20 ಬೆಡ್‌ಗಳಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ
Team Udayavani, May 18, 2021, 9:01 PM IST
ಹಗರಿಬೊಮ್ಮನಹಳ್ಳಿ: ಪಟ್ಟಣದ ನೂರು ಹಾಸಿಗೆಯ ಆಸ್ಪತ್ರೆಯ 20ಬೆಡ್‌ಗಳಿಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಶಾಸಕ ಎಸ್.ಭೀಮಾನಾಯ್ಕ ತಿಳಿಸಿದರು.
ಪಟ್ಟಣದ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಜೊತೆಗೆ ಶೀಘ್ರದಲ್ಲಿ ಪೊÉàಮೀಟರ್‌ನ್ನು ನೀಡಲಾಗುವುದು. ಪೊÉàಮೀಟರ್‌ಗೆ ಬಹಳ ಡಿಮ್ಯಾಂಡ್ ಇರುವುದರಿಂದ ಸದ್ಯಕ್ಕೆ ಸಿಕ್ಕಿಲ್ಲ, ಮುಂದಿನ ದಿನಗಳಲ್ಲಿ ಅಗತ್ಯವಾಗಿ 50ಪೊ ಮೀಟರ್‌ಗಳನ್ನು ವೈಯಕ್ತಿಕವಾಗಿ ನೀಡಲಾಗುವುದು. ವರಲಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 50 ಆಕ್ಸಿಜನ್ ಬೆಡ್ ಗಳನ್ನು ಕೊಡಲೇ ರೋಗಿಗಳಿಗೆ ಒದಗಿಸಲಾಗುವುದು. ಕೊರೊನಾ ಟೆಸ್ಟ್ ಕಡಿಮೆಯಾದಂತೆ ಕೊರೊನಾ ಸಂಖ್ಯೆ ಕಡಿಮೆಯಾಗುತ್ತದೆ. ಆರ್‌ಟಿಪಿಸಿಆರ್ ಮೆಸೇಜ್ ಕೂಡಲೇ ಬರದಿರುವುದರಿಂದ ಕೊರೊನಾ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣವಾಗಿದೆ.
ವೈರಸ್‌ನ್ನು ನಿರ್ಲಕ್ಷ ಮಾಡದೆ ಧೈರ್ಯದಿಂದ ಎದುರಿಸೋಣ. ತಂಬ್ರಹಳ್ಳಿ ಸೀಲ್‌ಡೌನ್ ಆಗಿರುವುದು ಬೇಸರ ತರಿಸಿದೆ. ಎರಡು ದಿನದೊಳಗೆ ತಂಬ್ರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ತಂಬ್ರಹಳ್ಳಿಯನ್ನು ಕೊರೊನಾ ಮುಕ್ತ ಮಾಡುವುದಕ್ಕೆ ಪ್ರಯತ್ನ ಮಾಡಲಾಗುವುದು. 20 ಕೋಟಿ ರೂ. ಮೊತ್ತದಲ್ಲಿ ಪಟ್ಟಣದ ಹೊರವಲಯದಲ್ಲಿ 200 ಹಾಸಿಗೆಯ ನೂತನ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗುವುದು.
ಎಲ್ಲ ಹಳ್ಳಿಯ ಜನರು ನಿಮ್ಮ ನಿಮ್ಮ ಗ್ರಾಮಗಳನ್ನು ಸ್ವಇಚ್ಛೆಯಿಂದ ಸೀಲ್‌ಡೌನ್ ಮಾಡಿಕೊಳ್ಳಿ. ಮನೆಯಿಂದ ಯಾರು ಹೊರಗಡೆ ಬರಬೇಡಿ, ಲಾಕ್ ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿರಿ. ನಮ್ಮ ಪ್ರಾಣವನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು. ತಾಲೂಕಿನಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಫೇಲ್ ಆಗಿದೆ ಎಂದು ದೂರಿದರು. ತಾಲೂಕಿನಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಸಿಲಿಂಡರ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಕವಿತಾ ವಿಜಯಕುಮಾರ ಹಾಲ್ದಾಳ್, ತಹಶೀಲ್ದಾರ್ ಶರಣಮ್ಮ, ತಾಲೂಕು ವೈದ್ಯಾಧಿ ಕಾರಿಗಳಾದ ಡಾ| ಶಿವರಾಜ್, ಡಾ| ಶಂಕ್ರನಾಯ್ಕ, ಇಒ ಹಾಲಸಿದ್ದಪ್ಪ ಪೂಜಾರ್, ಬಿಇಒ ಶೇಖರಪ್ಪ, ಪಿಡಬ್ಲೂಡಿ ಎಇಇ ಪ್ರಭಾಕರಶೆಟ್ರಾ, ತೋಟಗಾರಿಕೆ ಇಲಾಖೆಯ ಎಇಇ ಪರಮೇಶ್ವರಪ್ಪ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ, ಗುಂಡ್ರು ಹನುಮಂತ, ಕೆಜಿಎನ್ ದಾದು, ಪವಾಡಿ ಹನುಮಂತಪ್ಪ, ಬಾಲಕೃಷ್ಣಬಾಬು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.