ನದಿತೀರದ ಜನರ ನೆರವಿಗೆ ಧಾವಿಸಿ: ಸಿಎಂ
Team Udayavani, Jul 21, 2021, 6:12 PM IST
ಬಳ್ಳಾರಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ನದಿ ತೀರದ ಗ್ರಾಮಗಳ ಜನರ ನೆರವಿಗೆ ಅಧಿ ಕಾರಿಗಳು ಧಾವಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲಾ ಧಿಕಾರಿಗಳಿಗೆ ಸೂಚಿಸಿದರು.
ಕಳೆದ ಹಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಮತ್ತು ಪರಿಹಾರ ಕುರಿತು ರಾಜ್ಯದ 12 ಜಿಲ್ಲೆಯ ಜಿಲ್ಲಾ ಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಗಳ ಜೊತೆಗೆ ಗೃಹ ಕಚೇರಿ ಕೃಷ್ಣಾದಿಂದ ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಪ್ರತಿವರ್ಷ ಎದುರಾಗುವ ಮಳೆ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಾಗುತ್ತಿದೆ. ಈ ವರ್ಷವು ಕೂಡ ಎಲ್ಲ ರೀತಿಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕು.
ಮಳೆ ಹೆಚ್ಚಾದಾಗ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರುತಿಸಿ ಅಂಥ ಗ್ರಾಮಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಪ್ರವಾಹದಿಂದ ನಷ್ಟ ಅನುಭವಿಸಿದವರಿಗೆ ಯಾವುದೇ ರೀತಿಯ ನಿರ್ಲಕ್ಷé ತೋರದೆ ಶೀಘ್ರವಾಗಿ ಪರಿಹಾರ ನೀಡಬೇಕು. ಯಾವುದೇ ಕಾಮಗಾರಿ ಕೆಲಸಗಳನ್ನು ಅರ್ಧಕ್ಕೆ ನಿಲ್ಲಿಸಬಾರದು. ಹಣದ ಕೊರತೆಯಿದ್ದರೆ ನಮ್ಮ ಗಮನಕ್ಕೆ ತರಬೇಕು. ಅವಶ್ಯಕತೆಯಿರುವ ಕಡೆ ಆದಷ್ಟು ಬೇಗ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.
ಬಳ್ಳಾರಿ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಮಾತನಾಡಿ, ಜಿಲ್ಲೆಯಲ್ಲಿ ಹತ್ತು ದಿನಗಳ ಹಿಂದೆ ಸುರಿದ ಮಳೆಗೆ ಹಡಗಲಿಯಲ್ಲಿ ಇಬ್ಬರು ನದಿಗೆ ಕೊಚ್ಚಿ ಹೋಗಿದ್ದು, ಒಬ್ಬರಿಗೆ 5 ಲಕ್ಷ ರೂಗಳಂತೆ ಈಗಾಗಲೇ ಇಬ್ಬರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. 9 ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಅವುಗಳಿಗೆ ಸಂಬಂಧಿ ಸಿದಂತೆಯೂ ಪರಿಹಾರ ಒದಗಿಸುವ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಜೂನ್‌ನಿಂದ ಇಲ್ಲಿವರೆಗೆ ವಾಡಿಕೆಗಿಂತ ಶೇ. 60ರಷ್ಟು ಜಾಸ್ತಿ ಮಳೆಯಾಗಿದ್ದು, ಅಪಾರ ಮಳೆಯಿಂದಾಗಿ ಇದುವರೆಗೆ 120 ಮನೆಗಳಿಗೆ ಹಾನಿಯಾಗಿದೆ. ಅವುಗಳಲ್ಲಿ 2 ಮನೆಗೆ ತೀವ್ರವಾಗಿ ಹಾನಿಯಾಗಿದೆ. ಹರಪನಹಳ್ಳಿ, ಹಡಗಲಿ ವ್ಯಾಪ್ತಿಯ ಹೆಚ್ಚಿನ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿವೆ.
ಮಳೆ ಸಮಯದಲ್ಲಿ ಬೀಳುವ ಹಂತದಲ್ಲಿರುವ ಮನೆಯ ಸದಸ್ಯರನ್ನು ಶಾಲೆ ಕೊಠಡಿಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದರು. ಪ್ರವಾಹ ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು ಯಾವುದೇ ರೀತಿಯ ಹಣದ ಕೊರತೆಯಿಲ್ಲ ಎಂದು ಅವರು ಸಿಎಂ ಅವರಿಗೆ ತಿಳಿಸಿದರು.
ಈ ಸಮಯದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಇತರೆ ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.