ಕೊರೊನಾ ತಡೆಗೆ ಕಠಿಣ ಕ್ರಮ
Team Udayavani, Apr 23, 2021, 7:01 PM IST
ಹರಪನಹಳ್ಳಿ: ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಹರಪನಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ನೈಟ್ ಕರ್ಫ್ಯೂ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು. ಪಟ್ಟಣದ ಸರಕಾರಿ ಪಪೂ ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಏರ್ಪಡಿಸಿದ್ದ ಜಾಗೃತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ತಹಶೀಲ್ದಾರ್ ಎಲ್.ಎಂ. ನಂದೀಶ್ ಮಾತನಾಡಿ, ಎಲ್ಲ ಧಾರ್ಮಿಕ ಕೇಂದ್ರಗಳು ಬಂದ್ ಆಗಲಿವೆ. ಕಲ್ಯಾಣ ಮಂಟಪಕ್ಕೆ ಇಲಾಖೆಯ ಅನುಮತಿ ಪಡೆಯಬೇಕು. 50 ಜನರಿಗೆ ಮಾತ್ರ ಸೀಮಿತವಿರಬೇಕು.
ಗುರುವಾರ ಹಾಗೂ ಭಾನುವಾರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಈ ಆದೇಶವನ್ನು ಸಾರ್ವಜನಿಕರು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೋರಿದರು.
ಡಿವೈಎಸ್ಪಿ ಹಾಲಮೂರ್ತಿರಾವ್ ಮಾತನಾಡಿ, ಮೇ 4ರ ವರೆಗೆ ಪ್ರತಿದಿನ ಬಟ್ಟೆ ಅಂಗಡಿ, ಜ್ಯುಯಲರಿ ಶಾಪ್ ಗಳು ಬಂದ್ ಆಗಲಿವೆ. ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ. ಬೀದಿಬದಿ ಅಂಗಡಿಗಳು ಬಂದ್ ಆಗಲಿವೆ. ಕೃಷಿ ಚಟುವಟಿಕೆಗಳಿಗೆ ಕಟ್ಟಡ ಕೆಲಸಗಳಿಗೆ ಅವಕಾಶವಿದೆ. ರಂಜಾನ್ ಹಬ್ಬ ಇರುವುದರಿಂದ ಮುಸ್ಲಿಂ ಸಮುದಾಯದವರು ರಾತ್ರಿ 9:00ರೊಳಗೆ ಪ್ರಾರ್ಥನೆ ಸಲ್ಲಿಸಿ ಮಸೀದಿಗಳನ್ನು ಬಂದ್ ಮಾಡಬೇಕು ಎಂದರು.
ವೃತ್ತ ನಿರೀಕ್ಷಕ ನಾಗರಾಜ್ ಎಂ. ಕಮ್ಮಾರ ಮಾತನಾಡಿ, ಹಬ್ಬಗಳನ್ನು ತಮ್ಮ ತಮ್ಮ ಮನೆಗಳಲ್ಲಿ ಆಚರಿಸಿ. ಕೋವಿಡ್ ನಿಯಂತ್ರಿಸಲು ಸಹಕಾರ ನೀಡಬೇಕು ಎಂದರು. ಪುರಸಭೆ ಮುಖ್ಯಾ ಧಿಕಾರಿ ಬಿ.ಆರ್. ನಾಗರಾಜ ನಾಯ್ಕ ಮಾತನಾಡಿ, ಪುರಸಭೆಯಿಂದ ಪ್ರತಿದಿನ ನಡೆಯುವ ದಿನವಹಿ ಸಂತೆ ಹಾಗೂ ಶನಿವಾರ ನಡೆಯುವ ವಾರದ ಸಂತೆಯನ್ನು ಹಡಗಲಿ ರಸ್ತೆಯ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗುವುದು. ಕಿರಾಣಿ ಅಂಗಡಿಯವರು ತಮ್ಮ ಅಂಗಡಿಗಳ ಮುಂದೆ ಸಾರ್ವಜನಿಕರಿಗೆ ಗುರುತು ಮಾಡಿ ಗ್ರಾಹಕರನ್ನು ಸಾಮಾಜಿಕ ಅಂತರದಿಂದ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಬೇಕು ಎಂದರು.
ಪುರಸಭೆ ಅಧ್ಯಕ್ಷ ಮಂಜುನಾಥ್ ಇಜಾಂತಕರ್, ಸದಸ್ಯರಾದ ಕಿರಣ್ ಕುಮಾರ್, ಪಿಎಸ್‌ಐಗಳಾದ ಸಿ.ಪ್ರಕಾಶ್, ಪ್ರಶಾಂತ್ ಕುಮಾರ್, ಕಿರಣ್‌ಕುಮಾರ್, ಚಿಗಟೇರಿ ಎಎಸ್‌ಐ ಕಲಾರಿ, ವಿವಿಧ ಸಮಾಜದ ಮುಖಂಡರು, ವ್ಯಾಪಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.