ಕೊರೊನಾ ಕಟ್ಟಿ ಹಾಕಲು ಆರೋಗ್ಯ ಸಂರಕ್ಷಣಾ ತಂಡ ಸಜ್ಜು
Team Udayavani, May 24, 2021, 9:07 PM IST
ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಡೆಡ್ಲಿ ಕೊರೊನಾ ಸೋಂಕು ಎರಡನೇ ಅಲೆಯಲ್ಲಿ ಬಳ್ಳಾರಿ/ ವಿಜಯನಗರ ಜಿಲ್ಲೆಗಳ ಗ್ರಾಮೀಣ ಭಾಗಕ್ಕೂ ವ್ಯಾಪಿಸಿ ಹಳ್ಳಿ ಜನರಲ್ಲಿ ಆತಂಕ ಸೃಷ್ಟಿಸಿದ್ದು, ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕುಟುಂಬ ಆರೋಗ್ಯ ಸಂರಕ್ಷಣಾ ತಂಡವನ್ನು ರಚಿಸಿ ಸೋಂಕಿನ ಲಕ್ಷಣಗಳು ಕಂಡುಬರುತ್ತಿದ್ದಂತೆ ಮೂರು ದಿನಗಳಿಗೆ ಔಷಧ ನೀಡುವ ಮೂಲಕ ಸೋಂಕನ್ನು ಆರಂಭದಲ್ಲೇ ಮಟ್ಟ ಹಾಕಲಾಗುತ್ತಿದೆ.
ಉಭಯ ಜಿಲ್ಲೆಗಳಲ್ಲಿ ಆರಂಭವಾದ ಈ ವಿನೂತನ ಕಾರ್ಯಕ್ರಮ, ರಾಜ್ಯಕ್ಕೆ ವಿಸ್ತರಣೆಯಾಗಿರುವುದು ಗಮನಾರ್ಹವಾಗಿದೆ. ಕೋವಿಡ್ ಮೊದಲ ಅವ ಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಗರ ಪ್ರದೇಶದ ಜನರನ್ನು ವ್ಯಾಪಿಸಿದ್ದ ಸೋಂಕು ಎರಡನೇ ಅಲೆಯಲ್ಲಿ ಗ್ರಾಮೀಣ ಭಾಗಕ್ಕೂ ತನ್ನ ಕಬಂಧ ಬಾಹುಗಳನ್ನು ಚಾಚಿಕೊಂಡು ಹಳ್ಳಿ ಜನರಲ್ಲಿ ಭೀತಿ ಉಂಟು ಮಾಡಿದೆ.
ಬಳ್ಳಾರಿ/ ವಿಜಯನಗರ ಜಿಲ್ಲೆಗಳ ಒಟ್ಟು 237 ಗ್ರಾಪಂಗಳಲ್ಲಿ ಹಡಗಲಿ ತಾಲೂಕಿನ ಹ್ಯಾರಡಾ ಗ್ರಾಪಂ ಸೇರಿ ಮೂರು ಮೂರು ಗ್ರಾಪಂಗಳನ್ನು ಹೊರತುಪಿಡಿಸಿ ಉಳಿದಂತೆ ಉಭಯ ಜಿಲ್ಲೆಗಳ ಎಲ್ಲ ಗ್ರಾಪಂಗಳಲ್ಲಿ ಕೋವಿಡ್ ಸೋಂಕು ಆವರಿಸಿದೆ. ಈ ಸೋಂಕನ್ನು ನಿಯಂತ್ರಿಸಲು ಮುಂದಾಗಿರುವ ಜಿಲ್ಲಾಡಳಿತ, ಜಿಪಂ ಗ್ರಾಪಂ, ಗ್ರಾಮ ಮಟ್ಟದ ಕಾರ್ಯಪಡೆ, ಕುಟುಂಬ ಆರೋಗ್ಯ ಸಂರಕ್ಷಣಾ ತಂಡ ಮೂರು ಹಂತದ ಕಾರ್ಯಪಡೆ ರಚಿಸಿ, ಮನೆ ಮನೆಗೆ ಸರ್ವೇ ನಡೆಸಿ ಸೋಂಕಿನ ಲಕ್ಷಣಗಳು ಕಂಡುಬಂದಾಕ್ಷಣ ಔಷಧಗಳನ್ನು ವಿತರಿಸುವ ಮೂಲಕ ಸೋಂಕನ್ನು ಆರಂಭದಲ್ಲೇ ಪತ್ತೆ ಹಚ್ಚಿ ನಿರ್ಮೂಲನೆ ಮಾಡಲು ಮುಂದಾಗಿದೆ.
