ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ

Team Udayavani, Jun 27, 2021, 9:19 PM IST

27-16

ಬಳ್ಳಾರಿ: ರಾಜ್ಯ ಸರ್ಕಾರವು ಉಚಿತವಾಗಿ ನೀಡಿರುವ ಟ್ಯಾಬ್‌ಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ನಗರ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು.

ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣಾ ಕಾರ್ಯಕ್ರಮ ಹಾಗೂ ಸ್ಮಾರ್ಟ್‌ ಕ್ಲಾಸ್‌ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಕೊರತೆ ಅನುಭವಿಸದಂತೆ ಇತರೆ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಯನ್ನು ಮಾಡಬೇಕಾದರೆ ಅವರಿಗೆ ಎಲ್ಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವ ಕೆಲಸ ಮಾಡುತ್ತಿದೆ.

ಈಗಾಗಲೇ ಕಳೆದ ಬಾರಿ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸಿ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ಉತ್ತಮ ವ್ಯಾಸಂಗ ಮಾಡಿ ಉನ್ನತಮಟ್ಟಕ್ಕೆ ಬೆಳೆಯಬೇಕು ಎಂದು ಸಲಹೆ ನೀಡಿದರು. ಕಾಲೇಜಿಗೆ ಅಗತ್ಯವಿರುವ ಆಡಿಟೋರಿಯಂ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು. ದೇಶದಲ್ಲಿ 14ನೇ ಸ್ಥಾನಗಳಿಸಿರುವ ಈ ಸರಳಾದೇವಿ ಕಾಲೇಜು ಭವಿಷ್ಯದಲ್ಲಿ ಮೂರು ಅಥವಾ ನಾಲ್ಕನೇ ಸ್ಥಾನಕ್ಕೇರಲಿ ಎಂದು ಆಶಯ ವ್ಯಕ್ತಪಡಿಸಿದ ಶಾಸಕರು, ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳಲ್ಲಿರುವವರನ್ನು ಸನ್ಮಾನಿಸಿ ಇತರೆ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುವಂತೆ ಮಾಡಲಾಗುವುದು ಎಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ|ಎ. ಹೇಮಣ್ಣ ಮಾತನಾಡಿ, ಕಾಲೇಜಿಗೆ 1415 ಟಾಬ್ಲೆಟ್‌ಗಳು ಬಂದಿದ್ದು, ಇಂದು ಸಾಂಕೇತಿಕವಾಗಿ ವಿವಿಧ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಗಿದೆ. ಕಾಲೇಜು ಸಂಪೂರ್ಣವಾಗಿ ಆರಂಭವಾದ ಮೇಲೆ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ವೀರಶೇರರೆಡ್ಡಿ, ಸದಸ್ಯರಾದ ಮಾಜಿ ಮೇಯರ್‌ ಇಬ್ರಾಹಿಂ ಬಾಬು, ಶ್ರೀನಿವಾಸಮೋತ್ಕರ್‌, ಅಶೋಕ್‌ ಇದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ತಿಪ್ಪೇಸ್ವಾಮಿ, ಕುರುಬರ ಮಹೇಶ್‌, ಅಮೀರ್‌ ಬಾಷ, ವೀರೇಶ್‌, ರಿಂದೂ, ಹರ್ಷವರ್ಧನ, ಅಜಯ್‌ ಕುಮಾರ್‌, ಗಣೇಶ್‌ ಡಿ.ಎಸ್‌, ರಾಮಾಂಜನೇಯಲು, ನೂರ್‌ಜಹಾನ್‌, ಲತೀಫ್‌, ಶಾರದ, ದಶಗುಣ ಇವರಿಗೆ ಟ್ಯಾಬ್‌ಗಳನ್ನು ವಿತರಿಸಲಾಯಿತು. ಪ್ರೊ| ಬಿ. ನಾಗರಾಜ್‌, ಡಾ| ಇಸ್ಮಾಯಿಲ್‌ ಮಕಾಂದರ್‌, ಪ್ರೊ| ಆರ್‌. ಮನೋಹರನ್‌, ಡಾ| ವೀರರಾಘವುಲು, ಡಾ| ಆರ್‌.ಎಂ. ಶ್ರೀದೇವಿ, ಶೋಭಾರಾಣಿ, ಎಂ.ಎಂ. ಈಶ್ವರ್‌, ಡಾ| ಅಣ್ಣಪ್ಪಸ್ವಾಮಿ ಎಚ್‌.ಡಿ. ಪಂಚಾಕ್ಷರಿ, ಪಂಪನಗೌಡ, ಕಲ್ಯಾಣಬಸವ, ಗುರುಬಸಪ್ಪ, ಜಿ.ಕೊಟ್ರಪ್ಪ, ಡಾ| ಶಶಿಕಾಂತ, ಐಟಿ ಸಂಚಾಲಕ ಡಾ| ಹರೀಶ್‌ಗುಜ್ಜಾರ್‌, ಡಾ| ದುರುಗಪ್ಪ ಟಿ, ಸಿದ್ದೇಶ್‌, ಡಾ| ಕೆ.ಬಸಪ್ಪ ಇದ್ದರು. ಗಣೇಶ್‌ ಪ್ರಾರ್ಥಿಸಿದರು.

ಡಾ| ತಿಪ್ಪೇರುದ್ರ ಸ್ವಾಗತಿಸಿದರು. ಪ್ರೊ| ಸಿ. ದೇವಣ್ಣ ನಿರೂಪಿಸಿದರು. ಡಾ| ಟಿ. ವೀರಭದ್ರಪ್ಪ ವಂದಿಸಿದರು.

ಟಾಪ್ ನ್ಯೂಸ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.