ಹಳ್ಳಿಯಲ್ಲೂ ಆರೋಗ್ಯ ತಪಾಸಣೆ ನಡೆಸಿ


Team Udayavani, May 23, 2021, 9:25 PM IST

23-19

ಕೊಟ್ಟೂರು: ಪ್ರತಿ ಹಳ್ಳಿ ಹಳ್ಳಿಗೂ ಜನರಿಗೆ ಆರೋಗ್ಯ ತಪಾಸಣೆ ಮಾಡಬೇಕು. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ 250 ಫ್ಲೋಮೀಟರ್‌ ಹೊಂದಿರುವ ಆಕ್ಸಿಜನ್‌ ಸಿಲಿಂಡರ್‌ಗಳಿಗೆ ಸ್ವತಃ ಖರ್ಚು ಭರಿಸುವುದಾಗಿ ಶಾಸಕ ಎಸ್‌. ಭೀಮಾನಾಯ್ಕ ಭರವಸೆ ನೀಡಿದರು.

ಪಟ್ಟಣದಲ್ಲಿ ಶನಿವಾರ ನಡೆದ ಟಾಸ್ಕ್ಫೋರ್ಸ್‌ ಸಭೆಯಲ್ಲಿ ಶಾಸಕ ಎಸ್‌. ಭೀಮಾನಾಯ್ಕ ಮಾತನಾಡಿ, ಕೊಟ್ಟೂರು ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಈ ಕೊರೊನಾ 2ನೇ ಅಲೆ ಅಬ್ಬರಿಸಿದ್ದರಿಂದ ಇಲ್ಲಿನ ಅ ಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿ ಜಿಲ್ಲೆ ರೆಡ್‌ ಜೋನ್‌ನಲ್ಲಿದೆ. ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಏರಿಕೆ ಕಾಣುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಕಳೆದೊಂದು ತಿಂಗಳಿಂದ ಕಂಟ್ರೊಲ್‌ಗೆ ಸಿಗದಂತಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಲಾಕ್‌ಡೌನ್‌ ಅವಶ್ಯಕವಾಗಿ ಬೇಕು. ಆದರೆ ಯಾರು ಹೊರಗಡೆ ಬಾರದಂತೆ ಕ್ರಮ ವಹಿಸಬೇಕು. ಇದರ ಜವಾಬ್ದಾರಿಯು ತಾಲೂಕು ಆಡಳಿತ ಮತ್ತು ಬಿಗಿ ಭದ್ರತೆ ಒದಗಿಸುವ ಪೊಲೀಸ್‌ ಇಲಾಖೆಯದ್ದು. ಪ್ರತಿ ಗ್ರಾ.ಪಂ ಪಿಡಿಒಗಳು ಸಹ ಕೈ ಜೋಡಿಸಿ ಕೊರೊನಾ ಹಾವಳಿ ತಡೆಗಟ್ಟಲು ಮುಂದಾಗಬೇಕು ಎಂದರು.

ಆರೋಗ್ಯ ಇಲಾಖೆಯವರು ಕೊರೊನಾ ಗುಣಲಕ್ಷಣ ಹೊಂದಿದವರಿಗೆ ರ್ಯಾಪಿಡ್‌ ಟೆಸ್ಟ್‌ ಅವಶ್ಯಕವಾಗಿ ಮಾಡಿ ನಂತರ ಲಸಿಕೆಯನ್ನು ಎಲ್ಲರಿಗೂ ದೊರಕುವಂತೆ ಕ್ರಮ ವಹಿಸಿ ಇನ್ನೂ ಹೆಚ್ಚಿನ ಚಿಕಿತ್ಸೆ ಬೇಕಾದ ಕೊರೊನಾ ರೋಗಿಗಳನ್ನು ಹತ್ತಿರದ 100ಬೆಡ್‌ಗಳನ್ನು ಹೊಂದಿರುವ ಮೊರಾರ್ಜಿ ದೇಸಾಯಿ ಶಾಲೆ ಕಂದಗಲ್ಲು ಇಲ್ಲಿಗೆ ಕಳುಹಿಸಲು ತಿಳಿಸಿದರು. ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 3 ಹೊತ್ತು ಊಟ, ಆಕ್ಸಿಜನ್‌ ಸೌಲಭ್ಯ, ಮೆಡಿಸನ್‌ ಸೌಲಭ್ಯ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಲಾಕ್‌ಡೌನ್‌ ಇರುವುದರಿಂದ ಜನತೆಗೆ ತೊಂದರೆಯಾಗದಂತೆ ಪ್ರತಿ ವಾರ್ಡ್‌ಗಳಿಗೆ ತಳ್ಳುವ ಗಾಡಿ ಮೂಲಕ ಮನೆ ಬಾಗಿಲಿಗೆ ತರಕಾರಿ, ಹಣ್ಣುಗಳು, ಇತರೆ ದಿನಸಿ ಪದಾರ್ಥಗಳು ತಲುಪುವಂತೆ ಕ್ರಮವಹಿಸಲು ತಹಶೀಲ್ದಾರ್‌ರಿಗೆ ತಿಳಿಸಿದರು.