3 ಹಂತದ ತಂಡಗಳ ರಚನೆ: ಸೋಂಕು ನಿಯಂತ್ರಿಸುವ ಸಲುವಾಗಿ ಮೂರು ಹಂತದ ತಂಡಗಳನ್ನು ರಚನೆ ಮಾಡಲಾಗಿದೆ. ಮೊದಲೆರಡು ಹಂತಗಳಲ್ಲಿ ಗ್ರಾಪಂ ಮಟ್ಟದ ಮತ್ತು ಗ್ರಾಮ ಮಟ್ಟದ ಕಾರ್ಯಪಡೆಗಳು ಕಾರ್ಯನಿರ್ವಹಿಸಲಿವೆ. 3ನೇ ಹಂತದಲ್ಲಿ ಕಾರ್ಯ ನಿರ್ವಹಿಸುವ ಕುಟುಂಬ ಆರೋಗ್ಯ ಸಂರಕ್ಷಣಾ ತಂಡದ ಕಾರ್ಯ ಪ್ರಮುಖ ಪಾತ್ರ ವಹಿಸಲಿದೆ. ಈ ತಂಡದಲ್ಲಿ ಆಯಾ ಗ್ರಾಮಗಳ ಕರವಸೂಲಿಗಾರರು, ನೀರುಗಂಟಿಗಳು, ಆಶಾ, ಅಂಗನವಾಡಿ ಕಾರ್ಯ ಕರ್ತೆಯರು, ನರೇಗಾ ಕಾಯಕಬಂಧುಗಳು, ಸ್ವಸಹಾಯ ಗುಂಪಿನ ಸದಸ್ಯರು, ಇತರೆ ಸಂಘಸಂಸ್ಥೆಗಳ ಪದಾ ಕಾರಿಗಳು, ಗ್ರಾಮ ಸಹಾಯಕರು, ಪದವೀಧರರು, ಆಸಕ್ತ ಯುವಕರು ಇರಲಿದ್ದಾರೆ.
ತಂಡದ ಸದಸ್ಯರನ್ನು ಪ್ರತಿ 50 ಕುಟುಂಬಕ್ಕೆ ಒಬ್ಬರನ್ನು ಸ್ವಯಂ ಸೇವಕರನ್ನಾಗಿ ನೇಮಿಸಲಾಗುತ್ತದೆ. ಇವರು ತಮ್ಮ ವ್ಯಾಪ್ತಿಯ ಪ್ರತಿ ಮನೆ ಮನೆ ಸಮೀಕ್ಷೆ ನಡೆಸಿ ಕುಟುಂಬಗಳ ಆರೋಗ್ಯ ಸ್ಥಿತಿ ವಿಚಾರಿಸಲಿದ್ದಾರೆ. ಈವೇಳೆ ಕುಟುಂಬದಲ್ಲಿ ಯಾರಿಗಾದರು ಜ್ವರ, ಕೆಮ್ಮು, ನೆಗಡಿ ಕಂಡುಬಂದಲ್ಲಿ ಮೂರು ದಿನಗಳಿಗೆ ಆಗುವಷ್ಟು ಔಷಧಗಳುಳ್ಳ ಜನರಲ್ ಕಿಟ್‌ನ್ನು ವಿತರಿಸಲಿದ್ದಾರೆ.
