ಪ್ರವಾಹ ಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
Team Udayavani, Jun 10, 2021, 10:18 PM IST
ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ಮುಂಗಾರು ಹಂಗಾಮು ಆರಂಭವಾಗಿದ್ದು, ಎಲ್ಲೆಡೆ ಮಳೆ ಸುರಿಯಲಾರಂಭಿಸಿದೆ. ಕಳೆದ ವರ್ಷದಂತೆ ಈ ಬಾರಿಯೂ ಪ್ರವಾಹ ಬಂದಲ್ಲಿ ನಿಭಾಯಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಂಡಿರುವ ಜಿಲ್ಲಾಡಳಿತ, ಪ್ರವಾಹ ಪೀಡಿತ ತಾಲೂಕು, ಗ್ರಾಮಗಳಲ್ಲಿನ ಮೀನುಗಾರರಿಗೆ, ಯುವಕರಿಗೆ ತರಬೇತಿ ನೀಡಿದ್ದು, ಸೋಂಕಿನ ಲಕ್ಷಣಗಳುಳ್ಳವರಿಗೆ ಪ್ರತ್ಯೇಕ ಕಾಳಜಿ ಕೇಂದ್ರಗಳನ್ನು ತೆರೆದು ಆರೈಕೆ ಮಾಡಲು ಸನ್ನದ್ಧವಾಗಿದೆ.
ಉಭಯ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಸಹ ಬಿರುಸು ಪಡೆದುಕೊಳ್ಳುತ್ತಿವೆ. ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಹಾದು ಹೋಗಿರುವ ತುಂಗಭದ್ರಾ ನದಿಗೆ ಭದ್ರಾ, ತುಂಗಾ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಲ್ಲಿ ಮತ್ತು ತುಂಗಭದ್ರಾ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಗೆ ಹರಿಸಿದಲ್ಲಿ ಜಿಲ್ಲೆಯ ನದಿದಡದಲ್ಲಿರುವ ವಿವಿಧ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ.
ಈ ಕುರಿತು ಈಗಾಗಲೇ ಎಚ್ಚೆತ್ತುಕೊಂಡಿರುವ ಬಳ್ಳಾರಿ/ ವಿಜಯನಗರ ಜಿಲ್ಲಾಡಳಿತ, ಕಳೆದ ವರ್ಷದಂತೆ ಈ ಬಾರಿಯೂ ಪ್ರವಾಹವನ್ನು ಸಮರ್ಪಕವಾಗಿ ನಿಭಾಯಿಸಲು ಕಾಳಜಿ ಕೇಂದ್ರ, ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ, ಜಾನುವಾರುಗಳಿಗೆ ಮೇವು, ತುರ್ತು ಸಂದರ್ಭಗಳಲ್ಲಿ ಬೋಟ್‌ಗಳ ವ್ಯವಸ್ಥೆ, ರಸ್ತೆ ಮನೆ ಸಮಿತಿ ರಚನೆ, ಯುವ ಮೀನುಗಾರರಿಗ-ಸ್ವಯಂ ಸೇವಕರಿಗೆ ತರಬೇತಿ ಸೇರಿ ಇನ್ನಿರೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಪ್ರವಾಹ ಪೀಡಿತ 32 ಹಳ್ಳಿಗಳ ಪತ್ತೆ: ಬಳ್ಳಾರಿ/ ವಿಜಯನಗರ ಜಿಲ್ಲೆಗಳ ಹಡಗಲಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಸಿರುಗುಪ್ಪ ತಾಲೂಕುಗಳ 15 ಗ್ರಾಪಂ ವ್ಯಾಪ್ತಿಯಲ್ಲಿ ನದಿ ದಡದಲ್ಲಿರುವ 32 ಹಳ್ಳಿಗಳನ್ನು ಗುರುತಿಸಲಾಗಿದೆ. ಭದ್ರಾ ಮತ್ತು ತುಂಗಾ ಜಲಾಯಶದಿಂದ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಹರಿಸಿದಾಗ ಮತ್ತು ತುಂಗಭದ್ರಾ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಗೆ ಹರಿಸಿದಾಗ ಗುರುತಿಸಲಾದ ಈ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯೆತೆಯಿದೆ. ಹರಪನಹಳ್ಳಿ ತಾಲೂಕು ಗರ್ಭಗುಡಿ, ಹಲವಾಗಲು ರಸ್ತೆಗಳು ಮುಳುಗಡೆಯಾಗುವ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿದೆ.