ಪಾಸಿಟಿವ್‌ ಹೊಂದಿರುವವರು ಹೊರಗಡೆ ಓಡಾಡುವುದು ಕಂಡು ಬಂದರೆ ಅವರನ್ನು ಕೂಡಲೇ ಚಿಕಿತ್ಸೆಗೆ ಕಂದಗಲ್ಲು ಮೊರಾರ್ಜಿ ದೇಸಾಯಿ ಶಾಲೆಗೆ ಕಳುಹಿಸಲು ತಿಳಿಸಿದರು. ಪಟ್ಟಣದಲ್ಲಿ ಪ್ರತಿ ವಾರ್ಡ್‌ಗಳಿಗೂ ಡಿ.ಡಿ.ಟಿ ಪೌಡರ್‌ ಸಿಂಪಡಣೆ ಮತ್ತು ಸೋಡಿಯಂ ಕ್ಲೋರೈಡ್‌ ಔಷ ಧ ಸಿಂಪಡಣೆ, ಫಾಗಿಂಗ್‌, ಚರಂಡಿಗಳ ಸ್ವತ್ಛತೆಗೆ ಮುಂದಾಗಬೇಕು ಪಪಂ ಮುಖ್ಯಾ ಧಿಕಾರಿಗಳಿಗೆ ಆದೇಶ ನೀಡಿದರು.

ಡಿಎಂಎಫ್‌ 20 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ. ಸರ್ಕಾರಿ ಜಮೀನನ್ನು ನಿಗದಿಗೊಳಿಸುವಂತೆ ತಹಶೀಲ್ದಾರ್‌ ರಿಗೆ ತಿಳಿಸಿದರು. ಕೂಡಲೇ ಜಾಗ ಗುರುತಿಸಿ ತಿಳಿಸಿದರೆ ಈಗಾಗಲೇ ಬಿಡುಗಡೆಗೊಂಡಿರುವ ಮೊತ್ತವನ್ನು ಬೇಗನೇ ಕಾಮಗಾರಿ ಶುರುಮಾಡಿ ಕೊಟ್ಟೂರಿನಲ್ಲಿ ಮೊದಲ ಬಾರಿಗೆ ಮಲ್ಟಿ ಸ್ಪೆಷಾಲಿಟಿ 100 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು ಎಂದರು.

ನಂತರ ಈಗಿರುವ ಕೊಟ್ಟೂರು ಸರ್ಕಾರಿ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ಚಿಕಿತ್ಸೆ ಕೇಂದ್ರವಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು. ಪಟ್ಟಣ ಮತ್ತು ಸುತ್ತಮುತ್ತಲಿನಲ್ಲಿ ನಕಲಿ ವೈದ್ಯರ ಹಾವಳಿ ಇರುವುದರಿಂದ ಕೂಡಲೇ ಅಂತಹವರನ್ನು ಗುರುತಿಸಿ ಅವರ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಜರುಗಿಸಬೇಕೆಂದು ತಹಶೀಲ್ದಾರ್‌ರಿಗೆ ಕೂಡಲೇ ಆದೇಶ ಹೊರಡಿಸಿದರು.

ತಹಶೀಲ್ದಾರ್‌ ಜಿ. ಅನಿಲ್‌ಕುಮಾರ, ಟಿ.ಎಸ್‌. ಗಿರೀಶ್‌ ಪ.ಪಂ ತಾಲೂಕು ವೈದ್ಯಾಧಿಕಾರಿ ಮುಖ್ಯಾಧಿಕಾರಿ, ಷಣ್ಮುಖನಾಯ್ಕ, ಪಿ.ಎಸ್‌.ಐ ನಾಗಪ್ಪ ಹಾಗೂ ಎಲ್ಲಾ ವರ್ಗದ ಅಧಿ ಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.