2584 ಅಂತ್ಯೋದಯ-ಬಿಪಿಎಲ್‌ ಕಾರ್ಡ್‌ ಅನರ್ಹ


Team Udayavani, Jun 1, 2021, 8:49 PM IST

1-13

„ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ಆರ್ಥಿಕವಾಗಿ ಸದೃಢವಾಗಿದ್ದರೂ ಆದ್ಯತಾ ವಲಯದ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದಿರುವ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸದ್ದಿಲ್ಲದೇ ಬಿಸಿ ಮುಟ್ಟಿಸುತ್ತಿದೆ.

ಆದಾಯ ತೆರಿಗೆ ಪಾವತಿ ಆಧಾರ್‌ ಲಿಂಕ್‌ ಮೂಲಕ ಮಾಹಿತಿ ಪಡೆದು ಅವರ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸುತ್ತಿದ್ದು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 2549 ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಗಣಿನಾಡು ಖ್ಯಾತಿಯ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 66500 ಅಂತ್ಯೋದಯ, 5,29,865 ಬಿಪಿಎಲ್‌, 63913 ಎಪಿಎಲ್‌ ಪಡಿತರ ಚೀಟಿಗಳು ವಿತರಣೆಯಾಗಿವೆ.

ಬಡವರು ಸೇರಿ ಆರ್ಥಿಕವಾಗಿ ಸದೃಢವಾಗಿದ್ದ ಬಹುತೇಕರು ಹಲವು ಅನುಕೂಲತೆ ಮತ್ತು ಅವಶ್ಯಕತೆಗಳಿಗಾಗಿ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಎಚ್ಚೆತ್ತಕೊಂಡಿರುವ ಆಹಾರ ಇಲಾಖೆ, ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದವರ ಆಧಾರ್‌ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಯೊಂದಿಗೆ ಹಂಚಿಕೊಂಡಿದೆ.

ಈ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸಿರುವ ಆದಾಯ ತೆರಿಗೆ ಇಲಾಖೆ, ಆದಾಯ ತೆರಿಗೆ ಪಾವತಿಸುತ್ತಿರುವ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿದಾರರ ಮಾಹಿತಿ ಸಂಗ್ರಹಿಸಿ ಆಹಾರ ಇಲಾಖೆಗೆ ನೀಡಿದೆ. ಇದನ್ನು ಆಧರಿಸಿ ಕ್ರಮಕೈಗೊಂಡಿರುವ ಆಹಾರ ಇಲಾಖೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಂತ್ಯೋದಯ 145, ಬಿಪಿಎಲ್‌ 2439 ಸೇರಿ ಒಟ್ಟು 2584 ಪಡಿತರ ಚೀಟಿಗಳನ್ನು ಅನರ್ಹ ಎಂದು ಗುರುತಿಸಿದೆ.

ಜತೆಗೆ ಅನರ್ಹರು ಪಡೆದಿರುವ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ಹಿಂತಿರುಗಿಸುವಂತೆ ಮತ್ತೂಮ್ಮೆ ಜೂ.30ರವರೆಗೆ ಗಡುವು ನೀಡಿದೆ. 2549 ಎಪಿಎಲ್‌ಗೆ ಪರಿವರ್ತನೆ, 35 ಬಾಕಿ: ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಬಳ್ಳಾರಿ ತಾಲೂಕು 1257, ಹಡಗಲಿ 78, ಹ.ಬೊ.ಹಳ್ಳಿ 79, ಹೊಸಪೇಟೆ 522, ಕೂಡ್ಲಿಗಿ 137, ಸಂಡೂರು 224, ಸಿರುಗುಪ್ಪ 153, ಹರಪನಹಳ್ಳಿ 134 ಸೇರಿ ಅಂತ್ಯೋದಯ 145, ಬಿಪಿಎಲ್‌ 2439 ಸೇರಿ ಒಟ್ಟು 2584 ಪಡಿತರ ಚೀಟಿ ಅನರ್ಹ ಎಂದು ಆಹಾರ ಇಲಾಖೆ ಗುರುತಿಸಿದೆ.

