ಸಂವಿಧಾನ ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಯಶಸ್ಸು
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕುಲಪತಿ ಡಾ| ಸ.ಚಿ.ರಮೇಶ ಮಹಾತ್ಮ ಗಾಂಧೀಜಿ ಹಾಗೂ ಡಾ| ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
Team Udayavani, Jan 27, 2021, 5:02 PM IST
ಹೊಸಪೇಟೆ: ಭಾರತದ ಸಂವಿಧಾನವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ ಎಂದು ಬೆಂಗಳೂರಿನ ಕಾನೂನು ಕಾಲೇಜಿನ ಪ್ರಾಧ್ಯಾಪಕ ಡಾ| ಎನ್. ಸತೀಶ್ ಗೌಡ ಹೇಳಿದರು.
ಕನ್ನಡ ವಿಶ್ವವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆನ್‌ಲೈನ್ ವೆಬಿನಾರ್ ಮೂಲಕ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಪ್ರಜಾಪ್ರಭುತ್ವವು ಯಶಸ್ವಿಯಾಗಲು ಭಾರತದ ಸಂವಿಧಾನವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರ
ಬಳಿಯೂ ಧರ್ಮಗ್ರಂಥಗಳಿಗಿಂತ ಭಾರತದ ಸವಿಧಾನದ ಪ್ರತಿ ಇರಬೇಕು. ಮೊದಲು ಯುವಜನತೆ ಸಂವಿಧಾನದ ಆಶಯಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.
ಕುಲಪತಿ ಡಾ| ಸ.ಚಿ.ರಮೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನವನ್ನು ಪಾಲಿಸುವುದು ಮತ್ತು ಗೌರವಿಸುವುದು
ಜನರ ಬದುಕಿನ ಭಾಗವಾಗಬೇಕು ಎಂದರು.
ಲೋಹಿಯ ಅಧ್ಯಯನ ಪೀಠದ ಸಂಚಾಲಕ ಡಾ| ಈ. ಎರಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಡಾ| ಸುಬ್ಬಣ್ಣ ರೈ ಮತ್ತು ಸಮಾಜ ವಿಜ್ಞಾನಗಳ ನಿಕಾಯದ ಡೀನರಾದ ಡಾ| ಮಾಧವ ಪೆರಾಜೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.