ಸಚಿವ ಆನಂದ ಸಿಂಗ್‌ ನಿಲುವಿಗೆ ಜಿಂದಾಲ್‌ ಜಯ

Team Udayavani, May 28, 2021, 8:59 PM IST

28-16

ಬಳ್ಳಾರಿ: ಕಳೆದ ಸಚಿವ ಸಂಪುಟದಲ್ಲಿ ಜಿಂದಾಲ್‌ ಸಂಸ್ಥೆಗೆ ಜಮೀನು ಪರಭಾರೆ ಮಾಡಲು ಒಪ್ಪಿಗೆ ಸೂಚಿಸಿದ್ದ ರಾಜ್ಯ ಸರ್ಕಾರ, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮೀನು ಪರಭಾರೆ ವಿಷಯ ಕೈಬಿಟ್ಟಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜಿಂದಾಲ್‌ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡಲು ಹಿಂದಿನ ಕಾಂಗ್ರೆಸ್‌ -ಜೆಡಿಎಸ್‌ ಸರ್ಕಾರಗಳು ಕೈಗೊಂಡಿದ್ದ ನಿರ್ಣಯವನ್ನು ಅಂದು ಆನಂದ್‌ಸಿಂಗ್‌ ವಿರೋ ಧಿಸಿದ್ದರು. ಅಲ್ಲದೇ, ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಜಮೀನು ಪರಭಾರೆ ಮಾಡಲು ರಾಜ್ಯ ಬಿಜೆಪಿ ಸರ್ಕಾರ ನಿರ್ಣಯ ಕೈಗೊಳ್ಳುವ ಮೂಲಕ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರಿಗೆ ಹಿನ್ನಡೆಯುಂಟು ಮಾಡಿತ್ತು. ಕೈಗೊಂಡಿದ್ದ ನಿರ್ಣಯಕ್ಕೂ ವಿರೋಧ ವ್ಯಕ್ತಪಡಿಸಿ ತಮ್ಮ ನಿಲುವಿಗೆ ಬದ್ಧವಿರುವುದಾಗಿ ತಿಳಿಸಿದ್ದರು.

ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡ ತಕ್ಷಣ ಅದೇ ಅಂತಿಮವಾಗಿ ಆದೇಶ ಹೊರಬೀಳಲ್ಲ. ಅಂತಿಮ ಆದೇಶ ಹೊರ ಬೀಳುವುದರೊಳಗೆ ಸಾಕಷ್ಟು ಸಮಯ ಬೇಕಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ಕೊರತೆಯಿಂದಾಗಿ ಜಿಂದಾಲ್‌ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡಲು ಸಮ್ಮತಿ ವ್ಯಕ್ತಪಡಿಸಿರಬಹುದು.

ಈ ಕುರಿತು ನಾನು ಸಹ ಒಮ್ಮೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮತ್ತೂಮ್ಮೆ ಚರ್ಚಿಸಿ ಜಮೀನು ಪರಭಾರೆ ಮಾಡುವುದರಿಂದ ಮುಂದಿನ ದಿನಗಳಲ್ಲಿ ಆಗುವ ಅನುಕೂಲ- ಅನಾನು ಕೂಲಗಳ ಬಗ್ಗೆಯೂ ಮನ ವರಿಕೆ ಮಾಡಿಕೊಡುವೆ ಎಂದಿದ್ದರು.

ಸಚಿವ ಆನಂದ್‌ಸಿಂಗ್‌ ಹೇಳಿದಂತೆ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್‌ಗೆ ಜಮೀನು ಪರಭಾರೆ ಮಾಡಲು ಒಪ್ಪಿಗೆ ಪಡೆದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಬಿಟ್ಟಿದ್ದು, ಜಿಂದಾಲ್‌ ಜಮೀನು ಪರಭಾರೆ ವಿಷಯದಲ್ಲಿ ಸಚಿವ ಆನಂದ್‌ಸಿಂಗ್‌ ಅವರಿಗೆ ಮತ್ತೂಂದು ಜಯ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.