ಪಡಿತರ ಪಡೆಯಲು ಬಯೋಮೆಟ್ರಿಕ್‌ ಕಡ್ಡಾಯವಲ್ಲ: ಡಿಸಿ


Team Udayavani, May 14, 2021, 9:17 PM IST

14-16

ಬಳ್ಳಾರಿ: ಕೋವಿಡ್‌ ಹಿನ್ನೆಲೆಯಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡಿ ಪಡೆಯಬೇಕಾಗಿರುವುದಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೇ ತಿಂಗಳ ಪಡಿತರ ಚೀಟಿದಾರರ ಬೆರಳು ಮುದ್ರೆ (ಬಯೋಮೆಟ್ರಿಕ್‌) ಪಡೆಯದೇ ವಿತರಿಸಲು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಿಳಿಸಲಾಗಿದೆ. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಿಸಲು ಪಡಿತರ ಚೀಟಿದಾರರು ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡುವಂತೆ ಒತ್ತಾಯಿಸಬಾರದೆಂದು ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್‌ ಜತೆ ಜೋಡಿಸಿಕೊಂಡಿರುವ ಮೊಬೈಲ್‌ ಸಂಖ್ಯೆಗೆ ಓಟಿಪಿ ನೀಡಿ ವಿತರಿಸಲಾಗುವುದು. ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ವಿಶೇಷಚೇತನರಿಗೆ ವಿನಾಯತಿ ಸೌಲಭ್ಯದಡಿ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ/ ಕೈಬಿಲ್ಲು ಮೂಲಕವೂ ಪಡಿತರವನ್ನು ನೇರವಾಗಿ ವಿತರಿಸಲಾಲಾಗುವುದು. ಪಡಿತರ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯದ ಪಡಿತರ ಚೀಟಿದಾರರಿಗೆ ಪೋರ್ಟಬಲಿಟಿ ಸೌಲಭ್ಯದ ಮೂಲಕ ಪಡಿತರ ವಿತರಣೆ ಸಹ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ 2021ನೇ ಮೇ ತಿಂಗಳ ಪಡಿತರ ಪರಿಶೀಲನಾ ಪಟ್ಟಿ (ಚೆಕ್‌ ಲಿಸ್ಟ್‌) ಅಥವಾ ಯಾವುದಾದರೂ ಮೊಬೈಲ್‌ಗೆ ಓಟಿಪಿ ನೀಡುವ ಮೂಲಕ ವಿತರಿಸಲು ಅವಕಾಶ ನೀಡಬೇಕೆಂದು ರಾಜ್ಯ ಪಡಿತರ ವಿತರಕರ ಸಂಘ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿ ಪಡಿತರ ವಿತರಣೆಗೆ ಪರಿಶೀಲನಾ ಪಟ್ಟಿ ಸೌಲಭ್ಯ ಸೇರಿ ಪಡಿತರ ವಿತರಣೆಗೆ ಸುಲಭವಾಗಲು ಅನೇಕ ರೀತಿ ಅವಕಾಶ ನ್ಯಾಯಬೆಲೆ ಅಂಗಡಿಗೆ ಕಲ್ಪಿಸಲಾಗಿದೆ.

ಯಾವುದಾದರೂ ಮೊಬೈಲ್‌ಗೆ ಓಟಿಪಿ ಸೌಲಭ್ಯ ನೀಡುವ ಮೂಲಕ ಪಡಿತರ ವಿತರಿಸುವ ವಿಷಯವಾಗಿ ಸ್ಪಷ್ಟಪಡಿಸುವುದು ಏನೆಂದರೆ, ಇಂತಹ ಸೌಲಭ್ಯ ಕೋವಿಡ್‌ ಒಂದನೇ ಅಲೆ ಸಂದರ್ಭದಲ್ಲಿ ಕಲ್ಪಿಸಲಾಗಿತ್ತು. ಆಗ ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಒಂದೇ ಮೊಬೈಲ್‌ ನಂಬರ್‌ ಬಳಸಿ ಅನೇಕ ಪಡಿತರ ಚೀಟಿಗಳಿಗೆ ಪಡಿತರ ವಿತರಿಸಿರುವ ಪ್ರಕರಣಗಳು ವರದಿಯಾಗಿವೆ. ಇದರಿಂದ ಪಡಿತರ ದುರುಪಯೋಗ ಮಾಡಲು ಅವಕಾಶವಿರುತ್ತದೆ ಎಂದು ಅವರು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಯಂತೆ ಪಡಿತರವನ್ನು ರಾಜ್ಯಗಳು ಬಯೋದೃಢೀಕರಣದ ಮೂಲಕ ವಿತರಿಸಿದರೆ ಮಾತ್ರ ಅಂತಹ ವಿತರಣೆ ಮಾಹಿತಿಯೂ ಕೇಂದ್ರ ಸರ್ಕಾರದ ದತ್ತಾಂಶ ಕೇಂದ್ರಕ್ಕೆ ರವಾನೆಯಾಗುತ್ತದೆ.

ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಪ್ರತಿ ತಿಂಗಳ ಆಹಾರಧಾನ್ಯ ಹಂಚಿಕೆ ನೀಡುತ್ತದೆ. ಆದಾಗ್ಯೂ ರಾಜ್ಯದಲ್ಲಿ ಎದುರಾಗಿರುವ ಕೋವಿಡ್‌ ಎರಡನೇ ಅಲೆ ಪರಿಣಾಮ ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಅಧಿ ಕಾರಿಗಳ ಮೇಲೆ ಯಾವುದೇ ಆರೋಗ್ಯದ ದುಷ್ಪರಿಣಾಮ ಉಂಟಾಗುವುದನ್ನು ತಡೆಯಲು ಸರಳ ಮತ್ತು ಪಾರದರ್ಶಕ ಪಡಿತರ ವಿತರಣೆಗೆ ಅವಕಾಶ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಸರಳ ಮತ್ತು ಪಾರದರ್ಶಕ ಅವಕಾಶ ಕಲ್ಪಿಸಲಾಗಿದೆ; ಆದರೂ ಕೆಲವರು ಗೊಂದಲ ಸೃಷ್ಟಿಸುತ್ತಿರುವುದು ಆಧಾರರಹಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಕೋವಿಡ್‌ ರೋಗದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪಡಿತರ ಚೀಟಿದಾರರಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಹಂಚಿಕೆ ನೀಡಿರುವ ಪಡಿತರದ ವಸ್ತುಗಳು ನಿಗದಿತ ಸಮಯ ಮತ್ತು ಪ್ರಮಾಣದಲ್ಲಿ ಮತ್ತು ಆರೋಗ್ಯಪೂರ್ಣ ವಾತಾವರಣದಲ್ಲಿ ಸರಳ ಮಾರ್ಗಗಳ ಮೂಲಕ ವಿತರಣೆ ಆಗುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದ್ದಾರೆ.

ಯಾವುದೇ ಪಡಿತರ ಚೀಟಿದಾರರಿಗೆ ಅನಾನುಕೂಲವಾದಲ್ಲಿ ಅವರು ತಮ್ಮ ದೂರು ಬೆಂಗಳೂರಿನ ಆಯುಕ್ತಾಲಯದ ನಿಯಂತ್ರಣ ಕೊಠಡಿ ಸಂಖ್ಯೆ 1967, 1800-425-9339 ಮತ್ತು 14445 ದಾಖಲಿಸಲು ಹಾಗೂ ಜಂಟಿ ನಿರ್ದೇಶಕರ ಕಾರ್ಯಾಲಯ ಬಳ್ಳಾರಿ ಕಚೇರಿ ಸಂಖ್ಯೆ: 08392-272557 ಹಾಗೂ ಸಂಬಂ ಧಿಸಿದ ಗ್ರಾಪಂಗೆ ಅಥವಾ ತಹಶೀಲ್ದಾರ್‌ಗೆ ದೂರು ಸಲ್ಲಿಸಲು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.