ಕೋವಿಡ್ ದೂರವಾಗಿಸಲು ಮೌಢ್ಯಾಚರಣೆ
Team Udayavani, May 26, 2021, 9:52 PM IST
ಬಳ್ಳಾರಿ: ಗಣಿನಾಡಿನ ಬಳ್ಳಾರಿ/ವಿಜಯನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಮಹಮ್ಮಾರಿ ಕೋವಿಡ್ ಸೋಂಕನ್ನು ನಿಯಂತ್ರಿಸಲು ತಾಲೂಕಿನ ಡಿ.ಕಗ್ಗಲ್ ಗ್ರಾಮದ ಜನರು ಮೌಢಾಚರಣೆ ಮೊರೆ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನೂರಾರು ಕೆಜಿ ಅನ್ನವನ್ನು ಕೊಂಡೊಯ್ದು ಗ್ರಾಮದ ಹೊರವಲಯದಲ್ಲಿ ಚೆಲ್ಲಿದ್ದಾರೆ.
ಬಳ್ಳಾರಿ/ವಿಜಯನಗರ ಜಿಲ್ಲೆಗಳ ಬಹುತೇಕ ಗ್ರಾಮಗಳಿಗೂ ಕೋವಿಡ್ ಸೋಂಕು ಆವರಿಸಿದ್ದು, ನೂರಾರು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅದರಂತೆ ತಾಲೂಕಿನ ಡಿ. ಕಗ್ಗಲ್ ಗ್ರಾಮಕೂ ಸೋಂಕು ವ್ಯಾಪಿಸಿದೆ. ಗ್ರಾಮವನ್ನು ಕೊರೊನಾದಿಂದ ದೂರವಾಗಿಸಲು, ಮುಕ್ತಗೊಳಿಸಲು ಮೌಢಾ ಚರಣೆಗೆ ಮುಂದಾಗಿರುವ ಗ್ರಾಮಸ್ಥರು, ಗ್ರಾಮ ದಲ್ಲಿ ಪ್ರತಿ ಮನೆಯಿಂದ ತಲಾ ಐದೈದು ಕೆಜಿ ಅನ್ನವನ್ನು ಮಾಡಿಸಿಕೊಂಡು ನೂರಾರು ಕೆಜಿ ಅನ್ನವನ್ನು ಟ್ರಾಕ್ಟರ್‌ಗಳಲ್ಲಿ ಸಂಗ್ರಹಿಸಿಕೊಂಡು ಗ್ರಾಮದ ಹೊರವಲಯದಲ್ಲಿ ಚೆಲ್ಲಿ ಮಣ್ಣುಪಾಲು ಮಾಡಿದ್ದಾರೆ. ಕೋವಿಡ್ ಸೋಂಕು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಬಂಧಿಕರು, ಬಡ ಜನರು ಆಹಾರ ಸಿಗದೆ ಪರದಾಡುತ್ತಿರುವ ಇಂಥ ಸಂದರ್ಭದಲ್ಲಿ ಗ್ರಾಮಗಳಲ್ಲಿ ನೂರಾರು ಕೆಜಿ ಅನ್ನವನ್ನು ಚೆಲ್ಲಿ ಮಣ್ಣುಪಾಲು ಮಾಡಿ ಮೌಢಾಚರಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಕಳೆದೊಂದು ವಾರದ ಹಿಂದೆ ತಾಲೂಕಿನ ಕೊಳಗಲ್ಲು ಗ್ರಾಮದಲ್ಲೂ ಇದೇ ರೀತಿ ಅನ್ನವನ್ನು ಚೆಲ್ಲುವ ಮೂಲಕ ಮೌಢಾಚರಣೆ ಮಾಡಿದ್ದರು.
ದೂರಿನ ಪತ್ರ ವೈರಲ್: ತಾಲೂಕಿನ ಡಿ. ಕಗ್ಗಲ್ ಗ್ರಾಮದಲ್ಲಿ ಕೊರೊನಾ ದೂರವಾಗಿಸಲು ಮಾಡಿದ ಮೌಢಾಚರಣೆಗೆ ಕಾರಣರಾದ ಗ್ರಾಮದ ಮುಖಂಡರ ಮೇಲೆ ಕ್ರಮಕೈಗೊಳ್ಳುವಂತೆ ಗ್ರಾಮದ ಯುವಕರು ಮೋಕಾ ಠಾಣೆ ಪಿಎಸ್‌ಐಗೆ ಬರೆದ ದೂರಿನ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಸೋಂಕು ಗ್ರಾಮದಲ್ಲಿ ವ್ಯಾಪಿಸಿರುವುದರಿಂದ ಈಚೆಗೆ ಗ್ರಾಮದಲ್ಲಿ ಡಂಗೂರ ಸಾರಿಸಿರುವ ಮುಖಂಡರು ಡಂಗೂರ ಸಾರಿಸಿ ಭೂತ-ಪ್ರೇತಗಳಿಗೆ ಬೃಹತ್ ಅನ್ನಸಂತರ್ಪಣೆ ಮಾಡಿದರೆ ಕೊರೊನಾ ದೂರವಾಗುವುದು ಎಂಬ ಭಾವನೆ ಜನರಲ್ಲಿ ಸೃಷ್ಟಿಸಿ, ಪ್ರತಿ ಮನೆಮನೆಯಿಂದ ಐದು ಕೆಜಿಯಂತೆ ನೂರಾರು ಕೆಜಿ ಅನ್ನ ಮಾಡಿಸಿ, ಟ್ರಾಕ್ಟರ್‌ಗಳಲ್ಲಿ ಸಂಗ್ರಹಿಸಿಕೊಂಡು ಇಡೀರಾತ್ರಿ ಗ್ರಾಮದ ಸುತ್ತಲೂ ಚೆಲ್ಲಿದ್ದಾರೆ.
ಈ ಮೌಢಾಚರಣೆ ಗ್ರಾಮದ ವಿದ್ಯಾವಂತ ಯುವಕರನ್ನು ತಲೆತಗ್ಗಿಸುವಂತೆ ಮಾಡಿದೆ. ಗ್ರಾಮದ ಅನಕ್ಷರಸ್ಥ, ಭಂಡ ಮುಖಂಡರು ಗ್ರಾಮದಲ್ಲಿ ಆಗಾಗ ಮಾಡುತ್ತಿರುತ್ತಾರೆ. ಈ ಮುಖಂಡರನ್ನು ಬಂಧಿ ಸಿ ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮದ ಕೆಲ ಮುಖಂಡರ ಹೆಸರುಗಳನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಆದರೆ, ಡಿ. ಕಗ್ಗಲ್ ಗ್ರಾಮದಲ್ಲಿ ನಡೆದಿರುವ ಈ ಮೌಢಾಚರಣೆ ಘಟನೆ ಬಗ್ಗೆ ಈವರೆಗೂ ಯಾರೊಬ್ಬರೂ ಠಾಣೆಗೆ ಬಂದು ಖುದ್ದು ಭೇಟಿನೀಡಿಯಾಗಲಿ ಅಥವಾ ಅಂಚೆ ಮೂಲಕವಾಗಲಿ ಯಾವುದೇ ದೂರು ಬಂದಿಲ್ಲ. ಪ್ರಕರಣವೂ ದಾಖಲಾಗಿಲ್ಲ ಎಂದು ಮೋಕಾ ಠಾಣೆಯ ಪಿಎಸ್‌ಐ ರಘು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.