ವಿಮ್ಸ್ ನಲ್ಲಿ ಆರಂಭವಾಯ್ತು 3ನೇ ಅಲೆ ಸಿದ್ಧತೆ
Team Udayavani, Jul 12, 2021, 10:09 PM IST
ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ಕೋವಿಡ್ ಸೋಂಕು ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಮೂರನೇ ಅಲೆ ಆವರಿಸುವ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿದ್ದು, ಸಮರ್ಥವಾಗಿ ಎದುರಿಸಲು ಮುಂದಾಗಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ರಾಜ್ಯದಲ್ಲೇ ಮೊದಲ ಬಾರಿಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದರ ಜತೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಎರಡನೇ ಅಲೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಮೊದಲನೇ ಅಲೆಗಿಂತ ಎರಡನೇ ಅಲೆ ಹೆಚ್ಚು ಭೀಕರತೆ ಸೃಷ್ಟಿಸಿದ್ದು, ಸಾಕಷ್ಟು ಸಾವು-ನೋವುಗಳು ಸಂಭವಿಸುವುದರ ಜತೆಗೆ ಜನಸಾಮಾನ್ಯರಲ್ಲಿ ಭಯ, ಆತಂಕವನ್ನು ಮೂಡಿಸಿತು.
ಮೇ ತಿಂಗಳಲ್ಲಿ ಸೋಂಕು ಪತ್ತೆಯಲ್ಲಿ ರಾಜ್ಯದಲ್ಲೇ ಬಳ್ಳಾರಿ/ ವಿಜಯನಗರ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿದ್ದು, ಸಾವಿನ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಇಷ್ಟೆಲ್ಲ ಭೀಕರತೆಯನ್ನು ಸೃಷ್ಟಿಸಿದ್ದ ಕೋವಿಡ್ ಎರಡನೇ ಅಲೆ ಕಳೆದ ಒಂದು ತಿಂಗಳಿಂದ ನಿಯಂತ್ರಣಕ್ಕೆ ಬರುತ್ತಿದೆ. ಸೋಂಕು ಪತ್ತೆಯಲ್ಲಿ ಬಹುತೇಕ ಕಡಿಮೆಯಾಗಿದ್ದು, ಕಳೆದ ಎರಡೂ¾ರು ದಿನಗಳಿಂದ ಸಾವಿನ ಸಂಖ್ಯೆಯೂ ಶೂನ್ಯಕ್ಕೆ ಇಳಿದಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕುಸಿದಿದೆ. ಪರಿಣಾಮ ಉಭಯ ಜಿಲ್ಲೆಗಳ ಜನರು ಸಹ ಒಂದಷ್ಟು ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ, ಎಲ್ಲೆಡೆ ಚರ್ಚೆಯಾಗುತ್ತಿರುವ ಮೂರನೇ ಅಲೆಯ ಆವರಿಸುವ ಆತಂಕ ಮಕ್ಕಳ ಪೋಷಕರನ್ನು ಕಾಡುತ್ತಿದ್ದು, ಇದನ್ನು ಸಮರ್ಥವಾಗಿ ಎದುರಿಸಲು ವಿಮ್ಸ್ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ನರ್ಸ್‌ಗಳಿಗೆ ತರಬೇತಿ: ಮೂರನೇ ಅಲೆ ಹೆಚ್ಚಾಗಿ ಮಕ್ಕಳಿಗೆ ಆವರಿಸಲಿದೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಹಾಗಾಗಿ ಸೋಂಕಿತ ಮಕ್ಕಳು ತೀವ್ರ ನಿಗಾಘಟಕದಲ್ಲಿ (ಐಸಿಯು) ಕಾರ್ಯನಿರ್ವಹಿಸುವ ನರ್ಸ್‌ಗಳಿಗೆ ವಿಮ್ಸ್‌ನಲ್ಲಿ ತರಬೇತಿ ನೀಡಲಾಗುತ್ತಿದೆ.
ಉಭಯ ಜಿಲ್ಲೆಗಳ ಎಲ್ಲ ತಾಲೂಕು ಆಸ್ಪತ್ರೆ, ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿನ ನರ್ಸ್‌ಗಳು ತರಬೇತಿ ಪಡೆಯುತ್ತಿದ್ದಾರೆ. 50 ನರ್ಸ್‌ಗಳುಳ್ಳ ಒಟ್ಟು 6 ಗುಂಪುಗಳನ್ನು ರಚನೆ ಮಾಡಲಾಗಿದೆ. ಮೊದಲ 50 ನರ್ಸ್‌ಗಳ ಗುಂಪಿಗೆ ಈಗಾಗಲೇ ತರಬೇತಿ ಕಾರ್ಯ ಆರಂಭವಾಗಿದ್ದು, ಮಕ್ಕಳ ತಜ್ಞರು, ಅರವಳಿಕೆ ತಜ್ಞರು ತರಬೇತಿ ನೀಡುತ್ತಿದ್ದಾರೆ.
