ನಮ್ಮ ಕ್ಲಿನಿಕ್‌ ಮೆಡಿಕಲ್‌ ತಂಡದಿಂದ ಲಸಿಕೆ ವಿತರಣೆ

Team Udayavani, Jun 28, 2021, 10:14 PM IST

28-15

ಬಳ್ಳಾರಿ: ನಗರದ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್‌ ಲಸಿಕಾ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಗಿದ್ದು 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ ನೀಡಲಾಯಿತು. ಬೆಂಗಳೂರಿನ ಯುನೈಟೆಡ್‌ ವೇಸ್‌ ಅಸೋಸಿಯೇಷನ್‌ನ ನಮ್ಮ ಕ್ಲಿನಿಕ್‌ ಮೆಡಿಕಲ್‌ ಟೀಂ ಡಾ| ಋತ್ವಿಕ್‌ ನೇತೃತ್ವದ 9 ಜನ ವೈದ್ಯರ ತಂಡ, ಜಿಲ್ಲಾಡಳಿತದ ಸಲಹೆಯಂತೆ ಲಸಿಕಾಕರಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಜಿಲ್ಲಾ ಆರೋಗ್ಯ ಇಲಾಖೆಗೆ ಸಹಕಾರ ನೀಡಿದರು.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಮಾಜ ಸೇವೆ ಹಿನ್ನೆಲೆಯ ಸ್ವಯಂ ಸೇವಾ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿಯಂತೆ ನೇರವಾಗಿ ಕೋವಿಡ್‌ ಲಸಿಕೆಯನ್ನು ಖರೀದಿಸಿ ನಮ್ಮ ಕ್ಲಿನಿಕ್‌ ಮೆಡಿಕಲ್‌ ಟೀಂ ಮೂಲಕ ಆಯಾ ಜಿಲ್ಲಾಡಳಿತದ ಜೊತೆ ಚರ್ಚಿಸಿ ತದನಂತರ ಆಯ್ದ ಸ್ಥಳಗಳಲ್ಲಿ ಅದರಲ್ಲೂ ನಗರದ ಸ್ಲಮ್‌ ಪ್ರದೇಶ, ಗ್ರಾಮೀಣ ಭಾಗದಲ್ಲಿ ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಈ ತಂಡವು ಲಸಿಕೆ ಹಾಕುವ ಉದ್ದೇಶ ಹೊಂದಿದೆ. ಸದ್ಯ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ಕೋವಿಡ್‌ ಲಸಿಕಾ ಕಾರ್ಯ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸುಮಾರು 600ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದ್ದು, ಈ ಪೈಕಿ 493 ಜನರಿಗೆ ನಮ್ಮ ಕ್ಲಿನಿಕ್‌ ಮೆಡಿಕಲ್‌ ತಂಡದವರು ನೀಡಿದ್ದು, ಇನ್ನುಳಿದ 100 ಜನರಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಯಿತು. ಬೆಳಗ್ಗೆ 9.30 ರಿಂದ ಸಂಜೆವರೆಗೂ ಲಸಿಕೆ ಕಾರ್ಯಕ್ರಮ ನಡೆಯಿತು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರು ತಿಳಿಸಿರು.

ಆಟೋದಲ್ಲೇ ಲಸಿಕೆ ನೀಡಿಕೆ: ಕಾರ್ಯಕ್ರಮದ ವೇಳೆ ಮೂಳೆ, ಕ್ಷಯರೋಗದಿಂದ ಬಳಲುತ್ತಿದ್ದ ಗುಗ್ಗರಹಟ್ಟಿಯ ನಿವಾಸಿ ವಿರೇಶ ಎನ್ನುವವರು ನಡೆಯಲು ಆಗದಿದ್ದರೂ ಲಸಿಕೆ ಹಾಕಿಸಿಕೊಳ್ಳಲು ಆಟೋದಲ್ಲಿ ತಮ್ಮ ಪತ್ನಿಯೊಂದಿಗೆ ಬಂದರು.

ಅವರ ನೋಂದಣಿ ಪ್ರಕಿಯೆಯನ್ನು ಪೂರ್ಣಗೊಳಿಸಿ ಆಟೊದಲ್ಲಿಯೇ ಅವರಿಗೆ ವೈದ್ಯಕೀಯ ಸಿಬ್ಬಂದಿ ಲಸಿಕೆ ನೀಡಿ ವಾಪಸ್‌ ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ತ್ರಿವೇಣಿ, ವೈದ್ಯಾಧಿಕಾರಿ ಡಾ| ಶಗುಪ್ತಾ ಶಾಹೀನ್‌, ಮುಖಂಡರಾದ ಸೂರಿ, ಕೆ. ಶ್ರೀಕಾಂತ, ಕೆ.ಹೊನ್ನೂರಸ್ವಾಮಿ, ತಿಪ್ಪೇಸ್ವಾಮಿ, ಕೆ. ಪ್ರಹ್ಲಾದ ಮತ್ತು ಯುವ ಪದಾ ಧಿಕಾರಿಗಳು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಶಾಂತಮ್ಮ, ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಯಶೋದಾ, ಜಿಲಾನ್‌, ಸರಳಾ ಕುಮಾರಿ, ಉಮಾಮಹೇಶ್ವರಿ, ಅರುಣಾ ನಿರಂಜನ, ಎರ್ರಿಸ್ವಾಮಿ, ದೇವರಾಜ, ನಾಗವೇಣಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.