ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹ
ಹೂವಿನಹಡಗಲಿ: ಮೈಲಾರ ಗ್ರಾಮದಲ್ಲಿ ಅಕ್ರಮ ಮದ್ಯಮಾರಾಟ ತಡೆಗೆ ಒತ್ತಾಯಿಸಿ ಮಹಿಳೆಯರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದರು
Team Udayavani, Jan 27, 2021, 5:39 PM IST
ಹೂವಿನಹಡಗಲಿ: ಸುಕ್ಷೇತ್ರ ಮೈಲಾರ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟವನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮೈಲಾರ ಗ್ರಾಮದ ಮಹಿಳೆಯರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮೈಲಾರ ಗ್ರಾಮ ಕರ್ನಾಟಕದ ಇತಿಹಾಸ ಪ್ರಸಿದ್ಧವಾದ ಕ್ಷೇತ್ರವಾಗಿದ್ದು ಈ ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು. ಇನ್ನೂ ತಾಲೂಕಿನಲ್ಲಿ ಬೆಳೆ ಪರಿಹಾರ ಸಮರ್ಪಕವಾಗಿ ನೀಡಿಲ್ಲ. ತಾಲೂಕಿನಲ್ಲಿ ಈ ಹಿಂದೆ ಮಳೆಯಿಂದಾಗಿ ಕುಸಿತ ಕಂಡಂತಹ ಮನೆಗಳಿಗೆ ಪರಿಹಾರ ಹಣ ಹಾಕಿಲ್ಲ. ತಾಲೂಕಿನ ಸಬ್‌ರಿಜಿಸ್ಟರ್, ಇತರೆ ಇಲಾಖೆಯಲ್ಲಿ ಲಂಚದ ಹಾವಳಿ ಹೆಚ್ಚಾಗಿದೆ. ಈ ಕೂಡಲೇ ಲಂಚಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಡಿಳ್ಳೆಪ್ಪ, ತಾಲೂಕು ಅಧ್ಯಕ್ಷ ಪಾಲಾಕ್ಷ ಗೌಡ್, ಕುಮಾರ್, ಲಕ್ಷ್ಮಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.