ಈ ಪೈಕಿ ಪರಿಶೀಲನೆ ನಡೆಸಿರುವ ಆಹಾರ ಇಲಾಖೆ, ಹಗರಿಬೊಮ್ಮನಹಳ್ಳಿಯ 35 ಅನ್ನು ಹೊರತುಪಡಿಸಿ ಉಳಿದಂತೆ 2549 ಪಡಿತರ ಚೀಟಿಗಳನ್ನು ಎಪಿಎಲ್‌ ಗೆ ಪರಿವರ್ತಿಸಿ ಮೇ ತಿಂಗಳ ಪಡಿತರ ಧಾನ್ಯ ರದ್ದುಗೊಳಿಸಿದೆ. ಹ.ಬೊ.ಹಳ್ಳಿಯ 35 ಪಡಿತರ ಕಾರ್ಡ್‌ಗಳು ಪಡಿಶೀಲನೆ ನಡೆಯುತ್ತಿದೆ. ಆದರೆ, ವಾಹನ ಖರೀದಿ, ಮನೆ ನಿರ್ಮಾಣ ಸೇರಿ ಇನ್ನಿತರೆ ಸಾಲಸೌಲಭ್ಯಕ್ಕಾಗಿ ಬ್ಯಾಂಕ್‌ನವರು ಕೇಳಿದಂತೆ ಆದಾಯ ತೆರಿಗೆ ಪಾವತಿಸಿ ದಾಖಲೆ ಪಡೆದವರಿಗೂ ಇದರ ಬಿಸಿ ತಟ್ಟಿದ್ದು, ಅವರ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳು ಎಪಿಎಲ್‌ಗೆ ಪರಿವರ್ತನೆಯಾಗಿರುವುದು ಗಮನಾರ್ಹ.

ಈ ಕುಟುಂಬಗಳಿಗಿಲ್ಲ ಅಂತ್ಯೋದಯ-ಬಿಪಿಎಲ್‌: ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆಯಲು ಕೆಲವೊಂದು ಮಾನದಂಡ ವಿಧಿ ಸಿದೆ. ಸರ್ಕಾರ, ಅನುದಾನಿತ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳ ಖಾಯಂ ನೌಕರರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಒಣಭೂಮಿ, ನೀರಾವರಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಸ್ವಂತ ಮನೆ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಟ್ರಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಸೇರಿ ನಾಲ್ಕು ಚಕ್ರ ಹೊಂದಿರುವ ಎಲ್ಲ ಕುಟುಂಬಗಳು, ಪ್ರತಿ ತಿಂಗಳು 150 ಯೂನಿಟ್‌ಗಿಂತಲೂ ಹೆಚ್ಚು ವಿದ್ಯುತ್‌ ಬಳಕೆ ಮಾಡುವ ಕುಟುಂಬಗಳು, ವಾರ್ಷಿಕ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೋಂದಿರುವ ಕುಟುಂಬಗಳಿಗೆ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆಯಲು ಅನರ್ಹ.

ಈ ಕುಟುಂಬಗಳನ್ನು ಆದ್ಯತೇತರ ವಲಯವೆಂದು ಪರಿಗಣಿಸಿರುವ ಸರ್ಕಾರ ಇಂತಹ ಕುಟುಂಬಗಳಿಗೆ ಎಪಿಎಲ್‌ ಪಡಿತರ ಕಾರ್ಡ್‌ಗಳನ್ನು ನೀಡುತ್ತಿದೆ. ಈ ಸೌಲಭ್ಯಗಳಿಗಿಂತಲೂ ಕಡಿಮೆಯುಳ್ಳ ಕುಟುಂಬಗಳನ್ನು ಆದ್ಯತಾ ವಲಯವೆಂದು ಗುರುತಿಸಿ, ಅಂತಹ ಕುಟುಂಬಗಳಿಗೆ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ವಿತರಿಸಿ, ಪಡಿತರ ಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಅ ಕಾರಿಗಳು ತಿಳಿಸಿದ್ದಾರೆ.

1500 ಪಡಿತರ ಚೀಟಿ ವಾಪಸ್‌: ಆಹಾರ ಇಲಾಖೆ ಈ ಹಿಂದೆಯೇ ಒಮ್ಮೆ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದಿದ್ದ ಅನರ್ಹರು ಹಿಂತಿರುಗಿಸುವಂತೆ ಕೋರಿತ್ತು. ಇಲ್ಲದಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿತ್ತು. ಆಗ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ನೌಕರರು, ಆರ್ಥಿಕ ಸದೃಢರು ಇತರರು ಸ್ವಯಂ ಪ್ರೇರಣೆಯಿಂದ ಒಟ್ಟು 1500 ಪಡಿತರ ಚೀಟಿ ಹಿಂದುರುಗಿಸಿದ್ದರು.

ಅದರಂತೆ ಇದೀಗ ಪುನಃ ಮತ್ತೂಮ್ಮೆ ಹಿಂದುರುಗಿಸುವಂತೆ ಪ್ರಕಟಣೆ ಹೊರಡಿಸಿದ್ದು, ಅವ ಧಿಯನ್ನು ಜೂ.30ರ ವರೆಗೆ ವಿಸ್ತರಿಸಲಾಗಿದೆ.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.