ಸೋಂಕು ನಿಯಂತ್ರಣಕ್ಕೆ ಪಾಲಿಕೆಯಿಂದ ಕ್ರಮ
Team Udayavani, May 16, 2021, 10:07 PM IST
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆಯಿಂದ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಲ್ಹೋಟ್ ತಿಳಿಸಿದ್ದಾರೆ.
ಕೋವಿಡ್ ಸಮಯದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದ್ದು, 39 ವಾರ್ಡ್‌ಗಳಲ್ಲಿ ತಂಡಗಳನ್ನು ರಚಿಸಿ ಸಮೀಕ್ಷೆ ಕಾರ್ಯನಿರ್ವಹಿಸಲಾಗುತ್ತಿದೆ. ಸೋಂಕು ನಿವಾರಕ ಸಿಂಪಡಣೆ ಮಾಡುವ ಕೆಲಸ ಮಾಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಕೋವಿಡ್-19ರ ಎರಡನೇ ಅಲೆ ಹಿನ್ನೆಲೆಯಲ್ಲಿ ಸಂಪೂರ್ಣ ಕೊರೊನಾ ಕರ್ಫ್ಯೂ ಮಾಡಿರುವುದರಿಂದ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮ, ಜನಸಂದಣೆ ಪ್ರದೇಶಗಳನ್ನು ಬಂದ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಎಲ್ಲ ವಾರ್ಡಗಳಲ್ಲಿ ಪ್ರತಿನಿತ್ಯ ಫೂಮಿಗೇಷನ್ ಮಾಡಲಾಗಿರುತ್ತದೆ. ಪೌರಕಾರ್ಮಿಕರಿಗೆ ಪರಿಕರಗಳನ್ನು ಒದಗಿಸಲಾಗಿದೆ ಹಾಗೂ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. 5 ಇಂದಿರಾ ಕ್ಯಾಂಟಿನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ ಸರಬರಾಜು ಮಾಡಲಾಗಿದೆ ಹಾಗೂ ಪ್ರತಿದಿನ ಕೋವಿಡ್-19ರ ನಿಯಮಗಳನ್ನು ಉಲ್ಲಂಘಿ ಸಿದವರಿಗೆ ದಂಡ ವಿ ಧಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪಾಲಿಕೆಯಿಂದ ಕೈಗೊಂಡ ಕ್ರಮಗಳು: ಜನಜಾಗೃತಿ-ಪಾಲಿಕೆಯ ಕಸ ಸಂಗ್ರಹಣೆ ವಾಹನಗಳಲ್ಲಿ ಮತ್ತು ಇತರೆ ಮೈಕ್ ಇರುವ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಆಡಿಯೊ ಜಿಂಗಲ್ಸ್‌ಗಳನ್ನು ಹಾಕಲಾಗುತ್ತಿದೆ. ಸಾಮಾಜಿಕ ಮಾಧ್ಯಮದ ಮೂಲಕ-ಪಾಲಿಕೆಯ ವೆಬ್‌ಪೇಜ್, ಫೇಸ್ ಬುಕ್ ಪೇಜ್, ವಾಟ್ಸಾಪ್ ಗ್ರೂಪ್ಸ್‌ಗಳ ಮೂಲಕ ಅನಿಮೇಷನ್ ವಿಡಿಯೋ ತುಣುಕುಗಳು, ಸಂದೇಶಗಳು, ಡಿಜಿಟಲ್ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸಿಬ್ಬಂದಿ ನಗರದ ವಿವಿಧ ಪ್ರದೇಶಗಳ ಮನೆ-ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ಜನಸಂದಣಿ ಪ್ರದೇಶಗಳನ್ನು ಮುಚ್ಚಿಸಿರುವುದು: ನಗರದಲ್ಲಿ ಕೊರೊನಾ ಕರ್ಫ್ಯೂ ಸಮಯದಲ್ಲಿ ಪಾಲಿಕೆಯು ನಗರದ ಜನಸಂದಣಿ ಸ್ಥಳಗಳಾದ ಸಿನೆಮಾ ಟಾಕಿಸ್‌ಗಳು, ಹೋಟೆಲ್‌ಗಳು, ಶಾಪಿಂಗ್ ಮಳಿಗೆಗಳು, ವಾಣಿಜ್ಯ ಪ್ರದೇಶಗಳು, ಉಪಾಹಾರ ಗೃಹಗಳು ಇತ್ಯಾದಿಗಳನ್ನು ಮುಚ್ಚಿಸಿ ಜನರು ಗುಂಪಾಗಿ ಸೇರುವುದನ್ನು ತಪ್ಪಿಸಲು ಕ್ರಮಜರುಗಿಸಲಾಗಿದೆ. ಜಿಲ್ಲಾಡಳಿತದ ಸಹಯೋಗದೊಂದಿಗೆ ನಗರದ ಎಲ್ಲ 39 ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಕ್ಷಣಗಳಿರುವವರ ಸಮೀಕ್ಷೆ ನೆಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಾರ್ಡ್‌ವಾರು ತಂಡಗಳನ್ನು ರಚಿಸಿ ಸಮೀಕ್ಷೆ ನೆಡೆಸಲಾಗುತ್ತಿದೆ. ಅವಶ್ಯವಿದ್ದಲ್ಲಿ ಮೆಡಿಕಲ್ ಕಿಟ್ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ನಿವಾರಕ ಸಿಂಪಡಣೆ: ಪಾಲಿಕೆ ಎಲ್ಲ ವಾಡ್ ìಗಳಲ್ಲಿನ ಮುಖ್ಯ ರಸ್ತೆ ಮತ್ತು ಬಡಾವಣೆಗಳಲ್ಲಿ ಪಾಲಿಕೆಯ ಜೆಟ್ಟಿಂಗ್ ಯಂತ್ರ, ನೀರಿನ ಟ್ಯಾಂಕರ್ ಗೆ ಪಂಪ್ ಅಳವಡಿಸಿ ಮತ್ತು ಅಗ್ನಿಶಾಮಕ ದಳದ ವಾಹನ, ಎನ್‌ಎಂಡಿಸಿಯ ಮಿಸ್ ಕ್ಯನಾನ್ ಯಂತ್ರಬಳಸಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ.
