ಭತ್ತ ಬೆಳೆದವರಿಗೆ ದಲ್ಲಾಳಿಗಳ ಬರೆ!
Team Udayavani, May 18, 2021, 9:12 PM IST
ಆರ್.ಬಸವರೆಡ್ಡಿ ಕರೂರು
ಸಿರುಗುಪ್ಪ: ತಾಲೂಕಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಭತ್ತ ಬೆಳೆದ ರೈತರ ಭವಿಷ್ಯ ದಲ್ಲಾಳಿಗಳ ಕೈಯಲ್ಲಿದ್ದು, ದಲ್ಲಾಳಿಗಳು ನಿಗದಿ ಮಾಡಿದ ದರದಲ್ಲಿಯೇ ಭತ್ತ ಮಾರಾಟವಾಗುತ್ತಿದ್ದು ಭತ್ತ ಬೆಳೆದ ರೈತರಿಗೆ ಉತ್ತಮ ಬೆಲೆ ದೊರೆಯದೆ ಭತ್ತವನ್ನು ಯಾಕಾದರು ಬೆಳೆದೇವೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೇಸಿಗೆ ಹಂಗಾಮಿನಲ್ಲಿ ಒಟ್ಟು 28 ಸಾವಿರದಿಂದ 31ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಭತ್ತದ ಬೆಳೆಗೆ ಕಣೆನೊಣದ ಬಾಧೆ ಕಾಣಿಸಿಕೊಂಡಿದ್ದರಿಂದ 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಭತ್ತ ಬೆಳೆಯಲಾಗಿದೆ. ಇದರಲ್ಲಿ ಶೇ.30ರಷ್ಟು ರೈತರು ಈಗಾಗಲೇ ದಲ್ಲಾಳಿಗಳು ನಿಗ ಪಡಿಸಿದ ದರದಲ್ಲಿಯೇ ಭತ್ತವನ್ನು ಮಾರಾಟ ಮಾಡಿದ್ದಾರೆ.
ಇನ್ನು ಶೇ. 70ರಷ್ಟು ರೈತರು ತಮ್ಮ ಭತ್ತಕ್ಕೆ ಉತ್ತಮ ಬೆಲೆ ದೊರೆಯುತ್ತದೆಂಬ ನಿರೀಕ್ಷೆಯಲ್ಲಿಯೇ ಭತ್ತ ಮಾರಾಟ ಮಾಡದೇ ರಾಶಿ ಮಾಡಿಟ್ಟುಕೊಂಡಿದ್ದಾರೆ. ಸದ್ಯ ಮಾರುಕಟ್ಟೆಯಲ್ಲಿ ಕ್ವಿಂಟಲ್ ಆರ್‌ಎನ್ ಆರ್ ಭತ್ತಕ್ಕೆ ರೂ.1510, ಗಂಗಾ ಕಾವೇರಿ, ಕಾವೇರಿ ಸೋನಾ ಭತ್ತಕ್ಕೆ ರೂ.1550 ನಿಗದಿಯಾಗಿದ್ದು, ಇದೇ ದರಕ್ಕೆ ಶೇ. 30ರಷ್ಟು ರೈತರು ಭತ್ತವನ್ನು ಮಾರಾಟ ಮಾಡಿದ್ದಾರೆ.
ಮುಕ್ತ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಹೆಚ್ಚಳವಾಗಲು ಸರ್ಕಾರ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸುತ್ತಿತ್ತು. ಏ. ಗ್ರೇಡ್ ಭತ್ತಕ್ಕೆ ರೂ.1886, ಸಾಮಾನ್ಯ ಭತ್ತಕ್ಕೆ ರೂ.1866 ಬೆಲೆ ನಿಗದಿಪಡಿಸಿ ಖರೀದಿ ಮಾಡುತ್ತಿತ್ತು. ಇದರಿಂದಾಗಿ ಮುಕ್ತ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಹೆಚ್ಚಾಗುತ್ತಿತ್ತು. ಸರ್ಕಾರ ನಗರದ ಎಪಿಎಂಸಿ ಆವರಣದಲ್ಲಿ ತೆರೆದಿರುವ ಖರೀದಿ ಕೇಂದ್ರದಲ್ಲಿ ರೈತರಿಂದ ಭತ್ತ ಮಾರಾಟಕ್ಕೆ ನೋಂದಣಿ ಮಾಡಿಸಿಕೊಂಡಿತ್ತು. ಆದರೆ ಈಗ ಕೋವಿಡ್ ಕಾರಣದಿಂದ ಭತ್ತ ಖರೀದಿ ಮಾಡುವುದನ್ನು ಸ್ಥಗಿತಗೊಳಿಸಿದೆ.
ಖರೀದಿ ಕೇಂದ್ರದಲ್ಲಿ ಈ ವರ್ಷ ಬೇಸಿಗೆ ಹಂಗಾಮಿನ ಭತ್ತ ಖರೀದಿ ಮಾಡಲಾಗುತ್ತದೆಯೋ ಇಲ್ಲವೋ ಎನ್ನುವ ಬಗ್ಗೆ ಯಾವುದೇ ಅಧಿ ಕಾರಿಗಳು ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇರುವುದರಿಂದ ನೋಂದಣಿ ಮಾಡಿಸಿದ ರೈತರು ಭತ್ತ ಖರೀದಿ ಕೇಂದ್ರಕ್ಕೆ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ, ತಹಶೀಲ್ದಾರ್ ಕಚೇರಿಗೆ ಅಲೆಯುವಂತಾಗಿದೆ.
ಕಳೆದ ಮುಂಗಾರು ಹಂಗಾಮಿನಲ್ಲಿ ಭತ್ತ ಖರೀದಿ ಕೇಂದ್ರವನ್ನು ಸರ್ಕಾರ ಆರಂಭಿಸಿದ್ದರಿಂದ ಮುಕ್ತ ಮಾರುಕಟ್ಟೆಯಲ್ಲಿ, ಖರೀದಿ ಕೇಂದ್ರದಲ್ಲಿ ದೊರೆಯುವ ಬೆಂಬಲ ಬೆಲೆಗಿಂತ ಹೆಚ್ಚಿನ ಬೆಲೆಗೆ ಭತ್ತ ಮಾರಾಟವಾಗಿತ್ತು. ಬೇಸಿಗೆ ಹಂಗಾಮಿನ ಭತ್ತ ಖರೀದಿಗೆ ನೋಂದಣಿ ಮಾಡಿಸಿದ್ದೇವೆ, ಆದರೆ ಖರೀದಿ ಇನ್ನೂ ಪ್ರಾರಂಭವಾಗಿಲ್ಲ.
ಭತ್ತ ಖರೀದಿ ಮಾಡುತ್ತೀರಾ ಇಲ್ಲವೆ ಎಂದು ಸಂಬಂ ಧಿಸಿದ ಇಲಾಖೆಗಳ ಅಧಿ ಕಾರಿಗಳನ್ನು ಕೇಳಿದರೆ ಯಾರು ಸರಿಯಾದ ಮಾಹಿತಿ ನೀಡುತ್ತಿಲ್ಲವೆಂದು ಭತ್ತ ಖರೀದಿಗೆ ನೋಂದಣಿ ಮಾಡಿಸಿದ ಅನೇಕ ರೈತರು ದೂರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.