ಕೋವಿಡ್‌ನಿಂದ ಗ್ರಾಮೀಣರನ್ನು ರಕ್ಷಿಸಿ
Team Udayavani, May 27, 2021, 9:27 PM IST
ಬಳ್ಳಾರಿ: ನಗರ ಪ್ರದೇಶದಲ್ಲಿ ಕೊರೊನಾ ಸೋಂಕು ಕ್ರಮೇಣ ಕಡಿಮೆಯಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಂಡು ಸೋಂಕನ್ನು ಸವಾಲಾಗಿ ಸ್ವೀಕರಿಸಿ ಗ್ರಾಮೀಣ ಜನರನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರಾಪಂ ಅಧ್ಯಕ್ಷರುಗಳು ಹಾಗೂ ಪಿಡಿಒಗಳಿಗೆ ನಿರ್ದೇಶನ ನೀಡಿದರು.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವಚ್ಯುವಲ್ ಮೂಲಕ ಬಳ್ಳಾರಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ 47 ಗ್ರಾಪಂಗಳ ಅಧ್ಯಕ್ಷರುಗಳು ಹಾಗೂ ಪಿಡಿಒಗಳು ಮತ್ತು ಜಿಪಂ ಸಿಇಒ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗಳ ಸಿಬ್ಬಂದಿಗಳನ್ನು ಕೋವಿಡ್ ವಾರಿಯರ್ಸ್‌ಗಳೆಂದು ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮಗಳಲ್ಲಿ ಸೋಂಕಿತರು ಕಂಡುಬಂದ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಮಾಡಬೇಕು. ಅಲ್ಲಿನ ಜನರಿಗೆ ಆಹಾರ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅವರ ಸಂಪರ್ಕಿತರಿಗೆ ತಪಾಸಣೆ ಮಾಡಿಸಿ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಬೇಕು ಎಂದು ಗ್ರಾಪಂ ಪಿಡಿಒಗಳು ಮತ್ತು ಅಧ್ಯಕ್ಷರುಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜನರ ಅನವಶ್ಯಕ ಓಡಾಟಕ್ಕೆ ಕ್ರಮ, ಜನಸಂದಣಿ ಸೇರುವ ಸಂತೆ, ಜಾತ್ರೆ, ಮದುವೆ-ಮುಂಜಿ ಸೇರಿದಂತೆ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ತಮ್ಮ ವ್ಯಾಪ್ತಿಯಲ್ಲಿ ನಿಷೇ ಧಿಸುವಂತೆ ಅವರು ಸಲಹೆ ನೀಡಿದರು.
ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹರಡುತ್ತಿದ್ದು ಯಾವ ರೀತಿಯ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಗ್ರಾಮೀಣ ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಅಭಿಪ್ರಾಯಗಳನ್ನು ತಮ್ಮಿಂದ ಪಡೆಯುವ ದೃಷ್ಟಿಯಿಂದ ಮುಖ್ಯಮಂತ್ರಿಯಾಗಿ ನಾನು ಇಂದು ತಮ್ಮೊಂದಿಗೆ ಮಾತನಾಡುತ್ತಿರುವೆ ಎಂದು ಗ್ರಾಪಂ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ತಿಳಿಸಿದ ಸಿಎಂ ಬಿಎಸ್‌ವೈ ಅವರು ಎಲ್ಲರೂ ಸೇರಿ ಈ ಕೊರೊನಾ ಮಹಾಮಾರಿಯನ್ನು ತಡೆಯಲು ಶ್ರಮಿಸೋಣ ಎಂದರು.
ಪ್ರತಿ ಗ್ರಾಪಂಗಳಿಗೆ ಎನ್‌ಡಿಆರ್‌ಎಫ್ ನಿ ಧಿ ಅಡಿ ತಲಾ 50 ಸಾವಿರ ಹಣ ಒದಗಿಸಲಾಗಿದೆ. 14ನೇ ಹಣಕಾಸು ಯೋಜನೆಯ ಉಳಿದ ಅನುದಾನ ಮತ್ತು 15ನೇ ಹಣಕಾಸು ಯೋಜನೆಯಲ್ಲಿನ ಹಣವನ್ನು ಕೊರೊನಾ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಸೂಚಿಸಿದರು. 1ಕ್ಕಿಳಿದ ಸೋಂಕಿತರ ಪ್ರಮಾಣ: ಮುಖ್ಯಮಂತ್ರಿ ಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಕೊಟ್ಟೂರು ತಾಲೂಕಿನ ಆಲಬೂರು ಗ್ರಾಪಂ ಅಧ್ಯಕ್ಷ ಶಿವಾನಂದಪ್ಪ ಅವರು ಮಾತನಾಡಿ, ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಸೋಂಕು ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಮುಖ್ಯಮಂತ್ರಿಗಳ ಎದುರು ಎಳೆಎಳೆಯಾಗಿ ಬಿಡಿಸಿಟ್ಟರು.
