ಬಾಗೇವಾಡಿ ಕಾಲುವೆ ಕೊನೆಯಂಚಿನ ರೈತರಿಗೂ ನೀರು

Team Udayavani, Jul 14, 2021, 9:16 PM IST

Udayavani Kannada Newspaper

ಸಿರುಗುಪ್ಪ: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುವುದು. ತಾಲೂಕಿನ ಬಾಗೇವಾಡಿ ಕಾಲುವೆಯ ಕೊನೆಯಂಚಿನ ರೈತರಿಗೂ ನೀರು ಮುಟ್ಟಿಸಲು ಪ್ರತಿಯೊಬ್ಬ ಅಧಿ  ಕಾರಿಯೂ ಮುತುವರ್ಜಿವಹಿಸಿ ಕಾರ್ಯನಿರ್ವಹಿಸಬೇಕೆಂದು ತಹಶೀಲ್ದಾರ್‌ ಮಂಜುನಾಥ ತಿಳಿಸಿದರು.

ನಗರದ ತಾಲೂಕು ಕಚೇರಿಯಲ್ಲಿ ಬಾಗೇವಾಡಿ ಕಾಲುವೆ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕಾಲುವೆಗೆ ನೀರು ಬಿಡುತ್ತಿದ್ದಂತೆ ಕೃಷಿ ಚಟುವಟಿಕೆ ಆರಂಭವಾಗುತ್ತವೆ. ಕಾಲುವೆ ಮೇಲ್ಭಾಗದ ರೈತರು ನೀರನ್ನು ಬಳಸಿಕೊಂಡು ಕೃಷಿ ಚಟುವಟಿಕೆ ಪ್ರಾರಂಭಿಸುತ್ತಾರೆ. ಆದರೆ ಕಾಲುವೆ ಕೊನೆಯಂಚಿನ ರೈತರಿಗೆ ನೀರು ಸಿಕ್ಕರೆ ಅವರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸಿ ರೈತರ ಜಮೀನುಗಳಿಗೆ ನೀರು ಮುಟ್ಟಿಸುವ ಕಾರ್ಯವನ್ನು ಮಾಡಬೇಕೆಂದು ಸೂಚಿಸಿದರು. ಬಾಗೇವಾಡಿ ಕಾಲುವೆ ಅಕ್ಕಪಕ್ಕದಲ್ಲಿ ಅಕ್ರಮವಾಗಿ ನೀರು ಹರಿಸಲು ಹಾಕಲಾಗಿದ್ದ ಪೈಪ್‌ಲೈನ್‌ಗಳನ್ನು ತೆರವು ಮಾಡಲಾಗಿದೆ.

ಕಾಲುವೆಯಲ್ಲಿ ನೀರು ಹರಿಯಲು ಸುಗಮವಾಗುವಂತೆ ಕಾಲುವೆಯಲ್ಲಿ ಬಿದ್ದಿರುವ ಮಣ್ಣು ಮತ್ತಿತರ ವಸ್ತುಗಳನ್ನು ಮೂರು ಜೆಸಿಬಿಗಳ ಮೂಲಕ ತೆರವು ಮಾಡುವ ಕಾರ್ಯ ಪ್ರಾರಂಭಿಸಿದ್ದೇವೆ ಎಂದು ನೀರಾವರಿ ಇಲಾಖೆಯ ಪ್ರಭಾರಿ ಎಇಇ ಹನುಮಂತಪ್ಪ ತಿಳಿಸಿದರು. ಕಾಲುವೆಗೆ ನೀರು ಬಿಡುತ್ತಿದ್ದಂತೆ ಸೈಫನ್‌ ಪೈಪ್‌ಗ್ಳ ಮೂಲಕ ಕೆಲವು ರೈತರು ಅಕ್ರಮವಾಗಿ ನೀರನ್ನು ಬಳಕೆ ಮಾಡಿಕೊಂಡು ಬೆಳೆ ಬೆಳೆಯುತ್ತಾರೆ.

ಆದ್ದರಿಂದ ಕಾಲುವೆ ಅಂಚಿನಲ್ಲಿ ಸೈಫನ್‌ ಪೈಪ್‌ಗ್ಳ ಮೂಲಕ ನೀರು ಹರಿಸುವವರ ಮೇಲೆ ನಿಗಾವಹಿಸಬೇಕು. ನೀರಾವರಿ ಇಲಾಖೆ ಮತ್ತು ನಮ್ಮ ಇಲಾಖೆಯ ಅ ಕಾರಿಗಳು ಕಾಲುವೆ ಮೇಲೆ ನಿರಂತರ ಗಸ್ತು ತಿರುಗಿದರೆ ಮಾತ್ರ ಕಾಲುವೆ ಕೊನೆಯಂಚಿನ ರೈತರ ಹೊಲಗಳಿಗೆ ನೀರು ಹರಿಯಲು ಸಾಧ್ಯವಾಗುತ್ತದೆ ಎಂದು ಸಿಪಿಐಗಳಾದ ಕಾಳಿಕೃಷ್ಣ ಮತ್ತು ಟಿ.ಆರ್‌. ಪವಾರ್‌ ತಹಶೀಲ್ದಾರ್‌ ಗಮನಕ್ಕೆ ತಂದರು.

ಪೊಲೀಸರು ಮತ್ತು ನೀರಾವರಿ ಇಲಾಖೆ ಅಧಿ ಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ರೈತರು ತಾಲೂಕು ಕಚೇರಿ ಹತ್ತಿರ ಬರದಂತೆ ಅವರ ಜಮೀನುಗಳಿಗೆ ನೀರು ಹರಿಸಲು ಸೂಕ್ತ ಬಂದೋಬಸ್ತ್ನಲ್ಲಿ ಗಸ್ತು ತಿರುಗಬೇಕೆಂದು ತಹಶೀಲ್ದಾರ್‌ರು ಪೊಲೀಸರು ಮತ್ತು ನೀರಾವರಿ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು.

ಸಿಪಿಐಗಳಾದ ಟಿ.ಆರ್‌. ಪವಾರ್‌, ಕಾಳಿಕೃಷ್ಣ, ಜೆಸ್ಕಾಂ ಎಇಇ ಶ್ರೀನಿವಾಸರಾವ್‌, ಕಂದಾಯ ಅಧಿಕಾರಿಗಳಾದ ಮಂಜುನಾಥ, ಬಸವರಾಜ, ಶೆûಾವಲಿ, ಶಿರಸ್ತೇದಾರ ಬಿ.ಎನ್‌ .ಬಾಬು, ವಿ.ಬಿ.ಪಾಟೀಲ್‌, ಪರಶುರಾಮ, ಗ್ರಾಮಲೆಕ್ಕಾಧಿ ಕಾರಿ ವಿರುಪಾಕ್ಷಪ್ಪ, ನೀರಾವರಿ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.