ಮಾರ್ಗಸೂಚಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸಿಎಂ ಸೂಚನೆ
Team Udayavani, Apr 30, 2021, 10:37 PM IST
ಬಳ್ಳಾರಿ: ರಾಜ್ಯದಲ್ಲಿ ಕೋವಿಡ್ ಪ್ರಸರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 12ರವರೆಗೆ ಹೊರಡಿಸಲಾಗಿರುವ ನಿರ್ಬಂಧಗಳನ್ನು ಒಳಗೊಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಜಿಲ್ಲಾ ಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಗಳು ಮಾಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೋವಿಡ್‌ಗೆ ಸಂಬಂಧಿ ಸಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಧಿಕಾರಿಗಳೊಂದಿಗೆ ಗುರುವಾರ ನಡೆದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಅವರು ಸೂಚನೆ ನೀಡಿದರು. ಈಗಾಗಲೇ ಹೊರಡಿಸಲಾಗಿರುವ ನಿಬಂಧದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅಂದಾಗ ಮಾತ್ರ ಕೋವಿಡ್ ಕಡಿಮೆಯಾಗಲು ಸಾಧ್ಯ. ಇಲ್ಲದಿದ್ದಲ್ಲಿ ಇನ್ನೂ 8-10 ದಿನ ಲಾಕ್‌ಡೌನ್ ಮಾಡಬೇಕಾಗುತ್ತದೆ. ಇದರಿಂದ ಜನರಿಗೆ ಅನಗತ್ಯ ತೊಂದರೆಯಾಗಲಿದ್ದು, ಇದಕ್ಕೆ ಆಸ್ಪದ ಮಾಡಿಕೊಡಬೇಡಬಾರದು ಎಂದು ಅವರು ಹೇಳಿದರು.
ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನು ಕೈಗೊಳ್ಳಬೇಕು. ಸರ್ಕಾರದಿಂದ ತಮಗೆ ಯಾವೆಲ್ಲವುಗಳ ಅಗತ್ಯವಿದೆಯೋ ಅವುಗಳನ್ನೆಲ್ಲ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಅನವಶ್ಯಕ ರೆಮಿ ಡೆಸಿವಿರ್ ಬಳಕೆ ಸಲ್ಲ: ಕೆಲವು ಜಿಲ್ಲೆಗಳಲ್ಲಿ ಅನವಶ್ಯಕವಾಗಿ ರೆಮೆ ಡೆಸಿವಿರ್ ಲಸಿಕೆಗಳನ್ನು ರೋಗಿಗಳಿಗೆ ನೀಡುತ್ತಿರುವುದು ಕಂಡುಬಂದಿದ್ದು, ಇದು ಸರಿಯಾದ ಕ್ರಮವಲ್ಲ. ಅವಶ್ಯಕತೆ ಇರುವವರಿಗೆ ಮಾತ್ರ ನೀಡಿ. ಖಾಸಗಿ ವೈದ್ಯರಿಗೆ ವಿನಾಕಾರಣ ರೆಮೆxಸಿವಿರ್ ಇಂಜೆಕ್ಷನ್ ಬೇಡಿಕೆ ಇರಿಸದಂತೆ ಸಭೆ ನಡೆಸಿ ಸೂಚನೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಗಳಿಗೆ ಸೂಚಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, 14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಬಂದಿದ್ದು, ಅವರನ್ನು ಪತ್ತೆಹಚ್ಚಿ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲಿರುವ ಕೋವಿಡ್ ಟಾಸ್ಕ್ಫೋಸ್ ಗಳನ್ನು ಬಲಪಡಿಸಬೇಕು. ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದರು.
ಬಳ್ಳಾರಿ ಜಿಲ್ಲಾ ಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಜಿಲ್ಲೆಯ ಕೋವಿಡ್ ಸ್ಥಿತಿಗತಿ, ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ| ಸಿ.ಎನ್. ಅಶ್ವತ್ ನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಆರೋಗ್ಯ ಸಚಿವ ಡಾ| ಸುಧಾಕರ್ ಸೇರಿದಂತೆ ಬಳ್ಳಾರಿಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಸೈದುಲು ಅಡಾವತ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.