ನೇತಾಜಿ ವಿಚಾರಧಾರೆಗಳಿಂದ ಬದಲಾವಣೆ ತನ್ನಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ
Team Udayavani, Jan 24, 2021, 4:14 PM IST
ಹೊಸಪೇಟೆ: ತಾಲ್ಲೂಕಿನ ವಿವಿಧೆಡೆ ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ (ಪರಾಕ್ರಮ ದಿವಸ)
ಶನಿವಾರ ಆಚರಿಸಲಾಯಿತು. ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ವತಿಯಿಂದ ತಾಲೂಕಿನ ಬಸವನದುರ್ಗಾ ಗ್ರಾಮದಲ್ಲಿ ನಗರದ ಬಾಸ್ಕೆಟ್‌ಬಾಲ್ ಕ್ರೀಡಾಂಗಣ ಮತ್ತು ಐಟಿಐ ಕಾಲೇಜಿನಲ್ಲಿ ಪರಾಕ್ರಮ ದಿವಸವನ್ನು ಆಚರಿಸುವ ಮೂಲಕ ಗೌರವ
ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರದ ವೈದ್ಯ ಡಾ| ಮಲ್ಲಿಕಾರ್ಜುನ ಕೆಂಚರೆಡ್ಡಿ, ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಸಮಾಜದಲ್ಲಿ ಜೀವಂತವಾಗಿರುವ ದೋಷಗಳನ್ನು ಅರ್ಥಮಾಡಿಕೊಂಡು ಸರಿಯಾದ ಚಿಕಿತ್ಸೆ ನೀಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಯುವಜನರು ಅಣಿಯಾಗಬೇಕು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರಧಾರೆ ಆಧಾರದ ಸಮಾಜದಲ್ಲಿ ಬದಲಾವಣೆ ತರಬೇಕು ಎಂದರು.
ಎಐಡಿವೈಓ ಅಖೀಲ ಭಾರತ ಉಪಾಧ್ಯಕ್ಷ ಡಾ| ಪ್ರಮೋದ್ ಮಾತನಾಡಿ, ದೆಹಲಿ ಗಡಿಗಳಲ್ಲಿ ಸುಮಾರು 1 ತಿಂಗಳಿಗೂ ಅಧಿ ಕ ದಿನಗಳವರೆಗೆ ಯಾವುದೇ ರಾಜಿಯಿಲ್ಲದೇ ಹೋರಾಟ ಮಾಡುತ್ತಿರುವ ರೈತರು ನಿಜವಾದ ನೇತಾಜಿಯವರ ಉತ್ತರಾಧಿ ಕಾರಿಗಳು. ದುಡಿಯುವವರ ್ರಮವನ್ನು ಕೊಳ್ಳೆಹೊಡೆದುಶ್ರೀಮಂತರಿಗೆ ಹಂಚುವ ಸರ್ಕಾರದ ನೀತಿಗಳನ್ನು ಎಲ್ಲರೂ ಖಂಡಿಸಬೇಕಿದೆ. ತಕ್ಷಣವೇ ರೈತರ ಬೇಡಿಕೆಗಳನ್ನು
ಈಡೇರಿಸಬೇಕು ಎಂದರು.
ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಯರ್ರಿಸ್ವಾಮಿ ಎಚ್. ಮಾತನಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್‌ರವರು ಬಂಡವಾಳಶಾಹಿ ರಾಷ್ಟ್ರದ ಕಲ್ಪನೆಯನ್ನು ವಿರೋಧಿಸುತ್ತಿದ್ದರು. ಬಡವರ ರಕ್ತ ಹೀರುವ ಶ್ರೀಮಂತರವಿರುದ್ಧ, ಕಾರ್ಪೋರೇಟ್ ಶಕ್ತಿಗಳ ವಿರುದ್ಧ ಮತ್ತೂಮ್ಮೆ ಸ್ವಾತತ್ರ ಚಳವಳಿಯ ರೀತಿಯಲ್ಲಿ ಅಸಮಾನತೆಗಳ ವಿರುದ್ಧ ಹೋರಾಟಗಳು ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು. ಮುಖಂಡರಾದ ಕಲ್ಮೇಶ್ ಗುದಿಗೇನವರ್, ಹುಲುಗಪ್ಪ, ಭಾಷಾ ಬೆನಕಾಪುರ, ಪ್ರಕಾಶ್ ನಾಯಕ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.