ನಗರದ ಇಕ್ಕಟ್ಟಾದ ಪ್ರದೇಶಗಳು/ ವಸತಿ ವಲಯಗಳಲ್ಲಿ, ಚಿಕ್ಕ ರಸ್ತೆಗಳಲ್ಲಿ, ಕೊಳಚೆ ಪ್ರದೇಶಗಳಲ್ಲಿ, ವಾಣಿಜ್ಯ ಪ್ರದೇಶಗಳಲ್ಲಿ, ಬಸ್ ನಿಲ್ದಾಣಗಳು, ತರಕಾರಿ ಮಾರ್ಕೆಟ್‌ಗಳು ಇತ್ಯಾದಿ ಕಡೆಗಳಲ್ಲಿ ಪೆಟ್ರೋಲ್ ಪಂಪ್ ಚಾಲಿತ ಬ್ಯಾಕ್‌ಪ್ಯಾಕ್ ಸ್ಪ್ರೆàಯರ್‌ಗಳು ಮತ್ತು ಹ್ಯಾಂಡ್ ಪಂಪ್ ಸ್ಪ್ರೆಯರ್‌ಗಳನ್ನು ಬಳಸಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬಳ್ಳಾರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಫೂÂಮಿಗೇಷನ್ ಮಾಡಲಾಗುತ್ತಿದೆ. ಪೌರಕಾರ್ಮಿಕರಿಗೆ ಅವಶ್ಯವಿರುವ ಧರಿಸುಗಳಾದ ಮಾಸ್ಕ್, ಕೈಗವಸು, ಶೂಗಳು, ರಿಫ್ಲೆಕ್ಟರ್ ಜಾಕೆಟ್‌ಗಳನ್ನು ವಿತರಿಸಲಾಗಿದೆ.
ಎಲ್ಲ ಪೌರಕಾರ್ಮಿಕರಿಗೆ ಪ್ರತಿದಿನ ಥರ್ಮಲ್ ಸ್ಕಾÂನಿಂಗ್ ಮೂಲಕ ತಾಪಮಾನ ಪರೀಕ್ಷಿಸಿ ಮುಂಜಾಗ್ರತೆ ವಹಿಸಲಾಗುತ್ತಿದೆ. ಕೋವಿಡ್-19ರ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಪಾಲಿಕೆ ಎಲ್ಲ ಸಿಬ್ಬಂದಿಗೆ ಹಾಗೂ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ನಗರಲ್ಲಿರುವ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಸ್ವತ್ಛತೆ ಮತ್ತು ಭೌತಿಕ ಅಂತರಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ನಿರ್ದೇಶನದಂತೆ ಮೇ 11ರಿಂದ ನಗರದಲ್ಲಿರುವ 5 ಇಂದಿರಾ ಕ್ಯಾಂಟೀನ್‌ಗಳಿಂದ ಮೂರು ಹೊತ್ತು ಉಚಿತ ಊಟ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಹೋಂ ಕ್ವಾರಂಟೈನ್ ಮನೆಗಳು/ಸ್ಥಳಗಳಿಂದ ನಿರ್ದೇಶನಾನುಸಾರ ಕಸವನ್ನು ಸಂಗ್ರಹಿಸಿ ನಿಯಮಾನುಸಾರ ವಿಲೇವಾರಿ ಮಾಡಲು, ಬಯೋಮೆಡಿಕಲ್ ವೇಸ್ಟ್‌ಪೊಸಸ್ಸಿಂಗ್ ಏಜನ್ಸಿಗೆ ಜವಾಬ್ದಾರಿ ವಹಿಸಿ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ಸೂಕ್ತ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿರುವ ಅವರು ಪ್ರತಿ ದಿನ ಕೋವಿಡ್-19ರ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿ ಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.