ಮೊದಲಿಗೆ ಆಲಬೂರು ಗ್ರಾಪಂ ವ್ಯಾಪ್ತಿಯಲ್ಲಿ 36 ಸೋಂಕಿತರಿದ್ದರೂ ಈಗ ಒಬ್ಬರು ಮಾತ್ರ ಸೋಂಕಿತರಿದ್ದಾರೆ. ಗ್ರಾಮದ ಪ್ರತಿ ಮನೆ-ಮನೆಗೆ ಸರ್ವೇ ನಡೆಸಲಾಗಿದೆ. ಜ್ವರ-ಶೀತ-ಕೆಮ್ಮು ಇಂಥ ಲಕ್ಷಣಗಳಿರುವವರಿಗೆ ಜನರಲ್ ಕಿಟ್ ಹಾಗೂ ಮೆಡಿಕಲ್ ಕಿಟ್‌ಗಳನ್ನು ವಿತರಿಸಲಾಗಿದೆ. ಗ್ರಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಚರಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ಕುಡಿಯುವ ನೀರಿನ ಟೆಸ್ಟ್ ಕೂಡ ಮಾಡಲಾಗಿದೆ. ಜನರು ಅನಗತ್ಯ ಓಡಾಡದಂತೆ ತಿಳಿಸಲಾಗಿದ್ದು, ಜನರು ಕೂಡ ಗ್ರಾಪಂನೊಂದಿಗೆ ಸಹಕರಿಸುತ್ತಿದ್ದಾರೆ ಎಂದರು. ಜಿಲ್ಲಾಡಳಿತದ ಆದೇಶದಂತೆ ಮದುವೆ-ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಗ್ರಾಪಂ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ.
ತಹಶೀಲ್ದಾರ್ ಅವರು ಕೂಡ ಗ್ರಾಪಂಗೆ ಆಗಮಿಸಿ ಜನರೊಂದಿಗೆ ಸಭೆ ನಡೆಸಿ ಅರಿವು ಮೂಡಿಸಿದ್ದಾರೆ ಎಂದು ಹೇಳಿದ ಗ್ರಾಪಂ ಅಧ್ಯಕ್ಷ ಶಿವಾನಂದಪ್ಪ ಅವರು ಹಿಂದಿನ ತಿಂಗಳು ನನಗೂ ಕೋವಿಡ್ ಸೋಂಕು ಬಂದಿತ್ತು. ಹೋಂ ಐಸೋಲೇಶನ್‌ನಲ್ಲಿದ್ದುಕೊಂಡು ಅಗತ್ಯ ಚಿಕಿತ್ಸೆ ಪಡೆದು ಗುಣಮುಖರಾಗಿರುವೆ ಎಂದು ಅವರು ಸಿಎಂ ಅವರಿಗೆ ತಿಳಿಸಿದರು. ಇಡೀ ಗ್ರಾಪಂ ಕೊರೊನಾ ಸೋಂಕು ಮುಕ್ತವನ್ನಾಗಿ ಶೀಘ್ರವಾಗಿ ಮಾಡಲಾಗುವುದು ಮತ್ತು ಕೊರೊನಾ ಹರಡದಂತೆ ಬಿಗಿಯಾದ ಕ್ರಮಗಳನ್ನು ಪಿಡಿಒ ಮಾಧವಿ ಅವರೊಡಗೂಡಿ ಕೈಗೊಳ್ಳುತ್ತೇವೆ ಎಂದು ಅವರು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.
5010 ಸಕ್ರಿಯ ಪ್ರಕರಣಗಳು: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಮೂಲಕ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಒ ಕೆ.ಆರ್. ನಂದಿನಿ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಒಟ್ಟು 12042 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 7032 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 5010 ಸಕ್ರಿಯ ಪ್ರಕರಣಗಳಿವೆ. 147 ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳು ಮತ್ತು 561 ಗ್ರಾಮಗಳಲ್ಲಿ ಹತ್ತಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.
ಪ್ರತಿ ಹಳ್ಳಿಗೆ ಒಂದು ಗ್ರಾಮ ಕಾರ್ಯಪಡೆಯಂತೆ 1038 ಗ್ರಾಮ ಕಾರ್ಯಪಡೆಗಳು ಹಾಗೂ 237 ಗ್ರಾಪಂ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಕಾರ್ಯಪ್ರವೃತ್ತವಾಗಿವೆ ಎಂದು ತಿಳಿಸಿದ ಜಿಪಂ ಸಿಇಒ ನಂದಿನಿ ಅವರು ಇದೇ ಸಂದರ್ಭದಲ್ಲಿ ಬಳ್ಳಾರಿ ಜಿಪಂ ಕೈಗೊಂಡಿರುವ ವಿಶಿಷ್ಟ ಪ್ರಯತ್ನಗಳನ್ನು ಸಿಎಂ ಅವರ ಮುಂದಿಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಎಸಿ ರಮೇಶ ಕೋನರೆಡ್ಡಿ ಮತ್ತಿತರರು ಇದ್ದರು. ವಚ್ಯುವಲ್ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.