ಐಸಿಯು ವಾರ್ಡ್‌ಗಳಲ್ಲಿ ದಾಖಲಾಗುವ ಸೋಂಕಿತ ಮಕ್ಕಳಿಗೆ ಆಕ್ಸಿಜನ್ ಹೇಗೆ ಅಳವಡಿಸಬೇಕು? ಔಷಧ ಹೇಗೆ ನೀಡಬೇಕು? ಮಕ್ಕಳೊಂದಿಗೆ ಐಸಿಯು ವಾರ್ಡ್‌ಗೆ ಬರುವ ಪೋಷಕರಲ್ಲಿ ಭಯ, ಆತಂಕಕ್ಕೊಳಗಾಗುವ ಸಾಧ್ಯತೆಯಿದ್ದು, ಅಂಥವರಿಗೆ ಕೌನ್ಸೆಲಿಂಗ್ ಮಾಡುವ ಮೂಲಕ ಅವರಲ್ಲಿನ ಭಯ, ಆತಂಕವನ್ನು ದೂರ ಮಾಡುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ತರಬೇತಿಯಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ತಿಳಿಸಿದರು.
ಮಕ್ಕಳ ವೆಂಟಿಲೇಟರ್ ಸಿದ್ಧತೆ: ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ಈಗಾಗಲೇ ಅಗತ್ಯ ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗಾಗಿ ಪ್ರತ್ಯೇಕ ಪೀಡಿಯಾಟ್ರಿಕ್ ವೆಂಟಿಲೇಟರ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜತೆಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ.
ಸೋಂಕಿತ ಮಕ್ಕಳೊಂದಿಗೆ ತಾಯಂದಿರೂ ಇರುತ್ತಾರೆ. ಅವರನ್ನು ಹೇಗೆ ಆರೈಕೆ ಮಾಡಬೇಕು ಎಂಬುದರ ಕುರಿತು ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲೇ ಮೊದಲು: ಕೋವಿಡ್ ಸೋಂಕು ಎರಡನೇ ಅಲೆಯಿಂದ ಸಾಕಷ್ಟು ಅನುಭವ ಆಗಿರುವ ಹಿನ್ನೆಲೆಯಲ್ಲಿ ಮೂರನೇ ಅಲೆಗೂ ಮುನ್ನ ಎಚ್ಚೆತ್ತುಕೊಂಡಿರುವ ವಿಮ್ಸ್, ಜಿಲ್ಲಾಡಳಿತ, ಆರೋಗ್ಯ ಇಲಾಖೆ ರಾಜ್ಯದಲ್ಲೇ ಮೊದಲ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಐಸಿಯುನಲ್ಲಿ ಕಾರ್ಯನಿರ್ವಹಿಸುವ ಸ್ಟಾಫ್ ನರ್ಸ್‌ಗಳಿಗೆ ತರಬೇತಿ ನೀಡಲಾಗುತ್ತಿದೆ.
ಬಳ್ಳಾರಿಯಲ್ಲಿ ಯಶಸ್ವಿಯಾದಲ್ಲಿ ರಾಜ್ಯವ್ಯಾಪಿ ವಿಸ್ತರಿಸುವ ಸಾಧ್ಯತೆಯಿದೆ. ಕೋವಿಡ್ ಮೊದಲ ಅಲೆ ಅನುಭವವಾಗಿದ್ದರೂ, ಎರಡನೇ ಅಲೆಯಲ್ಲಿ ಆಕ್ಸೀಜನ್, ವೆಂಟಿಲೇಟರ್, ಬೆಡ್‌ಗಳ ಕೊರತೆಗಳಿಂದ ಸಾಕಷ್ಟು ಸಾವು-ನೋವು ಸಂಭವಿಸಿತು. ಇದೀಗ ಮೂರನೇ ಅಲೆ ಆವರಿಸುವುದಕ್ಕೂ ಮುಂಜಾಗ್ರತೆ ವಹಿಸಿಕೊಂಡರೂ ಎಷ್ಟರ ಮಟ್ಟಿಗೆ ನಿಯಂತ್ರಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.