64 ಕಾಳಜಿ ಕೇಂದ್ರ: ರೋಗ ಲಕ್ಷಣವುಳ್ಳವರಿಗೆ ಪ್ರತ್ಯೇಕ: ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಈ ಗ್ರಾಮಗಳಲ್ಲಿನ ಜನರನ್ನು ತಾತ್ಕಾಲಿಕವಾಗಿ ಸ್ಥಳೀಯ ಶಾಲಾ ಕಟ್ಟಡ ಸೇರಿ ಇನ್ನಿತರೆ ಸಾರ್ವಜನಿಕ ಸ್ಥಳಗಳಿಗೆ ಸ್ಥಳಾಂತರಿಸಿ ಆರೈಕೆ ಮಾಡುವ ಸಲುವಾಗಿ 64 ಕಾಳಜಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಕಳೆದ ಬಾರಿಯಂತೆ ಈ ಬಾರಿಯೂ 32 ಕಾಳಜಿ ಕೇಂದ್ರ ತೆರೆಯುವುದರ ಜತೆಗೆ ಕೋವಿಡ್ ಸೋಂಕು ಇರುವುದರಿಂದ ಎಲ್ಲರನ್ನೂ ಒಂದೇ ಕಡೆ ಸೇರಿಸುವ ಬದಲಿಗೆ ರೋಗ ಲಕ್ಷಣಗಳುಳ್ಳವರಿಗಾಗಿ ಪ್ರತ್ಯೇಕವಾಗಿ 32 ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 64 ಕಾಳಜಿ ಕೇಂದ್ರಗಳನ್ನು ಗುರುತಿಸಿ ಅವುಗಳಲ್ಲಿ ಶೌಚಾಲಯ, ವಿದ್ಯುತ್, ಕುಡಿವ ನೀರಿನ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. ಇನ್ನು ರಸ್ತೆ, ಮನೆ ದುರಸ್ತಿಗೆ ಸಂಬಂ ಧಿಸಿದಂತೆ ಸಹಾಯಕ ಆಯುಕ್ತರು, ತಹಶೀಲ್ದಾರ್, ಪಿಆರ್‌ಇಡಿ ಇಂಜಿನಿಯರ್ ಅವರುಗಳುಳ್ಳ ಸಮಿತಿ ರಚಿಸಲಾಗಿದೆ.
ಯುವ ಮೀನುಗಾರರಿಗೆ ತರಬೇತಿ: ಪ್ರವಾಹದಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲು ಗುರುತಿಸಲಾದ ಗ್ರಾಮಗಳಲ್ಲಿನ ಯುವ ಮೀನುಗಾರರಿಗೆ, ಸ್ವಯಂ ಸೇವಕರಿಗೆ ಹೇಗೆ ರಕ್ಷಣೆ ಮಾಡಬೇಕು ಎಂಬುದರ ಕುರಿತು ಸೂಕ್ತ ತರಬೇತಿ ನೀಡಲಾಗಿದೆ. ಜತೆಗೆ ನದಿ ನಡುಗಡ್ಡೆಯಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ನಾಲ್ಕು ಬೋಟ್‌ಗಳನ್ನು ಸಿದ್ಧಪಡಿಸಲಾಗಿದ್ದು, ಪ್ರವಾಹ ಪೀಡಿತ ತಾಲೂಕುಗಳಾದ ಹಡಗಲಿ, ಹರಪನಹಳ್ಳಿ, ಸಿರುಗುಪ್ಪ ಮತ್ತು ಬಳ್ಳಾರಿ ತಾಲೂಕುಗಳಲ್ಲಿ ತಲಾ ಒಂದು ಮೀಸಲಿಡಲಾಗಿದೆ. ಜಾನುವಾರುಗಳಿಗೆ ಮೇವು ಸಂಗ್ರಹಿಸಲಾಗಿದ್ದು, ಸದ್ಯ ಜಿಲ್ಲೆಯಾದ್ಯಂತ 1,37,842 ಟನ್ ದಾಸ್ತಾನಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಕೃಷಿ ಚಟುವಟಿಕೆ ಬಿರುಸು: ಪ್ರಸಕ್ತ ವರ್ಷ ಮುಂಗಾರು ಹಂಗಾಮು ಈಗಾಗಲೇ ಆರಂಭವಾದ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಏಕದಳ, ದ್ವಿದಳ, ಎಣ್ಣೆಕಾಳು, ವಾಣಿಜ್ಯ ಬೆಳೆ ಸೇರಿ ಒಟ್ಟು 4,23,365 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ಕೃಷಿ ಇಲಾಖೆ ಗುರಿ ಹೊಂದಿದೆ. ಈ ಕುರಿತು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭತ್ತ, ಜೋಳ, ರಾಗಿ, ಮುಸುಕಿನಜೋಳ, ಸಜ್ಜೆ, ತೊಗರಿ, ಹೆಸರು, ಅವರೆ, ವಾಣಿಜ್ಯ ಬೆಳೆ ಬಿತ್ತನೆ ಕಾರ್ಯ ನಡೆಯುತ್ತಿದೆ. ಈ ಪೈಕಿ ಏಕದಳ 4160 ಹೆಕ್ಟೇರ್, ದ್ವಿದಳ 354 ಹೆಕ್ಟೇರ್, ಎಣ್ಣೆಕಾಳು 1469 ಹೆಕ್ಟೇರ್, ವಾಣಿಜ್ಯ ಬೆಳೆ 4767 ಹೆಕ್ಟೇರ್ ಸೇರಿ ಒಟ್ಟು 10750 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.
ಇನ್ನು ಉಭಯ ಜಿಲ್ಲೆಗಳಲ್ಲಿ ಭತ್ತ, ಹೆ„ಭತ್ತ, ಜೋಳ, ರಾಗಿ ಸೇರಿ ವಿವಿಧ ಬೆಳಗಳ ಒಟ್ಟು 11196.72 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದ್ದು, ಈ ಪೈಕಿ 1807.35 ಕ್ವಿಂಟಲ್ ಬೀಜವನ್ನು ರಿಯಾಯಿತಿಯಲ್ಲಿ ವಿತರಿಸಲಾಗಿದೆ. 9389.37 ಕ್ವಿಂಟಲ್ ಬೀಜ ಸದ್ಯ ದಾಸ್ತಾನಿದೆ. ರಸಗೊಬ್ಬರ ದಾಸ್ತಾನು: ಮುಂಗಾರು ಹಂಗಾಮು ಏಪ್ರಿಲ್ ತಿಂಗಳಿಂದ ಸೆಪ್ಟೆಂಬರ್‌ವರೆಗೆ ಇರಲಿದ್ದು, ಅಲ್ಲಿವರೆಗೆ ಯೂರಿಯಾ, ಡಿಎಪಿ, ಎಂಒಪಿ, ಎನ್‌ಪಿಕೆ, ಎಸ್‌ಎಸ್‌ಪಿ, ಅಮೋನಿಯಂ ಸಲ್ಫೆಟ್ ಸೇರಿ ಒಟ್ಟು 2,02,359 ಮೆಟ್ರಿಕ್ ಟನ್ ಬೇಡಿಕೆಯಿದೆ.
ಸದ್ಯ ಏಪ್ರಿಲ್-ಜೂನ್ ತಿಂಗಳವರೆಗೆ 97381 ಮೆಟ್ರಿಕ್ ಟನ್ ಬೇಡಿಕೆಯಿದ್ದು, ಈ ಪೈಕಿ ಈಗಾಗಲೇ 81194 ಮೆಟ್ರಿಕ್ ಟನ್ ಸರಬರಾಜಾಗಿದೆ. 34973.5 ಮೆಟ್ರಿಕ್ ಟನ್ ವಿತರಿಸಲಾಗಿದ್ದು, 46220.5 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ ಎಂದು ಕೃಷಿ ಇಲಾಖೆಯ ಅಂಶಗಳು ಸ್ಪಷ್ಟಪಡಿಸುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.