ಸತತ ಮೂರು ದಿನಗಳು ಔಷಧ ಪಡೆದರೂ ವಾಸಿಯಾಗದೆ ಆರೋಗ್ಯ ಸುಧಾರಿಸದಿದ್ದಲ್ಲಿ ಅಂತಹ ವ್ಯಕ್ತಿಯನ್ನು ತಂಡದವರು ಕೋವಿಡ್ ಪರೀಕ್ಷೆ ಮಾಡಿಸಲಿದ್ದಾರೆ. ಸೋಂಕಿತ ವ್ಯಕ್ತಿಗೆ ಪಾಸಿಟಿವ್ ಬಂದಲ್ಲಿ ನಿಗದಿತ ದಿನಗಳಿಗೆ ಔಷ ಧಿಯುಳ್ಳ ಕೋವಿಡ್ ಔಷಧ ಕಿಟ್ ವಿತರಿಸಲಿದ್ದಾರೆ. ಜತೆಗೆ ಸೋಂಕಿತರ ಮನೆಯ ಸುತ್ತಮುತ್ತಲೂ ಸ್ಯಾನಿಟೈಸರ್ ಸಿಂಪಡಿಸಿ ಸೋಂಕು ನಿಯಂತ್ರಣಕ್ಕೆ ತಂಡವೇ ಕ್ರಮಕೈಗೊಳ್ಳಲಿದೆ. ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಆರ್ಥಿಕವಾಗಿ ಅನಾನುಕೂಲತೆಗಳು ಇದ್ದಲ್ಲಿ ಅಂತಹವರಿಗೆ ಗ್ರಾಮ ಪಂಚಾಯಿತಿಯಿಂದಲೇ ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತದೆ.
ಒಂದು ವೇಳೆ ಮನೆಯಲ್ಲಿ ಸೋಂಕಿತ ವ್ಯಕ್ತಿಗೆ ಪ್ರತ್ಯೇಕ ಕೊಠಡಿ, ಶೌಚಾಲಯವಿಲ್ಲದಿದ್ದಲ್ಲಿ ಹೋಬಳಿ ಮಟ್ಟದಲ್ಲಿ ನಿಗದಿಪಡಿಸಿದ ಐಸೋಲೇಷನ್ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ. ಅಲ್ಲದೇ, ಸೋಂಕಿತ ವ್ಯಕ್ತಿಯ ರೋಗ ತೀವ್ರಗೊಂಡಲ್ಲಿ ಆರೋಗ್ಯ ಇಲಾಖೆಯ ಸ್ಥಳೀಯ ತಂಡದ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಡೆಡಿಕೇಟೆಡ್ ಕೋವಿ ಹೆಲ್ತ್ ಸೆಂಟರ್ (ಡಿಸಿಎಚ್‌ಸಿ)ಗೆ ಕಳುಹಿಸಿಕೊಡುವ ಕೆಲಸ ಕುಟುಂಬ ಆರೋಗ್ಯ ಸಂರಕ್ಷಣಾ ತಂಡ ಮಾಡಲಿದೆ.
ಈ ತಂಡಗಳು ಗ್ರಾಮಗಳಲ್ಲಿ ಈಗಾಗಲೇ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಮನೆ ಮನೆ ಸಮೀಕ್ಷೆ ವೇಳೆ ಸೋಂಕಿನ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ ಇದ್ದವರಿಗೆ ಜನರಲ್ ಕಿಟ್‌ಗಳನ್ನು ವಿತರಿಸಲಾಗಿದೆ.
ಗಣಿಜಿಲ್ಲೆಯ ವಿಷೇಷ ಕಾರ್ಯಕ್ರಮ: ಗ್ರಾಮೀಣ ಭಾಗಕ್ಕೂ ಆವರಿಸಿರುವ ಕೋವಿಡ್ ಸೋಂಕನ್ನು ನಿಯಂತ್ರಿಸಲು ಜಿಲ್ಲಾಡಳಿತ, ಜಿಪಂ “ಕುಟುಂಬ ಆರೋಗ್ಯ ಸಂರಕ್ಷಣಾ ತಂಡ’ ರಚನೆಯ ಮೂಲಕ ವಿನೂತನ ಕಾರ್ಯಕ್ರಮವನ್ನು ಕೈಗೊಂಡಿದೆ. ಇದನ್ನು ಗಮನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವರು, ರಾಜ್ಯದ ಇತರೆ ಜಿಲ್ಲೆಗಳವರು ಅನುಸರಿಸುವಂತೆ ಸೂಚಿಸಿ ವಿಸ್ತರಿಸಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.