ಕೋವಿಡ್ ಆದೇಶ ಕಟ್ಟು ನಿಟ್ಟಾಗಿ ಜಾರಿಗೊಳಿಸಿ
Team Udayavani, Apr 22, 2021, 5:28 PM IST
ಬಳ್ಳಾರಿ: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಅಧಿ ಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿ ಕಾರಿ ಪವನಕುಮಾರ್ ಮಾಲಪಾಟಿ ಸೂಚಿಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್‌ರು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು.
ರಾಜ್ಯಾದ್ಯಂತ ರಾತ್ರಿ 9ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿ ಧಿಸಿ ಸರ್ಕಾರ ಆದೇಶ ಹೊರಡಿಸಿದ್ದು ಇಂದಿನಿಂದ ಆರಂಭವಾಗಿ ಮೇ 4ರವರೆಗೆ ಜಾರಿಯಲ್ಲಿರಲಿದೆ. ಈ ಅವ ಧಿಯಲ್ಲಿ ವಾರಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳನ್ನು ಮಾತ್ರ ಷರತ್ತುಬದ್ಧ ಅನುಮತಿಯೊಂದಿಗೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ ಡಿಸಿ ಮಾಲಪಾಟಿ ಅವರು ನೈಟ್ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 8ಕ್ಕೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರ ವ್ಯವಸ್ಥೆ ಬಂದ್ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೇವಲ ಪಾರ್ಸ್‌ಲ್‌ಗೆ ಮಾತ್ರ ಅವಕಾಶವಿದ್ದು, ಕುಳಿತುಕೊಂಡು ಸೇವಿಸಲು ಅವಕಾಶವಿರುವುದಿಲ್ಲ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಕಟ್ಟಡ ಕಾರ್ಮಿಕ ಚಟುವಟಿಕೆಗಳಿಗೆ ವಿಕೆಂಡ್ ಕರ್ಫ್ಯೂ ಅವ ಧಿಯಲ್ಲಿ ಹೊರತುಪಡಿಸಿ ಉಳಿದ ಸಮಯದಲ್ಲಿ ಕೆಲಸ ನಿರ್ವಹಿಸಲು ಸಮಸ್ಯೆ ಇರುವುದಿಲ್ಲ ಎಂದರು.
ಮದುವೆ 50 ಜನರಿಗೆ ಅವಕಾಶ: ಜಿಲ್ಲೆಯಲ್ಲಿರುವ ಎಲ್ಲ ಕಲ್ಯಾಣಮಂಟಪಗಳನ್ನು ಇಂದೇ ಬಂದ್ ಮಾಡಬೇಕು. ಕಲ್ಯಾಣ ಮಂಟಪಗಳ ಮಾಲೀಕರು ತಮ್ಮ ಹತ್ತಿರ ಬಂದ ಸಂದರ್ಭದಲ್ಲಿ ಇದುವರೆಗೆ ಮುಂಗಡ ಮದುವೆ ಬುಕ್ ಆಗಿರುವ ಮಾಹಿತಿಗಳನ್ನು ಪಡೆದುಕೊಂಡು ಅವುಗಳಿಗೆ ಪ್ರತಿ ಮದುವೆಗೆ 50 ಜನರು ಮೀರದಂತೆ ಭಾಗವಹಿಸಲು ಸೂಚಿಸಿ ಷರತ್ತುಬದ್ಧ ಅನುಮತಿ ಮತ್ತು ಪಾಸ್‌ಗಳನ್ನು ವಿತರಿಸಬೇಕು ಎಂದು ಜಿಲ್ಲಾ ಧಿಕಾರಿ ಮಾಲಪಾಟಿ ಖಡಕ್ ಸೂಚನೆ ನೀಡಿದರು.
ಹಳ್ಳಿಗಳಲ್ಲಿ ಟೆಂಟ್ ಹಾಕಿಕೊಂಡು ಮದುವೆ ಮಾಡಲಾಗುತ್ತದೆ. ಇವುಗಳ ಮಾಹಿತಿಯನ್ನು ಮುಂಚಿತವಾಗಿಯೇ ಗ್ರಾಮೀಣ ಮಟ್ಟದ ಅಧಿಕಾರಿಗಳಿಂದ ಪಡೆದುಕೊಂಡು ಅನುಮತಿ ಪಡೆದು ನಿಯಮಾನುಸಾರ ನಡೆಸಲು ತಿಳಿಸಬೇಕು. ವಿಕೆಂಡ್ ಕರ್ಫ್ಯೂ ಅವ ಧಿಯಲ್ಲಿಯೂ ಅಂದರೆ ಶನಿವಾರ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವ್ಯಾಕ್ಸಿನೇಶನ್ ಮಾಡಬೇಕು (ನಗರ ಪ್ರದೇಶ ಹೊರತುಪಡಿಸಿ) ಎಂದರು.
ತೆರೆದ ಜಾಗದಲ್ಲಿ ಒಪನ್ ಮಾರುಕಟ್ಟೆ: ಕಳೆದ ಬಾರಿಯಂತೆ ಈ ಬಾರಿಯೂ ಮಾರುಕಟ್ಟೆಗಳಲ್ಲಿ ಜನಸಂದಣಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ತೆರೆದ ಜಾಗಗಳಲ್ಲಿ ಒಪನ್ ಮಾರುಕಟ್ಟೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸೈದುಲು ಅಡಾವತ್ ಮಾತನಾಡಿ, ಬಳ್ಳಾರಿಯು ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿರಾಜ್ಯವಾಗಿರುವುದರಿಂದ ಸಿರಗುಪ್ಪ ಮತ್ತು ಬಳ್ಳಾರಿ ತಾಲೂಕಿನ ಗಡಿ ಪ್ರದೇಶಗಳ ಬಳಿ ಈಗಾಗಲೇ ಚೆಕ್‌ಪೋಸ್ಟ್ ಆರಂಭಿಸಲಾಗಿದೆ. ಅಗತ್ಯ ಸೇವೆ ಸಂಚಾರ ಹೊರತುಪಡಿಸಿ ಅನಗತ್ಯ ಓಡಾಟಕ್ಕೆ ಬಂದವರನ್ನು ನಿಯಂತ್ರಿಸುವ ಕೆಲಸವಾಗಬೇಕು. ಯಾವುದೇ ರೀತಿಯ ದೂರಿಗೆ ಅಸ್ಪದ ನೀಡಬಾರದು ಎಂದು ಸೂಚನೆ ನೀಡಿದರು.
ಸರ್ಕಾರಿ ಸಿಬ್ಬಂದಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗಳನ್ನು ಕೋವಿಡ್ ಕರ್ತವ್ಯಕ್ಕಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಯಾರು ಕೂಡ ಈ ಕರ್ತವ್ಯಕ್ಕೆ ಬರುವುದಕ್ಕೆ ನಿರಾಕರಿಸುವಂತಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ವಿ ಧಿಸುವ ಕಾರ್ಯಾಚರಣೆ ಮುಂದುವರಿಸಿ ಎಂದು ಸೂಚನೆ ನೀಡಿದ ಎಸ್ಪಿ ಸೈದುಲು ಅಡಾವತ್ ಅವರು ಸರ್ಕಾರ ಹೊರಡಿಸಿರುವ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಂದಿನಿಂದಲೇ ಆರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾ ಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಸೇರಿದಂತೆ ಪೊಲೀಸ್ ಇಲಾಖೆ ಅಧಿ ಕಾರಿಗಳು ಹಾಗೂ ವಿವಿಧ ಇಲಾಖೆಗಳ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.