ಹೊಸ ಶಿಕ್ಷಣ ನೀತಿಯಿಂದ ತಾರತಮ್ಯ ಸೃಷ್ಟಿ: ಥೋರಟ್‌


Team Udayavani, Jul 6, 2021, 10:00 PM IST

6-17

ಬಳ್ಳಾರಿ: ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದರಿಂದ ನಾಲ್ಕು ವರ್ಷದ ಪದವಿ ಪದ್ಧತಿಯು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಲ್ಲಿ ಅಸಮಾನತೆ, ಹೊಸ ರೀತಿಯ ತಾರತಮ್ಯ ಸೃಷ್ಟಿಸಲಿದೆ ಎಂದು ವಿಶ್ವ ವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ)ದ ಮಾಜಿ ಅಧ್ಯಕ್ಷ ಪ್ರೊ| ಸುಖದೇವ್‌ ಥೋರಟ್‌ ಪ್ರತಿಪಾಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯ ವಿರುದ್ಧ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ವೆಬಿನಾರ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ನಾಲ್ಕು ವರ್ಷದ ಪದವಿ ಪದ್ಧತಿಯು ವಿದೇಶಕ್ಕೆ ಹಾರಿಹೋಗುವ ಕೆಲವೇ ಕೆಲವು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆಯೇ ಹೊರತು ಬಹುದೊಡ್ಡ ಸಂಖ್ಯೆಯ ಬಡ ಮತ್ತು ಸಾಮಾನ್ಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದಿಲ್ಲ. ಈ ನೀತಿಯಲ್ಲಿ ಬಹು ಹಂತದ ತೇರ್ಗಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಂಪೂರ್ಣ ಜ್ಞಾನ ನೀಡಲಾರದು ಮತ್ತು ಉದ್ಯೋಗಕ್ಕೆ ಸಮರ್ಪಕ ಅರ್ಹ ಅಭ್ಯರ್ಥಿಗಳನ್ನು ಸಹ ಸೃಷ್ಟಿಸಲಾರದು. ಇದು ಅಸಮಾನತೆಯೊಂದಿಗೆ ಹೊಸ ಮಾದರಿ ತಾರತಮ್ಯ ಸೃಷ್ಟಿಸಲಿದೆ ಎಂದರು.

ಶಿಕ್ಷಣ ತಜ್ಞರು, ನಿವೃತ್ತ ಪ್ರಾಂಶುಪಾಲ ಪ್ರೊ| ಮಹಾಬಲೇಶ್ವರರಾವ್‌ ಮಾತನಾಡಿ, ಸರ್ಕಾರ ಜನಾಭಿಪ್ರಾಯವನ್ನು ಕಡೆಗಣಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ಗಾಳಿಗೆ ತೂರಿ ಈ ನೀತಿಯನ್ನು ಜಾರಿಗೊಳಿಸುತ್ತಿದೆ. ಇದು ಸಂವಿಧಾನ ವಿರೋಧಿ , ಜನ ವಿರೋ ಧಿ ಮತ್ತು ಸಮಾಜ ವಿರೋಧಿ  ನೀತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಐಎಸ್‌ಇಸಿ ಅಖೀಲ ಭಾರತ ಪ್ರಧಾನ ಕಾರ್ಯದರ್ಶಿ, ಭೂಗರ್ಭಶಾಸ್ತದ ವಿಜ್ಞಾನಿ ಪ್ರೊ| ಅನಿಸ್‌ ರಾಯ್‌ ಮಾತನಾಡಿ, ಸರ್ಕಾರವು ಹೊಸ ಶಿಕ್ಷಣ ನೀತಿ-2020ರನ್ವಯ ಬಹು-ಶಿಸ್ತೀಯ ಪದ್ಧತಿಯನ್ನು ಜಾರಿಗೊಳಿಸುತ್ತೇವೆ ಎಂಬ ಮುಖವಾಡದಲ್ಲಿ ಈಗಾಗಲೇ ಇರುವ ಅಂತರ್‌ ಸಂಬಂಧಿ  àಯ ಬಹು-ಶಿಸ್ತೀಯ ಪದ್ಧತಿ ಹಾಳು ಮಾಡುತ್ತಿವೆ ಅಲ್ಲದೇ ಮಾನವೀಯ ಶಾಸ್ತÅಗಳನ್ನು ಅಪಾಯಕ್ಕೆ ತಳ್ಳುತ್ತಿವೆ ಎಂದರು.

ಹಂಪಿ ಕನ್ನಡ ವಿವಿ ವಿಶ್ರಾಂತ ಉಪಕುಲಪತಿ ಪ್ರೊ| ಎ.ಮುರಿಗೆಪ್ಪ ಮಾತನಾಡಿ, ಈಗಿರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸದೆ ಹಠಾತ್ತನೆ ಇಂತಹ ಬದಲಾವಣೆ ತರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಬರುವುದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ತರಬೇಕಾದರೆ ಕನಿಷ್ಠ ಎರಡು ವರ್ಷ ಹಿಡಿಯುತ್ತದೆ ಮತ್ತು ಶಿಕ್ಷಣ ತಜ್ಞರ, ಪಾಲಕರ, ಉಪನ್ಯಾಸಕರ ಅಭಿಪ್ರಾಯ ಪಡೆದು ತರಬೇಕಾಗುತ್ತದೆ. ಆದರೆ ಇದೆಲ್ಲ ನಿರ್ಲಕ್ಷಿಸಿ ಇದೀಗ ಹಠಾತ್ತನೆ ಇಂತಹ ಬದಲಾವಣೆ ಹೇರುವುದು ಶಿಕ್ಷಣ ಕ್ಷೇತ್ರಕ್ಕೆ ಸೂಕ್ತವಲ್ಲ ಎಂದು ಎಂದರು.

ಎಐಎಸ್‌ಇಸಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಜಾಗತೀಕರಣದ ಹಿನ್ನೆಲೆಯಲ್ಲಿ ಇಂದಿನ ಶಿಕ್ಷಣ ನೀತಿಯನ್ನು ರೂಪಿಸುತ್ತಿರುವುದರಿಂದ ಅದು ಜನರ ಆಶಯ ಈಡೇರಿಸುತ್ತಿಲ್ಲ. ಅಲ್ಲದೇ ಖಾಲಿ ಹೊಟ್ಟೆಯ ಶಿಕ್ಷಕ ಅದ್ಹೇಗೆ ವಿದ್ಯಾರ್ಥಿಗಳ ತಲೆಯನ್ನು ತುಂಬಬಲ್ಲ?. ಆದ್ದರಿಂದ ಸರ್ಕಾರ ಮೊದಲು ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಬೇಕು. ಕೂಡಲೇ ಇಂತಹ ನೀತಿಯನ್ನು ಕೈ ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಎಐಎಸ್‌ಇಸಿ ರಾಜ್ಯ ಸಮಿತಿ ಸದಸ್ಯರು ಮತ್ತು ಉಪನ್ಯಾಸಕ ಸೋಮಶೇಖರಗೌಡ ಮಾತನಾಡಿದರು. ರಾಜ್ಯ ಸೆಕ್ರೇಟರಿಯೇಟ್‌ ಸದಸ್ಯ ವಿ.ಎನ್‌. ರಾಜಶೇಖರ್‌ ಅಧ್ಯಕ್ಷತೆ ವಹಿಸಿದ್ದರು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಪ್ರತಿನಿ ಧಿಗಳು ಸಂವಾದದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.