ಮನೆ ಮನೆ ಸಮೀಕ್ಷೆಗೆ ನಿರ್ಧಾರ: ಮಾಲಪಾಟಿ
Team Udayavani, May 6, 2021, 10:21 PM IST
ಬಳ್ಳಾರಿ: ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪತ್ತೆಹಚ್ಚುವ, ಇಎಲ್‌ಐ ಮತ್ತು ತೀವ್ರ ಉಸಿರಾಟ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಹಾಗೂ ಕೊರೊನಾ ಪ್ರಸರಣ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಮನೆ ಮನೆ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಇದಕ್ಕಾಗಿ ನಗರದ 39 ವಾರ್ಡ್‌ಗಳಿಗೆ ತಲಾ ಓರ್ವ ನೋಡಲ್ ಅಧಿ ಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲಿ ನೋಡಲ್ ಅಧಿಕಾರಿ, ವೈದ್ಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ತಂಡದಲ್ಲಿರಲಿದ್ದಾರೆ. ಇವರು 39 ವಾರ್ಡ್‌ಗಳಲ್ಲಿರುವ ಪ್ರತಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ. ಈಗಾಗಲೇ ಈ ಕಾರ್ಯ ಎರಡು ದಿನಗಳಿಂದ ನಗರದಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಲಕ್ಷಣಗಳಿದ್ದರೂ ತಪಾಸಣೆ ಮಾಡಿಸದೇ ನಿರ್ಲಕ್ಷ ತೋರುತ್ತಿರುವುದು ಮತ್ತು ಸೋಂಕು ತೀವ್ರತರದಲ್ಲಿ ಉಲ್ಬಣಿಸಿದಾಗ ಆಸ್ಪತ್ರೆಗೆ ಬರುತ್ತಿರುವುದರಿಂದ ಮರಣಗಳು ಸಂಭವಿಸುತ್ತಿರುವುದು ಸೇರಿದಂತೆ ವಿವಿಧ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವುದಕ್ಕೆ ಮನೆ-ಮನೆ ಸಮೀಕ್ಷೆಯೇ ಮದ್ದು ಎಂದು ನಿರ್ಧರಿಸಿರುವ ಜಿಲ್ಲಾಡಳಿತ ಸಮೀಕ್ಷೆ ಆರಂಭಿಸಿದೆ. ಪ್ರತಿ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿರುವ ಈ ತಂಡಗಳು ಮನೆಯಲ್ಲಿರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಿವೆ. ಅವರಲ್ಲಿ ಯಾರಾದರೂ ಸೋಂಕಿತರೆಂದು ಕಂಡುಬಂದಲ್ಲಿ ಅವರ ರೋಗಲಕ್ಷಣಗಳ ಆಧಾರದ ಮೇರೆಗೆ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದನ್ನು ಶಿಫಾರಸ್ಸು ಮಾಡಲಿವೆ. ಹೋಂ ಐಸೋಲೇಷನ್ ಇದ್ದಲ್ಲಿ ಪ್ರತಿನಿತ್ಯ ನಿಗಾವಹಿಸಲು ಆರ್ ಆರ್‌ಟಿ ತಂಡಗಳಿಗೆ ತಿಳಿಸುವುದರ ಜತೆಗೆ ಸೋಂಕಿತರಿಗೆ ಔಷಧಿ ಕಿಟ್‌ಗಳನ್ನು ವಿತರಿಸಲಾಗುತ್ತದೆ.
ಇಎಲ್‌ಐ ಮತ್ತು ತೀವ್ರ ಉಸಿರಾಟ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಅವರಲ್ಲಿ ಪಾಸಿಟಿವ್ ಕಂಡುಬಂದಲ್ಲಿ ರೋಗಲಕ್ಷಣಗಳ ಆಧಾರದ ಮೇಲೆ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದನ್ನು ಶಿಫಾರಸ್ಸು ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ತಪಾಸಣೆ ನಡೆಸುವುದರ ಜೊತೆಗೆ ಆ ಮನೆಯಲ್ಲಿ ಈಗಾಗಲೇ ಕೋವಿಡ್ ಲಸಿಕೆ ಪಡೆದಿದ್ದರೇ ಅವರ ವಿವರವನ್ನು ಪಡೆದುಕೊಳ್ಳಲಿವೆ. ಎರಡು ಬಾರಿ ಲಸಿಕೆ ಪಡೆದಿದ್ದರೇ ಸಮಸ್ಯೆ ಇಲ್ಲ. ಒಂದು ಬಾರಿ ಲಸಿಕೆ ಪಡೆದು ಎರಡನೇ ಡೋಸ್ ಗಾಗಿ ಕಾಯುತ್ತಿರುವವರನ್ನು ಆದ್ಯತೆ ಮೇರೆಗೆ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಲು ಕ್ರಮವಹಿಸಲಾಗುತ್ತದೆ ಎಂದು ವಿವರಿಸಿದ ಜಿಲ್ಲಾ ಧಿಕಾರಿ ಮಾಲಪಾಟಿ ಅವರು ಸದರಿ ಮನೆಗಳಲ್ಲಿ 18ರಿಂದ 45 ವರ್ಷದೊಳಗಿನವರಿದ್ದಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳುವುದಕ್ಕೆ ಯಾವ ರೀತಿ ಆನ್ ಲೈನ್‌ನಲ್ಲಿ ತಮ್ಮ ಮಾಹಿತಿ ಭರ್ತಿ ಮಾಡಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ.
ಅಂಥವರ ಮಾಹಿತಿಯನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ. ನಗರದ ಪ್ರತಿಯೊಬ್ಬ ಸಾರ್ವಜನಿಕರು ಈ ಮನೆ-ಮನೆ ಸಮೀûಾ ಕಾರ್ಯಕ್ಕೆ ಸಹಕರಿಸುವುದರ ಮೂಲಕ ಕೊರೊನಾ ಪ್ರಸರಣ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.