ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ
Team Udayavani, Jun 16, 2021, 10:18 PM IST
ಬಳ್ಳಾರಿ: ಮೆಡಿಕಲ್ ಸರ್ವಿಸ್ ಸೆಂಟರ್ ರಾಜ್ಯ ಸಮಿತಿಯು ಕೋವಿಡ್ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್‌ಲೈನ್‌ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.
ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಮೊದಲನೆ ಮತ್ತು ಎರಡನೇ ಅಲೆಯಲ್ಲಿ ಅಂದಾಜು ಶೇ.24 ಮಕ್ಕಳಿಗೆ ಕೊರೊನಾ ಸೋಂಕು ಬಂದು ಹೋಗಿದೆ. ತೀವ್ರ ತರವಾದ ರೋಗ ಅವರಲ್ಲಿ ಕಂಡುಬಂದಿಲ್ಲ.
ಮಕ್ಕಳ ತಜ್ಞರ ಅಭಿಪ್ರಾಯವೂ ಸಹ ಇದೇ ಆಗಿದೆ. ಆದರೂ, ಸರ್ಕಾರ ಮತ್ತು ಆರೋಗ್ಯ ಇಲಾಖೆ ತನ್ನ ತಯಾರಿಯನ್ನು ಮಾಡಿಕೊಳ್ಳಬೇಕು. ಸಾರ್ವಜನಿಕರು, ಪೋಷಕರು ಈಗಾಗಲೇ ತಿಳಿದಿರುವ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಬೇಕು. ಸರ್ಕಾರವು ಕೈಗೊಳ್ಳುವ ತಯಾರಿಯು ಕೇವಲ ಈಗಿನ ಸಾಂಕ್ರಾಮಿಕತೆಗಷ್ಟೇ ಸೀಮಿತಗೊಳಿಸದೆ, ದೂರದೃಷ್ಟಿ ಇಟ್ಟುಕೊಂಡು, ಮುಂದಿನ ಕನಿಷ್ಟ 10 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ತಯಾರಿ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು.
ಸಾಂಕ್ರಾಮಿಕ ರೋಗತಜ್ಞ ಡಾ| ಕೆ.ಪ್ರಕಾಶ್ ಮಾತನಾಡಿ, ಈ ಅಲೆಗಳು ಬರುವ ಪ್ರಕ್ರಿಯೆ ಮತ್ತು 3ನೇ ಅಲೆ ನಿಭಾಯಿಸುವುದು ಹೇಗೆ ಎಂಬುದರ ಕುರಿತು ವಿವರಿಸಿದರು. ವೈರಾಣುವಿನ ಸಾಂಕ್ರಾಮಿಕ ಅಲೆಗಳಲ್ಲಿ ಬರುತ್ತವೆ. ಅತಿಹೆಚ್ಚು ಜನರು ಸೋಂಕಿತರಾದಾಗ ಅದು ಅಲೆಯಾಗುತ್ತದೆ. 3ನೇ ಅಲೆಯನ್ನು ನಿಭಾಯಿಸುವುದಕ್ಕೆ ಸರಿಯಾದ ತಯಾರಿ ಅವಶ್ಯಕವಾಗಿದೆ. ಆಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್, ಮಕ್ಕಳ ಐಸಿಯು, ಅವರ ವಯಸ್ಸಿಗೆ ಬೇಕಾದ ಸಾಮಗ್ರಿ ಹಾಗೂ ಔಷಧಗಳನ್ನು ಸರಿಯಾದ ಪ್ರಮಾಣದಲ್ಲಿ ಕೊರತೆಯಾಗದ ಹಾಗೆ ಸಿದ್ಧತೆ ಮಾಡಿಕೊಂಡಿರಬೇಕು.
ಜನರು ಮುಂಜಾಗ್ರತಾ ಕ್ರಮಗಳಲ್ಲಿ ಸಡಿಲತೆ ತೋರಿಸದೆ ಮುಂದುವರಿಸಬೇಕು. ಜನರ ಸಾರ್ವಜನಿಕ ಸಭೆ ಸಮಾರಂಭಗಳು, ಜನಜಂಗುಳಿಗಳನ್ನು ತಡೆಯಬೇಕು ಎಂದು ತಿಳಿಸಿದರು. ಆನ್‌ಲೈನ್ ವಿಚಾರ ಸಂಕಿರಣದಲ್ಲಿ ಎಂಎಸ್‌ಸಿಯ ರಾಜ್ಯ ಜಂಟಿ ಕಾರ್ಯದರ್ಶಿ ಡಾ| ಬಿ.ಎನ್.ಹೇಮಾದೇವಿ ನಡೆಸಿಕೊಟ್ಟರು. ಡಾ| ವಿದ್ಯಾ, ಕಚೇರಿ ಕಾರ್ಯದರ್ಶಿ ಡಾ| ಸುರೇಶ್ ಹೆಗಡೆ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.