ಉಭಯ ಜಿಲ್ಲೆಗಳಲ್ಲಿ ಹೆಚ್ಚಾಯ್ತು ಕೊರೊನಾ ಗೆದ್ದವರ ಸಂಖ್ಯೆ


Team Udayavani, May 25, 2021, 8:44 PM IST

25-13

ಬಳ್ಳಾರಿ: ಗಣಿನಾಡು ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸೋಮವಾರವೂ 1463 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿದ್ದಂತೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಿದೆ.

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಮೇ 18ರಂದು 1799 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರ ಗಡಿದಾಟಿ, 20290ಕ್ಕೆ ಏರಿಕೆಯಾಗಿತ್ತು. ನಂತರದ ದಿನಗಳಿಂದ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗುವವ ಸಂಖ್ಯೆ ಹೆಚ್ಚಿದ್ದು, ಸೋಮವಾರ ಮೇ 24 ರಂದು ಬಿಡುಗಡೆಯಾದವರು ಸೇರಿ ಕಳೆದ 6 ದಿನಗಳಿಂದ ಉಭಯ ಜಿಲ್ಲೆಗಳಲ್ಲಿ 13021 ಜನರು ಗುಣಮುಖರಾಗಿ ಮನೆಗೆ ತೆರಳಿ ಐಸೋಲೇಷನ್‌ ನಿಂದ ಮುಕ್ತರಾಗಿದ್ದಾರೆ.

ಹೀಗಾಗಿ ಸೋಂಕು ಪತ್ತೆಯಾಗುವವರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದಲ್ಲಿ ಉಭಯ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆಯತ್ತ ಸಾಗಿದ್ದು, ಸದ್ಯ 15355ಕ್ಕೆ ಇಳಿಕೆಯಾಗಿದೆ. ಈ ಪೈಕಿ ಬಳ್ಳಾರಿ ತಾಲೂಕು 337, ಸಂಡೂರು 220, ಸಿರುಗುಪ್ಪ 63, ಕೂಡ್ಲಿಗಿ 96, ಹಡಗಲಿ 104, ಹೊಸಪೇಟೆ 287, ಹ.ಬೊ.ಹಳ್ಳಿ 260, ಹರಪನಹಳ್ಳಿ 96 ಸೇರಿ ಒಟ್ಟು 1463 ಜನರು ಬಿಡುಗಡೆಯಾಗಿದ್ದಾರೆ.

ಇನ್ನು ಉಭಯ ಜಿಲ್ಲೆಗಳಲ್ಲಿ ಸೋಮವಾರ 807 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಬಳ್ಳಾರಿ ತಾಲೂಕು 251 (6973 ಸಕ್ರಿಯ ಪ್ರಕರಣ), ಸಂಡೂರು 93 (1824), ಸಿರುಗುಪ್ಪ 54 (706), ಕೂಡ್ಲಿಗಿ 87 (1084), ಹಡಗಲಿ 68 (961), ಹೊಸಪೇಟೆ 126 (2425), ಹ.ಬೊ.ಹಳ್ಳಿ 55 (782), ಹರಪನಹಳ್ಳಿ 71 (836), ಇತರೆ ರಾಜ್ಯ 1 (27), ಇತರೆ ಜಿಲ್ಲೆ 1 (37) ಸೇರಿ ಒಟ್ಟು 807 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 15355ಗೆ ಇಳಿಕೆಯಾಗಿದೆ. ಸೋಂಕಿಗೆ ಎರಡು ಜಿಲ್ಲೆಗಳಲ್ಲಿ 19 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1242ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ಮುಂದಾಗಿರುವ ಆರೋಗ್ಯ ಇಲಾಖೆ ಅಷ್ಟೇ ಪ್ರಮಾಣದಲ್ಲಿ ತಪಾಸಣೆ ನಡೆಸಿ ಸೋಂಕಿತರನ್ನು ಪತ್ತೆಹಚ್ಚುತ್ತಿದೆ. ಮೇ 23ರಂದು 858 ರ್ಯಾಪಿಡ್‌ ಆಂಟಿಜೆನ್‌, 2270 ಆರ್‌ಟಿ ಪಿಸಿಆರ್‌ ಸೇರಿ ಒಟ್ಟು 3128 ಜನರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗಿದೆ.

ಅದೇ ರೀತಿ ಈವರೆಗೆ 2,49,898 ರ್ಯಾಪಿಡ್‌ ಆಂಟಿಜೆನ್‌, 5,52,637 ಆರ್‌ಟಿಪಿಸಿಆರ್‌ ಸೇರಿ ಒಟ್ಟು 8,02,535 ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ.

ಟಾಪ್ ನ್ಯೂಸ್

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.