯರ್ಥಿ ರಾಜಶೇಖರ್ ಮುಲಾಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಸಪೇಟೆ: ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಸ್ಮಾರಕಗಳ ವೀಕ್ಷಣೆಗೆ ಮೇ 15ರವರೆಗೆ ಭಾರತೀಯ ಪುರಾತತ್ವ ಇಲಾಖೆ ನಿಷೇ ಧಿಸಿ ಆದೇಶ ಹೊರಡಿಸಿದೆ. ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿತ್ತು. ಈಗ ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಹಂಪಿ ಸೇರಿದಂತೆ ದೇಶದ ರಾಷ್ಟ್ರೀಯ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ ವಿಧಿ ಸಿ ಆದೇಶಿಸಿದೆ. ಹೀಗಾಗಿ ಹಂಪಿಯಲ್ಲಿ ಸದಾ ಪ್ರವಾಸಿಗರಿಂದ ಲವಲವಿಕೆಯಾಗಿರುತ್ತಿದ್ದ ಸ್ಮಾರಕಗಳು ಈಗ ಪ್ರವಾಸಿಗರಿಲ್ಲದೇ ಖಾಲಿ ಖಾಲಿಯಾಗಿವೆ.
ಸ್ಮಾರಕಗಳು ಖಾಲಿ ಖಾಲಿ: ಹಂಪಿಯ ಕಮಲ ಮಹಲ್, ವಿಜಯ ವಿಠuಲ ದೇಗುಲ, ಕಲ್ಲಿನತೇರು, ಶ್ರೀಕೃಷ್ಣ ದೇಗುಲ, ಸಾಸಿವೆ ಕಾಳು ಗಣಪ, ಕಡಲೆಕಾಳು ಗಣಪ, ಉಗ್ರ ನರಸಿಂಹ, ಎದುರು ಬಸವಣ್ಣ ಮಂಟಪ, ಮಹಾನವಮಿ ದಿಬ್ಬ, ವರಾಹ ದೇಗುಲ, ಅಚ್ಯುತರಾಯ ದೇಗುಲ ಸೇರಿದಂತೆ ಹಂಪಿಯ ನಾನಾ ಸ್ಮಾರಕಗಳ ಬಳಿ ಪ್ರವಾಸಿಗರು ಇಲ್ಲದೇ ಖಾಲಿ ಹೊಡೆಯುತ್ತಿದೆ. ಹಂಪಿಯಲ್ಲಿ ಟಿಕೆಟ್ ಬುಕ್ಕಿಂಗ್ ಕಚೇರಿಗಳು ಕ್ಲೋಸ್ ಮಾಡಲಾಗಿದ್ದು, ನಿತ್ಯ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮ್ಯೂಸಿಯಂಗಳು ಕೂಡ ಬಂದ್ ಆಗಿವೆ.
ದೇಗುಲದಲ್ಲಿ ಪೂಜೆ: ಹಂಪಿ ಶ್ರೀವಿರೂಪಾಕ್ಷೇಶ್ವರ ದೇವಾಲಯದ ರಥಬೀದಿಯಲ್ಲೂ ಜನರಿಲ್ಲದಂತಾಗಿದೆ. ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆಮುಖವಾಗಿದೆ. ದೇಗುಲದಲ್ಲಿ ಪೂಜೆಗೆ ಅವಕಾಶ ಇದ್ದರೂ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಶ್ರೀವಿರೂಪಾಕ್ಷೇಶ್ವರ ದೇಗುಲದಲ್ಲಿ ಹಿಂದೂಧಾರ್ಮಿಕ ದತ್ತಿ ಇಲಾಖೆಯಿಂದ ನಿತ್ಯ ಪೂಜೆ ನಡೆಯಲಿದೆ. ದೇಗುಲದಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿ ಧಿಸಿಲ್ಲ. ಹೀಗಾಗಿ ಭಕ್ತರು ಆಗಮಿಸಬಹುದು. ಜತೆಗೆ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ಹೇಳುತ್ತಾರೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅ ಧಿಕಾರಿಗಳು.
ವೀಕೆಂಡ್‌ಗೆ ಬರುತ್ತಿದ್ದ ಪ್ರವಾಸಿಗರು: ಹಂಪಿಯಲ್ಲಿ ಲಾಕ್‌ಡೌನ್ ಬಳಿಕ ವೀಕೆಂಡ್‌ನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿತ್ತು. ಅದರಲ್ಲೂ ಸ್ಥಳೀಯ ಪೊಲೀಸರು ಪ್ರವಾಸಿಗರಿಗೆ ಮಾಸ್ಕ್ ಧರಿಸಲು ತಿಳಿ ಹೇಳುತ್ತಿದ್ದರೂ ನಿಯಮ ಪಾಲನೆಯಾಗುತ್ತಿರಲಿಲ್ಲ. ಈಗ ಪ್ರವಾಸಿಗರ ಪ್ರವೇಶ ನಿರ್ಬಂ ಧಿಸಿರುವುದರಿಂದ ಪ್ರಮುಖ ಪ್ರವಾಸಿ ತಾಣವಾಗಿರುವ ಹಂಪಿ, ಹೊಸಪೇಟೆ, ತುಂಗಭದ್ರಾ ಪ್ರದೇಶ, ದರೋಜಿ ಕರಡಿಧಾಮ ಹಾಗೂ ಅಟಲ್ ಬಿಹಾರಿ ಝೂಲಾಜಿಕಲ್ ಪಾರ್ಕ್‌ನಲ್ಲೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ.
ಬ್ಯಾಟರಿ ಚಾಲಿತ ವಾಹನಗಳ ಓಡಾಟ ಇಲ್ಲ: ಹಂಪಿ ಗೆಜ್ಜಲಮಂಟಪದಿಂದ ವಿಜಯ ವಿಠuಲ ದೇಗುಲದವರೆಗೆ ಹಂಪಿ ಅಭಿವೃದ್ಧಿ ಪ್ರಾ ಧಿಕಾರದಡಿಯಲ್ಲಿ ನಡೆಯುತ್ತಿದ್ದ ಬ್ಯಾಟರಿ ಚಾಲಿತ ವಾಹನಗಳ ಓಡಾಟವನ್ನೂ ನಿಲ್ಲಿಸಲಾಗಿದೆ. ಹಂಪಿಯಲ್ಲಿ ಸ್ಮಾರಕಗಳ ವೀಕ್ಷಣೆಗೆ ಭಾರತೀಯ ಪುರಾತತ್ವ ಇಲಾಖೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಪ್ರಾಧಿ ಕಾರ ಈ ಕ್ರಮಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.